Monday, February 9, 2026
Monday, February 9, 2026

ರೋಗಗಳು ಹರಡದಂತೆ ಸ್ವಚ್ಚತೆಯನ್ನು ಕಾಪಾಡಿ: ಡಾ. ಪ್ರಶಾಂತ್ ಭಟ್

ರೋಗಗಳು ಹರಡದಂತೆ ಸ್ವಚ್ಚತೆಯನ್ನು ಕಾಪಾಡಿ: ಡಾ. ಪ್ರಶಾಂತ್ ಭಟ್

Date:

ಉಡುಪಿ, ಜು.10: ಡೆಂಗೀಜ್ವರ, ಮಲೇರಿಯಾ ಜ್ವರ, ಮೆದುಳು ಜ್ವರ ಹರಡುವ ಆರೋಗ್ಯ ಮಾಹಿತಿ ನೀಡಿದ ಅವರು ಸೊಳ್ಳೆ ಉತ್ಪತ್ತಿ ಆಗುವ ತಾಣ ಹಾಗೂ ಉತ್ಪತ್ತಿ ಆಗದಂತೆ ತಡೆಗಟ್ಟುವ ಕುರಿತು ಮುಂಜಾಗೃತೆ ಕ್ರಮ ವಹಿಸಬೇಕು. ಆರೋಗ್ಯಮಂತ್ರಿಗಳು ಮತ್ತು ಆರೋಗ್ಯ ನಿರ್ದೇಶಾನಲಯ ಆದೇಶದಂತೆ ಪ್ರತಿ ಶುಕ್ರವಾರ ಡ್ರೈ ಡೇ ಮಾಡುವಂತೆ ಜಿಲ್ಲಾ ಮಲೇರಿಯಾ ಅಧಿಕಾರಿ ಡಾ. ಪ್ರಶಾಂತ್ ಭಟ್ ತಿಳಿಸಿದರು. ಅವರು ಬುಧವಾರ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮೀನುಗಾರರ ಸಹಕಾರ ಸಂಘದ ಸಭಾಂಗಣದಲ್ಲಿ ಬೋಟ್ ಮಾಲೀಕರು, ಮೀನುಗಾರರು, ಮಹಿಳಾ ಮೀನುಗಾರ ಸಂಘ, ಕೊಚ್ಚಿನ್ ಶಿಫ್ ಯಾರ್ಡ್ ಉಡುಪಿ ಹಾಗೂ ಬಂದರಿನ ಇರುವ ವಿವಿಧ ಇತರೆ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಡೆಂಗೀ, ಮಲೇರಿಯಾ, ಚಿಕುನ್ಯಗುನ್ಯಾ, ಮೆದುಳುಜ್ವರ ಹರಡುವ ಬಗ್ಗೆ ಮುಂಜಾಗ್ರತ ಕ್ರಮ ಕೈಗೊಳ್ಳುವ ಕುರಿತ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.

