ಉಡುಪಿ, ಜು.6: ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಆಸ್ತಿತೆರಿಗೆಯನ್ನು ಪರಿಣಾಮಕಾರಿಯಾಗಿ ಹೆಚ್ಚಿಸಲು ಹಾಗೂ ಸ್ವಯಂ ತೆರಿಗೆ ಪಾವತಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಪೌರಸಭೆಗಳ ಅಧಿನಿಯಮ 1964ರ ಕಲಂ 105(1) ರನ್ವಯ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ (ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತಿಗಳ) ಆರ್ಥಿಕ ವರ್ಷದ ಪ್ರಾರಂಭದ 30 ದಿನಗಳಲ್ಲಿ ಪೂರ್ಣ ಪ್ರಮಾಣದ ಆಸ್ತಿತೆರಿಗೆ ಪಾವತಿ ಮಾಡಿದಲ್ಲಿ ಶೇ. 5 ರಷ್ಟು ರಿಯಾಯಿತಿ ನೀಡಲು ಕಲ್ಪಿಸಿರುವ ಅವಕಾಶದ ಅವಧಿಯನ್ನು ಜುಲೈ 31 ರ ವರೆಗೆ ವಿಸ್ತರಿಸಿ ಸರ್ಕಾರವು ಆದೇಶ ಹೊರಡಿಸಿರುತ್ತದೆ. ಆದ್ದರಿಂದ ಉಡುಪಿ ನಗರಸಭಾ ವ್ಯಾಪ್ತಿಯ ಕಟ್ಟಡದ ಹಾಗೂ ಖಾಲಿ ನಿವೇಶನದ ಮಾಲೀಕರು ಪ್ರಸಕ್ತ ಸಾಲಿನ ತೆರಿಗೆಯನ್ನು ಜುಲೈ 31 ರವರೆಗೆ ವಿಸ್ತರಿಸಲಾಗಿರುವುದರಿಂದ ಸಾರ್ವಜನಿಕರು ನಿಗದಿತ ದಿನಾಂಕದ ಒಳಗೆ ತೆರಿಗೆ ಪಾವತಿಸಿ ಉಡುಪಿ ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.
ಆಸ್ತಿ ತೆರಿಗೆ ಪಾವತಿ: ಅವಧಿ ವಿಸ್ತರಣೆ
ಆಸ್ತಿ ತೆರಿಗೆ ಪಾವತಿ: ಅವಧಿ ವಿಸ್ತರಣೆ
Date: