Sunday, January 19, 2025
Sunday, January 19, 2025

ಪಂಚವರ್ಣ: ನಾಟಿ ಪ್ರಾತ್ಯಕ್ಷಿಕೆ

ಪಂಚವರ್ಣ: ನಾಟಿ ಪ್ರಾತ್ಯಕ್ಷಿಕೆ

Date:

ಕೋಟ, ಜು.7: ಪ್ರಸ್ತುತ ಕಾಲಘಟ್ಟದಲ್ಲಿ ಮರೆಯಾಗುತ್ತಿರುವ ಸಾಂಪ್ರದಾಯಿಕ ಭತ್ತದ ನಾಟಿಯ ಬಗ್ಗೆ ಪ್ರಾತ್ಯಕ್ಷಿಕೆ ಕಾರ್ಯಕ್ರಮ ಭಾನುವಾರ ಕೋಟತಟ್ಟು ಹಿರಿಯ ಕೃಷಿಕ ಶಿವಮೂರ್ತಿ ಉಪಾಧ್ಯ ಇವರ ಕೃಷಿ ಭೂಮಿಯಲ್ಲಿ ಹಮ್ಮಿಕೊಳ್ಳಲಾಯಿತು. ಕೋಟದ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಮಾತೃ ಸಂಸ್ಥೆ ಪಂಚವರ್ಣ ಯುವಕ ಮಂಡಲ ಕೋಟ ಇದರ ಮಾರ್ಗದರ್ಶನದಲ್ಲಿ ಕೋಟದ ರೈತ ಸಂಪರ್ಕ ಕೇಂದ್ರ ಇದರ ಸಹಯೋಗದೊಂದಿಗೆ ಕಾರ್ಯಕ್ರಮ ನಡೆಯಿತು. ಕೋಟದ ರೈತ ಸಂಪರ್ಕ ಕೇಂದ್ರದ ಅಧಿಕಾರಿ ಸುಪ್ರಭಾ ಚಾಲನೆ ನೀಡಿ ಮಾತನಾಡುತ್ತಾ, ಪ್ರಸ್ತುತ ಆಧುನಿಕತೆಯ ನಡುವೆ ಮರೆಯಾಗುತ್ತಿರುವ ಸಾಂಪ್ರದಾಯಿಕ ನಾಟಿ ಕಾರ್ಯದ ಮಹತ್ವವನ್ನು ಸಂಘಸಂಸ್ಥೆಗಳ ಮೂಲಕ ಪ್ರಚುರಪಡಿಸುತ್ತಿರುವ ಪಂಚವರ್ಣ ಮಹಿಳಾ ಮಂಡಲದ ಕಾರ್ಯ ಶ್ಲಾಘನೀಯ ಎಂದರು. ಕೋಟದ ರೈತಧ್ವನಿ ಸಂಘದ ಅಧ್ಯಕ್ಷ ಎಂ.ಜಯರಾಮ ಶೆಟ್ಟಿ ಮಾತನಾಡಿ, ಕೋಟತಟ್ಟು ಪರಿಸರದಲ್ಲಿ ಸಾಂಪ್ರದಾಯಿಕ ಕೃಷಿ ಪದ್ಧತಿಯನ್ನು ಪಸರಿಸಿದ ಕೀರ್ತಿ ಶಿವಮೂರ್ತಿ ಉಪಾಧ್ಯ ಇವರಿಗೆ ಸಲ್ಲುತ್ತದೆ. ಅಂತಯೇ ಪಂಚವರ್ಣ ಸಂಸ್ಥೆ ಸಾಮಾಜಿಕ ಕಾರ್ಯದ ನಡುವೆ ಕೃಷಿ ಕಾರ್ಯಕ್ರಮಕ್ಕೆ ಹೆಚ್ಚಿನ ಒಲವು ನೀಡುತ್ತಿರುವುದು ಅಭಿನಂದನೀಯ ಎಂದರು. ಸಭೆಯ ಅಧ್ಯಕ್ಷತೆಯನ್ನು ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ ವಹಿಸಿದ್ದರು. ಕೋಟತಟ್ಟು ಪಡುಕರೆ ಹಿರಿಯ ಕೃಷಿಕ ಶಿವಮೂರ್ತಿ ಉಪಾಧ್ಯಾ ಸಾಂಪ್ರದಾಯಿಕ ಕೃಷಿ ಪದ್ದತಿಯ ಕುರಿತು ಮಾತನಾಡಿದರು.

