Monday, November 25, 2024
Monday, November 25, 2024

ಜಿ. ಎಂ. ಗ್ಲೋಬಲ್ ಶಾಲೆ: ವಿದ್ಯಾರ್ಥಿ ಸಂಸತ್ತು ಉದ್ಘಾಟನೆ

ಜಿ. ಎಂ. ಗ್ಲೋಬಲ್ ಶಾಲೆ: ವಿದ್ಯಾರ್ಥಿ ಸಂಸತ್ತು ಉದ್ಘಾಟನೆ

Date:

ಬ್ರಹ್ಮಾವರ, ಜು.6: ಬ್ರಹ್ಮಾವರದ ಜಿ . ಎಂ. ಗ್ಲೋಬಲ್ ಶಾಲೆಯ ವಿದ್ಯಾರ್ಥಿ ಸಂಸತ್ತು ಉದ್ಘಾಟನಾ ಕಾರ್ಯಕ್ರಮ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತುತು. ಮುಖ್ಯ ಅತಿಥಿಗಳಾಗಿ ವಿ. ಆರ್. ಎ. ಸೋಲ್ಯೂಶನ್ ಮಂಗಳೂರು ಎಕ್ಸಿಕ್ಯೂಟಿವ್ ಡೈರೆಕ್ಟರ್ ಡಾ. ರೆನಾಲ್ಡೋ ಸೀಕ್ವೆರ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಸುಪ್ತವಾದ ಪ್ರತಿಭೆ ಅಡಗಿರುತ್ತದೆ. ಅವಕಾಶ ಇರುವಲ್ಲಿ ಅದನ್ನು ಬಳಸಿಕೊಂಡು ಪ್ರತಿಭೆಯನ್ನು ಹೊರ ಹಾಕಬೇಕು. ವಿದ್ಯಾರ್ಥಿ ಪರಿಷತ್ತಿನ ಮುಖಾಂತರ ನಾಯಕತ್ವ ಗುಣವನ್ನು ಬಾಲ್ಯದಲ್ಲಿಯೇ ಬೆಳಸಿಕೊಳ್ಳಲು ಅನುಕೂಲವಾಗುತ್ತದೆ. ವಸತಿನಿಲಯದ ವಿದ್ಯಾರ್ಥಿಗಳು ಅತ್ಯಂತ ಭಾವನಾತ್ಮಕ ಜೀವಿಗಳಾಗಿ ಬೆಳೆದು ಎಲ್ಲರೊಂದಿಗೆ ಹೊಂದಿಕೊಳ್ಳುವ, ಎಲ್ಲರಿಗೂ ಗೌರವ ನೀಡುವ ಗುಣವನ್ನು ವಿದ್ಯಾರ್ಥಿ ದೆಸೆಯಲ್ಲಿಯೇ ಕಂಡುಕೊಳ್ಳುತ್ತಾರೆ. ಆದ್ದರಿಂದ ಅವರು ಜೀವನದಲ್ಲೂ ಬಹುಬೇಗ ಇತರರೊಂದಿಗೆ ಹೊಂದಿಕೊಳ್ಳುತ್ತಾರೆ. ಜಿ. ಎಂ. ಗ್ಲೋಬಲ್ ಸ್ಕೂಲ್ ಆ ಎಲ್ಲಾ ಅವಕಾಶವನ್ನು ವಿದ್ಯಾರ್ಥಿಗಳಿಗೆ ಮಾಡಿಕೊಡುತ್ತಿದೆ ಎಂದರು. ವಿದ್ಯಾರ್ಥಿ ಪರಿಷತ್ತಿನ ಪದಾಧಿಕಾರಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿದರು.

