Home ಸುದ್ಧಿಗಳು ಪ್ರಾದೇಶಿಕ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ ಡಾ. ಆರತಿ ಕೃಷ್ಣ ಉಡುಪಿಗೆ ಭೇಟಿ

ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ ಡಾ. ಆರತಿ ಕೃಷ್ಣ ಉಡುಪಿಗೆ ಭೇಟಿ

158
0

ಉಡುಪಿ, ಜು.2: ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷರು, ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ ಡಾ. ಆರತಿ ಕೃಷ್ಣ ಅವರು ಉಡುಪಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆದು ಪ್ರಸಾದ ಸ್ವೀಕರಿಸಿದರು. ಮೊಗವೀರ ಸಮಾಜದ ಮುಂದಾಳು, ದೇವಸ್ಥಾನದ ಆಡಳಿತ ಮಂಡಳಿಯ ಮುಖ್ಯಸ್ಥ ಡಾ. ಜಿ ಶಂಕರ್ ಅವರು ಡಾ. ಆರತಿ ಕೃಷ್ಣ ಅವರಿಗೆ ಶಾಲು ಹೊದಿಸಿ ಗೌರವಿಸಿದರು. ನಂತರ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದು ಪ್ರಸಾದ ಸ್ವೀಕರಿಸಿ ಆಶೀರ್ವಾದ ಪಡೆದು ಶ್ರೀಕೃಷ್ಣನ ಅನ್ನ ಪ್ರಸಾದ ಸ್ವೀಕರಿಸಿದರು. ಗೀತಾ ಮಂದಿರದಲ್ಲಿ ಪುತ್ತಿಗೆ ಮಠದ ಪರ್ಯಾಯ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರಿಂದ ಪ್ರಸಾದ ಸ್ವೀಕರಿಸಿ ಆಶೀರ್ವಾದ ಪಡೆದರು.

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್, ಕಾಂಗ್ರೆಸ್ ಮುಖಂಡರಾದ ಗಣೇಶ್ ನೆರ್ಗಿ, ಶರತ್ ಶೆಟ್ಟಿ, ವಿಶ್ವಾಸ್ ಅಮೀನ್, ಸೌರಭ್ ಬಲ್ಲಾಳ್, ಸತೀಶ್ ಕುಮಾರ್ ಮಂಚಿ ಹಾಗೂ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.