ಮುಖ್ಯ ಅಭ್ಯಾಗತರಾಗಿ ಕೋಟತಟ್ಟು ಗ್ರಾಮ ಪಂಚಾಯತ್ ಸದಸ್ಯರಾದ ರವೀಂದ್ರ ತಿಂಗಳಾಯ, ವಿದ್ಯಾ ಸಂದೇಶ್ ಸಾಲಿಯಾನ್, ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯ ಜಿಲ್ಲಾ ಸಂಯೋಜಕ ರವೀಂದ್ರ ಮೊಗವೀರ, ಪಂಚವರ್ಣ ಯುವಕ ಮಂಡಲದ ಸಂಚಾಲಕ ಅಮೃತ್ ಜೋಗಿ, ಪಂಚವರ್ಣ ಮಹಿಳಾ ಮಂಡದ ಗೌರವಾಧ್ಯಕ್ಷೆ ಕುಸುಮಾ ದೇವಾಡಿಗ, ಸ್ಥಾಪಕಾಧ್ಯಕ್ಷ ಸುರೇಶ್ ಗಾಣಿಗ ಉಪಸ್ಥಿತರಿದ್ದರು. ಪ್ರಾತ್ಯಕ್ಷಿಕೆಯಲ್ಲಿ ಬಹುಮುಖ್ಯವಾಗಿ ಗಣ್ಯರಿಗೆ ಭತ್ತದ ಅಗೆ ನೀಡಿ ಸ್ವಾಗತಿಸಲಾಯಿತು. ನಾಟಿ ಪ್ರಾತ್ಯಕ್ಷಿಕೆಯ ಆರಂಭದಲ್ಲಿ ಉತ್ಸಾಹದಿಂದ ಸ್ಥಳೀಯ ಕೃಷಿಕೂಲಿಯಾಳುಗಳೊಂದಿಗೆ ಪಂಚವರ್ಣ ಮಹಿಳೆಯರು ನಾಟಿ ಕಾರ್ಯ ಆರಂಭಿಸಿದರು.

ಸಾಂಪ್ರದಾಯಿಕ ನಾಟಿಯ ಭಾಗವಾಗಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಎಂ ಜಯರಾಮ ಶೆಟ್ಟಿ ಒಳಲ್ ಕರೆಯುವ ಮೂಲಕ ನಾಟಿ ಕಾರ್ಯಕ್ಕೆ ವೇಗ ನೀಡಿದರು. ಇವರೊಂದಿಗೆ ಸ್ಥಳೀಯ ಮಹಿಳಾ ಕೂಲಿಯಾಳುಗಳು ಪರಂಪರೆಯ ಹಿಂದಿನ ಕೃಷಿ ಹಾಡುಗಳನ್ನು ಹಾಡಿದರು. ಪಂಚವರ್ಣ ಮಹಿಳಾ ಮಂಡಲದ ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ಸ್ವಾಗತಿಸಿದರು. ಪಂಚವರ್ಣ ಮಹಿಳಾ ಮಂಡಲದ ಸಂಚಾಲಕಿ ಸುಜಾತ ಎಂ ಬಾಯರಿ ಪ್ರಾಸ್ತಾವಿಕವಾಗಿ ಮಾತನಾಡಿ ಕಾರ್ಯಕ್ರಮ ನಿರೂಪಿಸಿದರು. ಮಹಿಳಾ ಮಂಡಲದ ಪ್ರಧಾನ ಕಾರ್ಯದರ್ಶಿ ವಸಂತಿ ಹಂದಟ್ಟು ವಂದಿಸಿದರು. ಪಂಚವರ್ಣದ ಕಾರ್ಯಾಧ್ಯಕ್ಷ ರವೀಂದ್ರ ಕೋಟ ಕಾರ್ಯಕ್ರಮ ಸಂಯೋಜಿಸಿದರು. ಕಾರ್ಯದರ್ಶಿ ಸುಧೀಂದ್ರ ಜೋಗಿ, ಶಶಿಧರ ತಿಂಗಳಾಯ ಸಹಕರಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!