Monday, February 9, 2026
Monday, February 9, 2026

ಬ್ರಹ್ಮಾವರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ: ಪತ್ರಿಕಾ ದಿನಾಚರಣೆ

ಬ್ರಹ್ಮಾವರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ: ಪತ್ರಿಕಾ ದಿನಾಚರಣೆ

Date:

ಕೋಟ, ಜು.10: ಮಾಧ್ಯಮ ಎನ್ನುವುದು ಒಂದು ಸಂವಹನ ಕ್ಷೇತ್ರ. ಅದು ಸಾಕಷ್ಟು ಬದಲಾವಣೆಗೊಂಡಿದೆ ಎಂದು ಮಣಿಪಾಲದ ಮಾಹೆಯ ಹಿರಿಯ ಸಹಾಯಕ ಪ್ರಾಧ್ಯಾಪಕ ರಾಜ ಗುಡಿ ಹೇಳಿದರು. ಬುಧವಾರ ಕೋಟದ ವಿವೇಕ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಬ್ರಹ್ಮಾವರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಾಧ್ಯಮ ಕ್ಷೇತ್ರ ಒಂದು ಜವಾಬ್ದಾರಿಯುತ ಹಾಗೂ ಸಮಾಜದ ಓರೆಕೋರೆಗಳನ್ನು ಹೊರಜಗತ್ತಿಗೆ ಪ್ರಚುರಪಡಿಸಿ ಅದರ ಸಮಗ್ರ ಅನುಷ್ಠಾನದ ಕೇಂದ್ರವಾಗಿದೆ. ಪ್ರಸ್ತುತ ವಿದ್ಯಮಾನದಲ್ಲಿ ಮಾಧ್ಯಮ ಡಿಜಿಟಲೀಕರಣಗೊಂಡ ಹಿನ್ನಲ್ಲೆಯಲ್ಲಿ ಅವಕಾಶಗಳು ತೆರೆದಿಡುವಂತಾಗಿದೆ. ಈ ಕ್ಷೇತ್ರದಲ್ಲಿ ಸಾಕಷ್ಟು ಕೋರ್ಸುಗಳಿವೆ. ಇದನ್ನು ವಿದ್ಯಾರ್ಥಿಗಳು ಸದ್ಭಳಕೆ ಮಾಡಿಕೊಳ್ಳಬೇಕಿದೆ ಎಂದರು. ಈ ವೇಳೆ ಪ್ರೆಸ್ ಕ್ಲಬ್ ವತಿಯಿಂದ ಹಿರಿಯ ಪತ್ರಕರ್ತ ರಂಗಪಯ್ಯ ಹೊಳ್ಳ ಇವರಿಗೆ ಗೌರವ ಪುರಸ್ಕಾರ ನೀಡಲಾಯಿತು.

ಕೋಟ ವಿವೇಕ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಕೆ.ಜಗದೀಶ್ ನಾವಡ ಗೌರವ ಸಮ್ಮಾನ ನೆರವೇರಿಸಿದರು. ಸಭೆಯ ಅಧ್ಯಕ್ಷತೆಯನ್ನು ಬ್ರಹ್ಮಾವರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಗಾಣಿಗ ಅಚ್ಲಾಡಿ ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ಉಪಸ್ಥಿತರಿದ್ದರು. ಪತ್ರಕರ್ತ ವಸಂತ ಗಿಳಿಯಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಬ್ರಹ್ಮಾವರ ಕಾರ್ಯನಿರತ ಪತ್ರಕರ್ತರ ಸಂಘದ ಗೌರವಾಧ್ಯಕ್ಷ ಚಿತ್ತೂರು ಪ್ರಭಾಕರ ಆಚಾರ್ ಸ್ವಾಗತಿಸಿ, ಪತ್ರಕರ್ತ ಚಂದ್ರಶೇಖರ್ ಬೀಜಾಡಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಹರೀಷ್ ಕಿರಣ್ ತುಂಗ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ಜಿಲ್ಲೆಗೆ ಪ್ರವಾಸಿ ಮಾರ್ಗದರ್ಶಿಗಳ ಅಗತ್ಯವಿದೆ: ಅಜಯ್ ಪಿ ಶೆಟ್ಟಿ

ಉಡುಪಿ, ಫೆ.9: ಉಡುಪಿ ಜಿಲ್ಲೆಯು ಜಾಗತಿಕ ಮಟ್ಟದಲ್ಲಿ ತನ್ನದೇ ಆದ ಗುರುತನ್ನು...

ಶ್ರೀಕೃಷ್ಣ ಮಠಕ್ಕೆ ಚಿತ್ರಾಪುರ ಮಠಾಧೀಶರ ಭೇಟಿ

ಉಡುಪಿ, ಫೆ.9: ಪರ್ಯಾಯ ಶೀರೂರು ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಶ್ರೀ...

ಸಮಸ್ಯಾತ್ಮಕ ನಡವಳಿಕೆಯ ಹಿಂದೆ ಮೌನವಾಗಿ ಅಡಗಿರುವ ಮುಖ

ಐದನೇ ತರಗತಿಯಲ್ಲಿ ಓದುತ್ತಿದ್ದ ರಾಹುಲ್ ಇತ್ತೀಚಿನ ದಿನಗಳಲ್ಲಿ ಕಲಿಕೆಯತ್ತ ಅನಾಸಕ್ತಿ ತೋರಿಸುತ್ತಿದ್ದ....

ವಿದ್ಯಾರ್ಥಿ ಜೀವನದಲ್ಲಿಯೇ ಶಿಕ್ಷಣದ ಜೊತೆ ಆರೋಗ್ಯದ ಬಗ್ಗೆಯೂ ವಿಶೇಷ ಕಾಳಜಿ ಇರಲಿ: ಡಾ. ಶ್ರುತಿ ಬಲ್ಲಾಳ್

ಉಡುಪಿ, ಫೆ.9: ವಿದ್ಯಾರ್ಥಿ ಜೀವನದಲ್ಲಿಯೇ ಶಿಕ್ಷಣದ ಜೊತೆ ಜೊತೆಗೆ ಶಿಸ್ತು ಬದ್ಧ...
error: Content is protected !!