ಜಿ. ಎಂ. ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ನ ಪ್ರಾಂಶುಪಾಲರಾದ ಜಾರ್ಜ್ ಕುರಿಯನ್ ಅವರು ಮಾತನಾಡಿ, ಜಿ.ಎಂ ಗ್ಲೋಬಲ್ ಸ್ಕೂಲ್ ನ ವಿದ್ಯಾರ್ಥಿ ಗಳು ಹಾಗೂ ಶಿಕ್ಷಕರು ಪ್ರತಿಭಾವಂತರು. ಇಲ್ಲಿನ ವಿದ್ಯಾರ್ಥಿ ಗಳ ಶಿಸ್ತು, ಒಗ್ಗಟ್ಟು, ಕಾರ್ಯದಕ್ಷತೆ ಕಂಡು ಬಹಳ ಸಂತೋಷವಾಯಿತು. ವಿದ್ಯಾರ್ಥಿ ಸಂಸತ್ತು ಒಂದು ವರ್ಷಗಳ ಕಾಲ ದಕ್ಷತೆಯಿಂದ ಕಾರ್ಯನಿರ್ವಹಿಸಲಿ ಎಂದು ಶುಭ ಹಾರೈಸಿದರು. ಗ್ಲೋಬಲ್ ಸ್ಕೂಲ್ ನ ಪ್ರಾಂಶುಪಾಲರಾದ ಪ್ರಣವ್ ಶೆಟ್ಟಿ ಅವರು ವಿದ್ಯಾರ್ಥಿ ಪರಿಷತ್ತಿನ ಚುನಾಯಿತ ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ಬೋಧಿಸಿ ಮಾತನಾಡಿ, ಪ್ರತಿಯೊಂದು ವಿದ್ಯಾರ್ಥಿಗಳು ಪಠ್ಯದ ಜೊತೆ ಪಠ್ಯೇತರ ಚಟುವಟಿಕೆಗಳಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು. ಪ್ರತಿಯೊಬ್ಬರೂ ವಿದ್ಯಾರ್ಥಿ ದೆಸೆಯಲ್ಲಿಯೇ ನಾಯಕತ್ವದ ಗುಣ ಬೆಳೆಸಿಕೊಂಡು ಭವ್ಯ ಭಾರತದ ದಿವ್ಯ ಪ್ರಜೆಗಳಾಗಬೇಕು ಎಂದರು.

ಜಿ. ಎಂ ಸಂಸ್ಥೆಯ ಸಂಸ್ಥಾಪಕರೂ, ಅಧ್ಯಕ್ಷರೂ ಆಗಿರುವ ಪ್ರಕಾಶ್ಚಂದ್ರ ಶೆಟ್ಟಿ ಮಾತನಾಡಿ, ಪೋಷಕರು ಹಾಗೂ ಶಿಕ್ಷಕರು ವಿದ್ಯಾರ್ಥಿಗಳ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿರುತ್ತಾರೆ. ಆ ನಿರೀಕ್ಷೆಗಳನ್ನು ಹುಸಿಗೊಳಿಸಿದೆ ಈಡೇರಿಸಿ ಅದರಿಂದ ಅವರು ಸಂತುಷ್ಟರಾಗುತ್ತಾರೆ. ಅದುವೇ ನಿಮಗೆ ಶ್ರೀರಕ್ಷೆ ಎಂದರು. ವಿದ್ಯಾರ್ಥಿ ನಾಯಕನಾಗಿ ಧಾನಿಶ್ ಗೌಡ, ವಿದ್ಯಾರ್ಥಿ ನಾಯಕಿಯಾಗಿ ಶ್ರೇಯಾ ಡಿ ಶೆಟ್ಟಿ ಆಯ್ಕೆಗೊಂಡರು. ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ಸಹಶಿಕ್ಷಕಿ ಪ್ರಿಯಾ ಸ್ವಾಗತಿಸಿ, ಸುಮನ್ ಧನ್ಯವಾದ ಸಲ್ಲಿಸಿದರು. ಸಹಶಿಕ್ಷಕಿ ಅವೆಲಿನ್, ವಿದ್ಯಾರ್ಥಿಗಳಾದ ಯಶವಂತ್ ಹಾಗೂ ಲೋಹಿತ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...

ತುಳು ಭಾವಗೀತೆ ಸ್ಪರ್ಧೆ

ಉಡುಪಿ, ನ.24: ತುಳುಕೂಟ ಉಡುಪಿ (ರಿ,) ವತಿಯಿಂದ ದಿ. ನಿಟ್ಟೂರು ಸಂಜೀವ...

ನ.28: ನರೇಂದ್ರ ಎಸ್ ಗಂಗೊಳ್ಳಿ ಅವರ ‘ನಿಭೃತ’ ಪತ್ತೇದಾರಿ ಕಾದಂಬರಿ ಬಿಡುಗಡೆ

ಉಡುಪಿ, ನ.23: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮತ್ತು...
error: Content is protected !!