Monday, January 20, 2025
Monday, January 20, 2025

ವಚನಗಳ ಸಂಗ್ರಹಣೆಯಲ್ಲಿ ಡಾ.ಫ.ಗು.ಹಳಕಟ್ಟಿಯವರ ಕೊಡುಗೆ ಅಪಾರ: ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್

ವಚನಗಳ ಸಂಗ್ರಹಣೆಯಲ್ಲಿ ಡಾ.ಫ.ಗು.ಹಳಕಟ್ಟಿಯವರ ಕೊಡುಗೆ ಅಪಾರ: ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್

Date:

ಉಡುಪಿ, ಜು.2: ಶರಣರ ವಚನಗಳನ್ನು ಸಂಗ್ರಹಿಸಿ, ತಮ್ಮ ಜೀವನವನ್ನೇ ಬಸವಾದಿ ಶರಣರ ವಚನಗಳನ್ನು ಪ್ರಚಾರ ಮಾಡಲು ಮುಡಿಪಾಗಿಟ್ಟು, ವಚನಗಳ ಕುರಿತು ಸಮಾಜದಲ್ಲಿ ಜಾಗೃತಿ ಮೂಡಿಸಿದ ವಚನ ಸಂಶೋಧನಾ ಪಿತಾಮಹ ಡಾ.ಫ.ಗು.ಹಳಕಟ್ಟಿಯವರ ಜನ್ಮ ದಿನವನ್ನು ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದೆ. ವಚನ ಸಂರಕ್ಷಣೆಯಲ್ಲಿ ಅವರ ಕೊಡುಗೆ ಅಪಾರ ಎಂದು ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಹೇಳಿದರು.
ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಡಾ.ಫ.ಗು.ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆಯನ್ನು ಉದ್ಘಾಟಿಸಿ, ಡಾ.ಫ.ಗು.ಹಳಕಟ್ಟಿಯವರ ಭಾವಚಿತ್ರಕ್ಕೆ ಪುಷ್ಫಾರ್ಚನೆ ಸಲ್ಲಿಸಿ ಮಾತನಾಡುತ್ತಿದ್ದರು.

ಡಾ.ಫ.ಗು.ಹಳಕಟ್ಟಿಯವರು ಪತ್ರಿಕೋದ್ಯಮ, ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ಅವರು, ಪ್ರತಿಯೊಂದು ಕ್ಷೇತ್ರಕ್ಕೂ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಯುವಜನತೆ ವಚನಗಳನ್ನು ಓದಿ, ಅವುಗಳಲ್ಲಿನ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಅವರ ಮಾರ್ಗದಲ್ಲಿ ನಾವೆಲ್ಲರೂ ಸಾಗೋಣ ಎಂದರು. ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಡಾ.ಫ.ಗು.ಹಳಕಟ್ಟಿಯವರ ಕುರಿತು ಉಪನ್ಯಾಸ ನೀಡಿ ಮಾತನಾಡಿ, ವಚನ ಸಾಹಿತ್ಯ ಸಂಗ್ರಹ ಮತ್ತು ವಚನಗಳ ಕೊಡುಗೆಯ ಮೂಲಕ ವ್ಯಕ್ತಿತ್ವ ವಿಕಸನ ಹಾಗೂ ಸಮಾಜಕ್ಕೆ ಉತ್ತಮ ಕೊಡುಗೆಯನ್ನು ನೀಡಿದ ಡಾ.ಫ.ಗು.ಹಳಕಟ್ಟಿ ಅವರು ಹಳ್ಳಿ ಹಳ್ಳಿಗಳನ್ನು ಸುತ್ತಿ ಓಲೆಗರಿಗಳಲ್ಲಿ ಬರೆದ ವಚನ ಸಾಹಿತ್ಯವನ್ನು ಸಂಗ್ರಹಿಸಿ ತಮ್ಮ ಸ್ವಂತ ಹಣದಿಂದ ಮುದ್ರಣ ಮಾಡುವುದರೊಂದಿಗೆ ಸಾರ್ವಜನಿಕರಿಗೆ ದೊರಕುವಂತೆ ಮಾಡಿದರು. ಜೀವನದ ಕೊನೆಯವರೆಗೂ ಬಡತನ, ಅನಾರೋಗ್ಯದಲ್ಲಿಯೇ, ಅತ್ಯಂತ ಸರಳ ಜೀವನ ಜೀವಿಸಿದ ಹಳಕಟ್ಟಿಯವರು ವಚನ ಸಾಹಿತ್ಯವನ್ನು ಸಂಗ್ರಹಿಸಿ, ವಿಶ್ಲೇಶಿಸಿ, ವರ್ಗಿಕರಿಸದೇ ಇದ್ದಲ್ಲಿ ಅಜ್ಞಾತವಾಗಿ ಉಳಿದಿದ್ದ ಕನ್ನಡದ ಅಮೂಲ್ಯ ವಚನ ಗ್ರಂಥ ಭಂಡಾರ ಇಂದು ವಿಶ್ವಕ್ಕೆ ಪರಿಚಯವಾಗುತ್ತಿರಲಿಲ್ಲ. ಇವರ ಸಾಧನೆಗೆ ಕರ್ನಾಟಕ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪ್ರಶಸ್ತಿ ಪ್ರಧಾನ ಮಾಡಿದ್ದು, ಸಮಾಜಕ್ಕೆ ಅವರು ನೀಡಿದ ಕೊಡುಗೆ ಅವಿಸ್ಮರಣೀಯವಾದುದು ಎಂದರು.

ಶರಣ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷ ಡಾ. ನಿರಂಜನ್, ಜನಪದ ವಿದ್ಯಾಂಸ ಪ್ರೊ. ಕೃಷ್ಣಯ್ಯ, ಕನ್ನಡ ರಕ್ಷಣಾ ವೇದಿಕೆಯ ಉಪಾಧ್ಯಕ್ಷ ಪ್ರಭಾಕರ ಪೂಜಾರಿ, ಕಾರ್ಮಿಕ ಅಧಿಕಾರಿ ಕುಮಾರ್, ಶರಣ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷ ಡಾ. ನಿರಂಜನ, ಕ.ಸಾ.ಪ ಕಾರ್ಯದರ್ಶಿ ನರಸಿಂಹಮೂರ್ತಿ, ಜಿಲ್ಲಾಡಳಿತದ ಸಿಬ್ಬಂದಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ ನಿರೂಪಿಸಿದರು. ಸಿದ್ಧಬಸಯ್ಯ ಸ್ವಾಮಿ ಚಿಕ್ಕಮಠ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!