ಕೋಟ, ಜು. 23: ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲೆ ಕೋಟೇಶ್ವರ ಘಟಕ ಹಾಗೂ ಮಹಿಳಾ ಸಂಘಟನೆ ಹಾಗೂ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಅಂಬಲಪಾಡಿ ಉಡುಪಿ, ರೋಟರಿ ಕ್ಲಬ್ ಕೋಟೇಶ್ವರ, ರಕ್ತನಿಧಿ ಕೆ.ಎಂ.ಸಿ ಮಣಿಪಾಲ, ಜಿಲ್ಲಾಡಳಿತ ಉಡುಪಿ ಇವರ ಸಹಯೋಗದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಕೋಟೇಶ್ವರದ ಶಾರದಾ ಕಲ್ಯಾಣ ಮಂಟಪದಲ್ಲಿ ನಡೆಯಿತು. ಸಭಾಧ್ಯಕ್ಷತೆಯನ್ನು ಮೊಗವೀರ ಯುವ ಸಂಘಟನೆ ಕೋಟೇಶ್ವರ ಘಟಕದ ಅಧ್ಯಕ್ಷ ನಾಗರಾಜ ಬೀಜಾಡಿ ವಹಿಸಿದ್ದರು. ಮೊಗವೀರ ಯುವ ಸಂಘಟನೆಯ ಜಿಲ್ಲಾಧ್ಯಕ್ಷ ಜಯಂತ್ ಅಮೀನ್ ಕೋಡಿ ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ರೋಟರಿ ಕ್ಲಬ್ನ ಅಧ್ಯಕ್ಷ ಸತೀಶ್ ಎಂ ನಾಯ್ಕ್, ಮೊಗವೀರ ಸಮುದಾಯದ ಬಗ್ವಾಡಿ ಹೋಬಳಿ ಅಧ್ಯಕ್ಷ ಉದಯ ಕುಮಾರ್ ಹಟ್ಟಿಯಂಗಡಿ, ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲೆ ನಿಕಟಪೂರ್ವ ಅಧ್ಯಕ್ಷ ರಾಜೇಂದ್ರ ಸುವರ್ಣ ಹಿರಿಯಡಕ, ರಕ್ತನಿಧಿ ಮಣಿಪಾಲದ ಡಾ.ಬಿಸ್ಮಿತಾ, ಸಂಘಟನೆಯ ಗೌರವಾಧ್ಯಕ್ಷ ಸುರೇಶ್ ಮೊಗವೀರ ಶಾನಾಡಿ, ಮಹಿಳಾ ಘಟಕದ ಅಧ್ಯಕ್ಷ ಉಷಾ ಬಂಗೇರ ಮಾರ್ಕೋಡು, ಸಂಘಟನೆಯ ಪ್ರಮುಖರಾದ ಚಂದ್ರ ಬಂಗೇರ, ರೋಟರಿ ಕ್ಲಬ್ ಕೋಟೇಶ್ವರ ಕಾರ್ಯದರ್ಶಿ ಸುಭಾಶ್ ಚಂದ್ರ ಶೆಟ್ಟಿ, ಜಿಲ್ಲಾ ಸಂಘಟನೆ ಪ್ರಧಾನ ಕಾರ್ಯದರ್ಶಿ ರವೀಂದ್ರ ಪುತ್ರನ್ ಉಪಸ್ಥಿತರಿದ್ದರು. ಮೊಗವೀರ ಯುವ ಸಂಘಟನೆ ಕೋಟೇಶ್ವರ ಘಟಕದ ನಿಕಟಪೂರ್ವ ಅಧ್ಯಕ್ಷ ಸುನೀಲ್ ಜಿ ನಾಯ್ಕ್ ಸ್ವಾಗತಿಸಿ, ಕಾರ್ಯದರ್ಶಿ ರಾಘವೇಂದ್ರ ಹಳೆಅಳಿವೆ ವಂದಿಸಿದರು. ಅಶೋಕ ತೆಕ್ಕಟ್ಟೆ ಕಾರ್ಯಕ್ರಮ ನಿರೂಪಿಸಿದರು. ಒಟ್ಟು೧೫೫ ಯುನಿಟ್ ರಕ್ತ ಸಂಗ್ರಹಿಸಲಾಯಿತು.