Sunday, October 6, 2024
Sunday, October 6, 2024

ಪಹಣಿಗಳಿಗೆ ಆಧಾರ್ ಸೀಡಿಂಗ್ ಕಡ್ಡಾಯ

ಪಹಣಿಗಳಿಗೆ ಆಧಾರ್ ಸೀಡಿಂಗ್ ಕಡ್ಡಾಯ

Date:

ಉಡುಪಿ, ಜು.3: ರೈತರಿಗೆ ನಿಗದಿತ ಸಮಯದಲ್ಲಿ ಸರಕಾರದ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಅಧಾರ್ ಕಾಯ್ದೆಯ ಕಲಂ 4(4) (ಬಿ) (2) ರ ಅಡಿ ಪಹಣಿಗಳಿಗೆ ಆಧಾರ್ ಸೀಡಿಂಗ್ ಮಾಡಲು ಸರಕಾರದಿಂದ ಅನುಮತಿ ನೀಡಲಾಗಿದ್ದು, ರೈತರು ತಮ್ಮ ಜಮೀನಿನ ಪಹಣಿ ಹಾಗೂ ಆಧಾರ್ ದಾಖಲಾತಿಗಳೊಂದಿಗೆ ಸ್ವಯಂ ಪ್ರೇರಣೆಯಿಂದ ಇಲಾಖೆಯ ವೆಬ್‌ಸೈಟ್ https://landrecords.karnataka.gov.in/Service4 ನಲ್ಲಿ ಲಾಗಿನ್ ಮಾಡಿಕೊಂಡು ಆಧಾರ್‌ನೊಂದಿಗೆ ಲಿಂಕ್ ಮಾಡಿಕೊಳ್ಳಬಹುದಾಗಿದೆ ಅಥವಾ ಪಹಣಿ ಹಾಗೂ ಆಧಾರ್ ದಾಖಲಾತಿಗಳೊಂದಿಗೆ ಸಂಬಂಧಪಟ್ಟ ಗ್ರಾಮ ಆಡಳಿತಾಧಿಕಾರಿಯವರನ್ನು ಸಂಪರ್ಕಿಸಿ ಆಧಾರ್ ಜೋಡಣೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿರುತ್ತದೆ. ಪಹಣಿಯೊಂದಿಗೆ ಆಧಾರ್ ಜೋಡಣೆಗೆ ಜುಲೈ 31 ಕೊನೆಯ ದಿನವಾಗಿದ್ದು, ಸರಕಾರದ ಸೌಲಭ್ಯಗಳನ್ನು ಪಡೆದುಕೊಳ್ಳುವ ನಿಟ್ಟಿನಲ್ಲಿ ಹಾಗೂ ಸರಕಾರಿ ಸೌಲಭ್ಯದಿಂದ ವಂಚಿರಾಗಬಾರದೆಂಬ ಹಿನ್ನಲೆಯಲ್ಲಿ 2024 ರ ಜುಲೈ ಅಂತ್ಯದೊಳಗಾಗಿ ಕುಂದಾಪುರ ತಾಲೂಕಿನ ರೈತರು ಪಹಣಿಯೊಂದಿಗೆ ಆಧಾರ್ ಜೋಡಣೆ ಮಾಡಿಸಿಕೊಳ್ಳುವಂತೆ ಕುಂದಾಪುರ ತಹಶೀಲ್ದಾರರ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅ.9: ಮಣಿಪಾಲದಲ್ಲಿ ಮಿನಿ ಉದ್ಯೋಗ ಮೇಳ

ಉಡುಪಿ, ಅ.5: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಅಕ್ಟೋಬರ್...

ಉಚ್ಚಿಲ ದಸರಾ- ಚಿತ್ರ ಬಿಡಿಸುವ ಸ್ಪರ್ಧೆ

ಉಚ್ಚಿಲ, ಅ.5: ಕಳೆದ 3 ವರ್ಷಗಳಿಂದ ನಿರಂತರವಾಗಿ ಉಚ್ಚಿಲ ದಸರಾ ಮಹೋತ್ಸವ...

ಬ್ರಹ್ಮಗಿರಿ: ವನಮಹೋತ್ಸವ ಮತ್ತು ಸ್ವಚ್ಛತಾ ಕಾರ್ಯಕ್ರಮ

ಉಡುಪಿ, ಅ.5: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ, ಮಹಿಳಾ...

ವಿಕಲಚೇತನ ವ್ಯಕ್ತಿಗಳ ಆರೈಕೆದಾರರಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ

ಉಡುಪಿ, ಅ.5: ಪ್ರಸಕ್ತ ಸಾಲಿನಲ್ಲಿ ಸೆರೆಬ್ರಲ್ ಪಾಲ್ಸಿ, ಮಸ್ಕುಲರ್ ಡಿಸ್ಟೊಫಿ, ಪಾರ್ಕಿನ್ಸನ್...
error: Content is protected !!