ಬೋಟ್ ಮಾಲೀಕರಿಗೆ ಬೋಟ್‌ನಲ್ಲಿ ಅಳವಡಿಸುವ ಟೈಯರ್‌ನಲ್ಲಿ ನೀರು ನಿಂತು ಸೊಳ್ಳೆ ಉತ್ಪತ್ತಿ ಆಗುವುದರಿಂದ ಟೈಯರ್ ಬದಲಿಗೆ ರೋಪ್ (ಹಗ್ಗ)ಅಳವಡಿಸಬೇಕು. ಬೋಟ್‌ನಲ್ಲಿ ಉಪಯೋಗಿಸುವ ಬ್ಯಾರೆಲ್‌ಗಳನ್ನು ಮಗುಚಿ ಹಾಕಬೇಕು ಮತ್ತು ಬಂದರಿನ ಸುತ್ತಮುತ್ತ ನೀರು ನಿಲ್ಲದಂತೆ ಬಂದರಿನ ಪರಿಸರ ಸ್ವಚ್ಛತೆಯನ್ನು ಕಾಪಾಡಬೇಕು ಎಂದರು. ಒಳನಾಡು ಮತ್ತು ಬಂದರು ಇಲಾಖೆಗೆ ಸಂಬಂಧಪಟ್ಟಂತಹ ಜಾಗದಲ್ಲಿ ಒಣಮೀನು ತಯಾರಿಸುವ ಸಿಮೆಂಟ್ ತೊಟ್ಟಿಗಳಿಗೆ ಮುಚ್ಚಳ ಅಥವಾ ತಾಡಪಲ್ ಅಳವಡಿಸುವಂತೆ ಮಹಿಳಾ ಮೀನುಗಾರರಿಗೆ ತಿಳಿಸಿದರು. ಸಭೆಯಲ್ಲಿ ಮೀನುಗಾರರ ಸಹಕಾರ ಸಂಘದ ಅಧ್ಯಕ್ಷ ದಯಾನಂದ ಸುವರ್ಣ ಮಾತನಾಡಿ, 90%ರಷ್ಟು ಭಾಗ ಬೋಟ್‌ಗಳಿಗೆ ಟೈಯರ್ ತೆಗೆದು ರೋಪ್ ಹಾಕಿದ್ದು, ಇನ್ನೂ ಉಳಿದ ಬೋಟ್‌ಗಳಿಗೂ ರೋಪ್ ಅಳವಡಿಸುವಂತೆ ಸಂಘದ ಮುಖಾಂತರ ಮಾಲೀಕರಿಗೆ ಮಾಹಿತಿ ನೀಡಲಾಗುವುದು ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪೌರಯುಕ್ತ ರಾಯಪ್ಪ ವಹಿಸಿದರು. ಮೀನುಗಾರಿಕೆ ಜಂಟಿ ನಿರ್ದೇಶಕ ವಿವೇಕ್, ಮೀನುಗಾರಿಕೆ ಉಪನಿರ್ದೇಶಕ ಸವಿತಾ ಖಾದ್ರಿ ಎಸ್ ಕೆ., ಮೀನುಗಾರರ ಸಹಕಾರ ಸಂಘದ ಅಧ್ಯಕ್ಷ ದಯಾನಂದ ಸುವರ್ಣ, ಮಲ್ಪೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈಧ್ಯಾಕಾರಿ ಡಾ. ಜೇಷ್ಮಾ, ಆರೋಗ್ಯ ನಿರೀಕ್ಷಣಾಧಿಕಾರಿ ಮಂಜುನಾಥ ಏನ್, ವಿವಿಧ ಸಂಘಗಳ ಪದಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ಜಿಲ್ಲೆಗೆ ಪ್ರವಾಸಿ ಮಾರ್ಗದರ್ಶಿಗಳ ಅಗತ್ಯವಿದೆ: ಅಜಯ್ ಪಿ ಶೆಟ್ಟಿ

ಉಡುಪಿ, ಫೆ.9: ಉಡುಪಿ ಜಿಲ್ಲೆಯು ಜಾಗತಿಕ ಮಟ್ಟದಲ್ಲಿ ತನ್ನದೇ ಆದ ಗುರುತನ್ನು...

ಶ್ರೀಕೃಷ್ಣ ಮಠಕ್ಕೆ ಚಿತ್ರಾಪುರ ಮಠಾಧೀಶರ ಭೇಟಿ

ಉಡುಪಿ, ಫೆ.9: ಪರ್ಯಾಯ ಶೀರೂರು ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಶ್ರೀ...

ಸಮಸ್ಯಾತ್ಮಕ ನಡವಳಿಕೆಯ ಹಿಂದೆ ಮೌನವಾಗಿ ಅಡಗಿರುವ ಮುಖ

ಐದನೇ ತರಗತಿಯಲ್ಲಿ ಓದುತ್ತಿದ್ದ ರಾಹುಲ್ ಇತ್ತೀಚಿನ ದಿನಗಳಲ್ಲಿ ಕಲಿಕೆಯತ್ತ ಅನಾಸಕ್ತಿ ತೋರಿಸುತ್ತಿದ್ದ....

ವಿದ್ಯಾರ್ಥಿ ಜೀವನದಲ್ಲಿಯೇ ಶಿಕ್ಷಣದ ಜೊತೆ ಆರೋಗ್ಯದ ಬಗ್ಗೆಯೂ ವಿಶೇಷ ಕಾಳಜಿ ಇರಲಿ: ಡಾ. ಶ್ರುತಿ ಬಲ್ಲಾಳ್

ಉಡುಪಿ, ಫೆ.9: ವಿದ್ಯಾರ್ಥಿ ಜೀವನದಲ್ಲಿಯೇ ಶಿಕ್ಷಣದ ಜೊತೆ ಜೊತೆಗೆ ಶಿಸ್ತು ಬದ್ಧ...
error: Content is protected !!