ಉಡುಪಿ, ಜು.18: ಪ್ರಸಕ್ತ ಸಾಲಿಗೆ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ಜಿಲ್ಲೆಯಲ್ಲಿರುವ ರೈತ ಮಹಿಳೆಯರಿಗೆ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಹಸು, ಎಮ್ಮೆ ಖರೀದಿಗೆ ರಾಷ್ಟ್ರೀಕೃತ, ಗ್ರಾಮೀಣ ಹಾಗೂ ಸಹಕಾರ ಬ್ಯಾಂಕುಗಳಲ್ಲಿ 2024 ರ ಏಪ್ರಿಲ್ 1 ರಿಂದ ಪಡೆದ ಗರಿಷ್ಟ ಸಾಲ 65,000 ರೂ. ಗಳನ್ನು ಸಕಾಲದಲ್ಲಿ ಮರುಪಾವತಿ ಮಾಡಿರುವ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ಶೇ.6 ರಷ್ಟು ಬಡ್ಡಿಯ ಸಹಾಯಧನ 3625.00 ರೂ. ಗಳನ್ನು ನೀಡುವ ಯೋಜನೆಗೆ ಅರ್ಹ ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ರೈತ ಮಹಿಳೆಯರು ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಪಶುವೈದ್ಯ ಸಂಸ್ಥೆ ಅಥವಾ ತಾಲೂಕು ಪಶು ಆಸ್ಪತ್ರೆಯ ಮುಖ್ಯ ಪಶುವೈದ್ಯಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
ಹೈನುಗಾರಿಕೆಗೆ ಸಹಾಯಧನ: ಅರ್ಜಿ ಆಹ್ವಾನ
ಹೈನುಗಾರಿಕೆಗೆ ಸಹಾಯಧನ: ಅರ್ಜಿ ಆಹ್ವಾನ
Date: