Sunday, October 6, 2024
Sunday, October 6, 2024

ದಿವ್ಯಾಂಗರಿಗೆ ಮತ್ತು ಹಿರಿಯ ನಾಗರಿಕರಿಗೆ ಸಾಧನ ಸಲಕರಣೆಗಳ ವಿತರಣೆಗೆ ತಪಾಸಣಾ ಶಿಬಿರ

ದಿವ್ಯಾಂಗರಿಗೆ ಮತ್ತು ಹಿರಿಯ ನಾಗರಿಕರಿಗೆ ಸಾಧನ ಸಲಕರಣೆಗಳ ವಿತರಣೆಗೆ ತಪಾಸಣಾ ಶಿಬಿರ

Date:

ಉಡುಪಿ, ಜು. 5: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ, ಉಡುಪಿ (ಅನುಷ್ಠಾನ-ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ) ಹಾಗೂ ಕೃತಕ ಅಂಗಾಂಗ ತಯಾರಿಕ ಕಾರ್ಪೊರೇಷನ್ ಆಫ್ ಇಂಡಿಯಾ (ಅಲಿಂಕೋ) ಇವರ ಸಹಯೋಗದೊಂದಿಗೆ ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯದ ಎ.ಡಿ.ಐ.ಪಿ ಮತ್ತು ಆರ್.ವಿ.ವೈ ಯೋಜನೆಯಡಿಯಲ್ಲಿ ದಿವ್ಯಾಂಗ ವ್ಯಕ್ತಿಗಳಿಗೆ ಮತ್ತು ಹಿರಿಯ ನಾಗರಿಕರಿಗೆ ಸಾಧನ ಸಲಕರಣೆಗಳ ವಿತರಣೆಗಾಗಿ ತಪಾಸಣಾ ಶಿಬಿರವು ಜುಲೈ 10 ರಂದು ಉಡುಪಿಯ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಜು.11 ರಂದು ಬೈಂದೂರಿನ ಅಂಬೇಡ್ಕರ್ ಭವನ, ಜು. 12 ರಂದು ಕಾಪುವಿನ ಜೆ.ಸಿ ಭವನ, ಜು. 14 ರಂದು ಬ್ರಹ್ಮಾವರ ಪೊಲೀಸ್ ಠಾಣೆ ಬಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಜು. 15 ರಂದು ಕುಂದಾಪುರದ ಜೂನಿಯರ್ ಕಾಲೇಜು ಆವರಣ, ಜು. 16 ರಂದು ಹೆಬ್ರಿಯ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಜು. 18 ರಂದು ಕಾರ್ಕಳ ತಾಲೂಕು ಆಸ್ಪತ್ರೆಯಲ್ಲಿ ಬೆಳಗ್ಗೆ 9.30 ರಿಂದ ಸಂಜೆ 4.30 ರ ವರೆಗೆ ನಡೆಯಲಿದೆ.

ಅಡಿಪ್ ಯೋಜನೆಯಡಿ ವಿಕಲಚೇತನರು ಸಾಧನ ಸಲಕರಣೆಯ ಲಾಭವನ್ನು ಪಡೆಯಲು ವಿಕಲಚೇತನರ ವಿಶಿಷ್ಟ ಗುರುತಿನ ಚೀಟಿ (ಯು.ಡಿ.ಐ.ಡಿ), ಆಧಾರ್ ಕಾರ್ಡ್, ಬಿ.ಪಿ.ಎಲ್. ಕಾರ್ಡ್ ಅಥವಾ ವಾರ್ಷಿಕ ಆದಾಯ ರೂ2,70,000 ಮೀರದಿರುವ ಆದಾಯ ಪ್ರಮಾಣ ಪತ್ರ, ಪಾಸ್ ಪೋರ್ಟ್ ಸೈಜ್ ಪೋಟೋವನ್ನು ಸಲ್ಲಿಸಬೇಕು. ರಾಷ್ಟ್ರೀಯ ವಯೋಶ್ರೀ ಯೋಜನೆಯಡಿ ಹಿರಿಯ ನಾಗರಿಕರು ಸಾಧನ ಸಲಕರಣೆ ಪಡೆಯಲು ಹಿರಿಯ ನಾಗರಿಕರ ಗುರುತಿನ ಚೀಟಿ ಅಥವಾ ವಯೋಮಿತಿ ಸೂಚಿಸುವ ದಾಖಲಾತಿ, ಆಧಾರ್ ಕಾರ್ಡ್ , ಬಿ.ಪಿ.ಎಲ್. ಕಾರ್ಡ್ ಅಥವಾ ವಾರ್ಷಿಕ ಆದಾಯ ರೂ2,70,000 ಮೀರದಿರುವ ಆದಾಯ ಪ್ರಮಾಣ ಪತ್ರ, ಪಾಸ್ ಪೋರ್ಟ್ ಸೈಜ್ ಪೋಟೋವನ್ನು ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ರಜತಾದ್ರಿ, ಮಣಿಪಾಲ ದೂ.ಸಂಖ್ಯೆ:0820- 2574810, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ಅಜ್ಜರಕಾಡು, ಉಡುಪಿ ದೂ.ಸಂಖ್ಯೆ: 0820-2533372 ಹಾಗೂ ಉಡುಪಿ ಮೊ.ನಂ:9449334270, ಕುಂದಾಪುರ ಮೊ.ನಂ:9901824878 ಮತ್ತು ಕಾರ್ಕಳ ಮೊ.ನಂ:9741235518 ಎಂ.ಆರ್.ಡಬ್ಲ್ಯೂ ಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅ.9: ಮಣಿಪಾಲದಲ್ಲಿ ಮಿನಿ ಉದ್ಯೋಗ ಮೇಳ

ಉಡುಪಿ, ಅ.5: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಅಕ್ಟೋಬರ್...

ಉಚ್ಚಿಲ ದಸರಾ- ಚಿತ್ರ ಬಿಡಿಸುವ ಸ್ಪರ್ಧೆ

ಉಚ್ಚಿಲ, ಅ.5: ಕಳೆದ 3 ವರ್ಷಗಳಿಂದ ನಿರಂತರವಾಗಿ ಉಚ್ಚಿಲ ದಸರಾ ಮಹೋತ್ಸವ...

ಬ್ರಹ್ಮಗಿರಿ: ವನಮಹೋತ್ಸವ ಮತ್ತು ಸ್ವಚ್ಛತಾ ಕಾರ್ಯಕ್ರಮ

ಉಡುಪಿ, ಅ.5: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ, ಮಹಿಳಾ...

ವಿಕಲಚೇತನ ವ್ಯಕ್ತಿಗಳ ಆರೈಕೆದಾರರಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ

ಉಡುಪಿ, ಅ.5: ಪ್ರಸಕ್ತ ಸಾಲಿನಲ್ಲಿ ಸೆರೆಬ್ರಲ್ ಪಾಲ್ಸಿ, ಮಸ್ಕುಲರ್ ಡಿಸ್ಟೊಫಿ, ಪಾರ್ಕಿನ್ಸನ್...
error: Content is protected !!