Monday, September 7, 2026
Monday, September 7, 2026

ಡ್ರಗ್ಸ್ ದಂಧೆ ವಿರುದ್ಧ ಕಠಿಣ ಕ್ರಮಕ್ಕೆ ಉಡುಪಿ ಜಿಲ್ಲಾ ಬಿಜೆಪಿ ಯುವಮೋರ್ಚಾ ಆಗ್ರಹ

ಡ್ರಗ್ಸ್ ದಂಧೆ ವಿರುದ್ಧ ಕಠಿಣ ಕ್ರಮಕ್ಕೆ ಉಡುಪಿ ಜಿಲ್ಲಾ ಬಿಜೆಪಿ ಯುವಮೋರ್ಚಾ ಆಗ್ರಹ

Date:

ಮಣಿಪಾಲ, ಜೂ.30: ಜಿಲ್ಲೆಯಲ್ಲಿ ಡ್ರಗ್ಸ್ ದಂಧೆಯ ವಿರುದ್ಧ ಸೂಕ್ತ ಕಾನೂನು ಕ್ರಮವನ್ನು ತೆಗೆದುಕೊಳ್ಳುವಂತೆ ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ವತಿಯಿಂದ ಮಣಿಪಾಲ ಪೊಲೀಸ್ ವೃತ್ತ ನಿರೀಕ್ಷಕರಿಗೆ ಮನವಿ ಸಲ್ಲಿಸಲಾಯಿತು. ಡ್ರಗ್ಸ್ ದಂಧೆಯ ವಿರುದ್ಧ ಅಹೋರಾತ್ರಿ ಪ್ರತಿಭಟನೆ ಮಾಡುವುದಾಗಿ ತಿಳಿಸಲಾಯಿತು. ಮನವಿ ಸ್ವೀಕರಿಸಿದ ಮಣಿಪಾಲ ಪೋಲಿಸ್ ವೃತ್ತ ನಿರೀಕ್ಷಕ ದೇವರಾಜ್ ಅವರು, ಈಗಾಗಲೇ ಪೊಲೀಸ್ ಇಲಾಖೆ ಡ್ರಗ್ಸ್ ದಂಧೆಯ ವಿರುದ್ಧ ಕ್ರಮ ಕೈಗೊಳ್ಳುತ್ತಿದೆ ಎಂದು ಹೇಳಿದರು. ಯುವಮೋರ್ಚಾ ಉಡುಪಿ ಜಿಲ್ಲಾಧ್ಯಕ್ಷರಾದ ಪ್ರಥ್ವೀರಾಜ್ ಶೆಟ್ಟಿ ಬಿಲ್ಲಾಡಿ, ರಾಜ್ಯ ಯುವ ಮೋರ್ಚಾ ಕಾರ್ಯದರ್ಶಿ ವಿಖ್ಯಾತ್ ಶೆಟ್ಟಿ, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಶಾಂಕ್ ಶಿವತ್ತಾಯ, ಅಭಿರಾಜ್ ಸುವರ್ಣ, ಜಿಲ್ಲಾ ಯುವಮೋರ್ಚಾ ಉಪಾಧ್ಯಕ್ಷ ಪ್ರಸಾದ್ ಬಿಲ್ಲವ, ಜಿಲ್ಲಾ ಕಾರ್ಯದರ್ಶಿ ಪ್ರದೀಪ್ ಕುಂದರ್, ಅಕ್ಷಿತ್ ಶೆಟ್ಟಿ ಹೆರ್ಗ, ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ಪೃಥ್ವಿರಾಜ್ ಮಣಿಪಾಲ, ದರ್ಶಿತ್ ಶೆಟ್ಟಿ, ಕಾಪು ಮಂಡಲ ಅಧ್ಯಕ್ಷರಾದ ಸೋನು ಪಾಂಗಾಳ, ಯುವ ಮೋರ್ಚಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಜ್ಞಾನದ ಕ್ತತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವವರೇ ಶಿಕ್ಷಕರು: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಸೆ.6: ಅಜ್ಞಾನದ ಕತ್ತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವ ವ್ಯಕ್ತಿಯೇ ಶಿಕ್ಷಕ....

ಸೆ. 9: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಸೆ.6: ನಗರದ ಕಲ್ಸಂಕ ಅಂಬಾಗಿಲು ರಸ್ತೆಯಲ್ಲಿರುವ ಸಾನ್ವಿ ಟ್ರೇರ‍್ಸ್ನಲ್ಲಿ ಸೆಪ್ಟೆಂಬರ್...

ಮಣಿಪಾಲ ಜ್ಞಾನಸುಧಾ: ಶಿಕ್ಷಕರ ದಿನಾಚರಣೆ; ನಿವೃತ್ತ ಶಿಕ್ಷಕರಿಗೆ ಸನ್ಮಾನ

ಮಣಿಪಾಲ, ಸೆ.6: ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ...

ಡಾ. ಪಾರ್ವತಿ ಜಿ. ಐತಾಳರ ಎರಡು ಕೃತಿಗಳ ಲೋಕಾರ್ಪಣೆ

ಕುಂದಾಪುರ, ಸೆ.3: ಸಣ್ಣ ಕಥೆಗಳು ಮನುಷ್ಯನ ಜೀವನದಲ್ಲಿ ಅವನನ್ನು ಗಾಢವಾಗಿ ತಟ್ಟುವ...
error: Content is protected !!