Monday, February 24, 2025
Monday, February 24, 2025

ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಿ: ಪೌರಾಯುಕ್ತ ರಾಯಪ್ಪ

ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಿ: ಪೌರಾಯುಕ್ತ ರಾಯಪ್ಪ

Date:

ಉಡುಪಿ, ಜು.10: ಅಂಗವೈಕಲ್ಯತೆಯನ್ನು ದುರ್ಬಲತೆ ಎಂದು ಭಾವಿಸದೇ ಸರ್ಕಾರದಿಂದ ದೊರಕುವ ಸೌಲಭ್ಯಗಳನ್ನು ಸದುಪಯೋಗವನ್ನು ಪಡೆದುಕೊಂಡು, ಪ್ರತಿಯೊಬ್ಬ ಫಲನುಭವಿಗಳು ತಮ್ಮ ಕೆಲಸಗಳಿಗಾಗಿ ಯಾರ ಮೇಲೂ ಅವಲಂಭಿತವಾಗದೇ ತಾವೇ ಕಾರ್ಯಗಳನ್ನು ನಿಭಾಯಿಸಲು ಶಕ್ತರಾಗಿ ಸಮಾಜಕ್ಕೆ ಮಾದರಿಯಾಗಬೇಕಿದೆ ಎಂದು ಪೌರಾಯುಕ್ತ ರಾಯಪ್ಪ ಹೇಳಿದರು. ಅವರು ಬುಧವಾರಎ ಉಡುಪಿಯ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ, ಉಡುಪಿ (ಅನುಷ್ಠಾನ-ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ) ಹಾಗೂ ಕೃತಕ ಅಂಗಾಂಗ ತಯಾರಿಕ ಕಾರ್ಪೊರೇಷನ್ ಆಫ್ ಇಂಡಿಯಾ (ಅಲಿಂಕೋ) ಇವರ ಸಂಯುಕ್ತ ಆಶ್ರಯದಲ್ಲಿ ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯದ ಎ.ಡಿ.ಐ.ಪಿ ಮತ್ತು ಆರ್.ವಿ.ವೈ ಯೋಜನೆಯಡಿಯಲ್ಲಿ ದಿವ್ಯಾಂಗ ವ್ಯಕ್ತಿಗಳಿಗೆ ಮತ್ತು ಹಿರಿಯ ನಾಗರಿಕರಿಗೆ ಸಾಧನ ಸಲಕರಣೆಗಳ ವಿತರಣೆಗಾಗಿ ನಡೆದ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಭಾರತ ಸರ್ಕಾರವು ದಿವ್ಯಾಂಗ ವ್ಯಕ್ತಿಗಳಿಗೆ ಹಾಗೂ ಹಿರಿಯ ನಾಗರಿಕರಿಕೆ ಅವಶ್ಯವಿರುವ ಕೃತಕ ಸಲಕರಣೆಗಳನ್ನು ತಯಾರಿಸಿ ನೀಡುವ ಉದ್ದೇಶದಿಂದ ಜಿಲ್ಲೆಯ ವಿವಿದೆಡೆ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದ್ದು, ಫಲನುಭಾವಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವುದರ ಮೂಲಕ ಸೌಲಭ್ಯವನ್ನು ಪಡೆದುಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿ ಬಸ್ರೂರು ರಾಜೀವ ಶೆಟ್ಟಿ, ವಿಶೇಷ ಚೇತನರಿಗೆ ಹಾಗೂ ದಿವ್ಯಾಂಗರಿಗೆ ಅನುಕಂಪದ ಅವಶ್ಯಕತೆ ಇರುವುದಿಲ್ಲ, ಅದರ ಹೊರತು ಅವರಿಗೆ ಉತ್ತಮ ಜೀವನ ನಡೆಸಲು ಬೇಕಾಗಿರುವ ಸೌಲಭ್ಯವನ್ನು ಕಲ್ಪಿಸುವ ಜವಾಬ್ದಾರಿ ಸಮಾಜದ ಮೇಲಿದ್ದು, ಸೌಲಭ್ಯಗಳ ಕುರಿತ ಮಾಹಿತಿಗಳು ಪ್ರತಿಯೊಬ್ಬ ಫಲನುಭವಿಗಳಿಗೂ ತಲುಪುವಂತಬೇಕು ಎಂದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರತ್ನ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸಾತ್ವಿಕ್, ಅಲಿಂಕೋದ ಜಿಗಿಶಾ, ಕೆ.ಎಂ.ಸಿಯ ವೈದ್ಯಾಧಿಕಾರಿ ಡಾ. ಪಾರ್ಥ್, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ರೆಡ್‌ಕ್ರಾಸ್ ಸಂಸ್ಥೆಯ ಸಿಬ್ಬಂದಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ರೆಡ್‌ಕ್ರಾಸ್‌ನ ಸದಸ್ಯ ಕಾರ್ಯದರ್ಶಿ ಡಾ.ಗಣನಾಥ ಶೆಟ್ಟಿ ಎಕ್ಕಾರು ಸ್ವಾಗತಿಸಿ ನಿರೂಪಿಸಿದರು.. ಎಮ್. ಮಧುಸೂದನ್ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!