Home ಸುದ್ಧಿಗಳು ಪ್ರಾದೇಶಿಕ ಕುತ್ಪಾಡಿ: ನೂತನ ಅಂಗನವಾಡಿ ಉದ್ಘಾಟನೆ

ಕುತ್ಪಾಡಿ: ನೂತನ ಅಂಗನವಾಡಿ ಉದ್ಘಾಟನೆ

132
0

ಉಡುಪಿ, ಜೂ.28: ಕಡೆಕಾರ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುತ್ಪಾಡಿ ಪಡುಕರೆ ಭಾಗದಲ್ಲಿ ಸುಮಾರು 15 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಅಂಗನವಾಡಿ ಕಟ್ಟಡವನ್ನು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಮಕ್ಕಳ ವಿದ್ಯಾಭ್ಯಾಸಕ್ಕೆ ಅಡಿಪಾಯವಾಗಿ ಪ್ರಾಥಮಿಕ ಶಿಕ್ಷಣಕ್ಕೆ ಸಜ್ಜುಗೊಳ್ಳುವಲ್ಲಿ ಅಂಗನವಾಡಿ ಕೇಂದ್ರದ ಪಾತ್ರ ಮಹತ್ವದ್ದಾಗಿದ್ದು, ಪುಟಾಣಿ ಮಕ್ಕಳಿಗೆ ಪೌಷ್ಟಿಕಾಂಶಭರಿತ ಆಹಾರದ ಜೊತೆಗೆ ಗುಣಮಟ್ಟದ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಅಂಗನವಾಡಿ ಕೇಂದ್ರಗಳ ಅಭಿವೃದ್ಧಿಗೆ ಸದಾ ಸಹಕಾರ ನೀಡುವ ಆಶಯ ವ್ಯಕ್ತಪಡಿಸಿದರು.

ಮುಖ್ಯ ಅತಿಥಿಯಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕುಮಾರ್ ನಾಯ್ಕ್, ಗ್ರಾಮ ಪಂಚಾಯತ್ ಸದಸ್ಯರಾದ ಪ್ರವೀಣ್ ಮೆಂಡನ್, ವೇದಾವತಿ ರವಿ ಸುವರ್ಣ, ಬಾಲ ವಿಕಾಸ ಸಮಿತಿಯ ಅಧ್ಯಕ್ಷರಾದ ಪೂರ್ಣಿಮಾ, ಸ್ಥಳ ದಾನಿಗಳಾದ ಗಂಗಾಧರ ಸಾಲ್ಯಾನ್, ಸ್ಥಳೀಯರಾದ ಭುವನ್ ಪಡುಕರೆ, ಅಂಗನವಾಡಿ ಕಾರ್ಯರ್ತೆಯರು, ಪೋಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.