ಉಡುಪಿ: 68 ವರ್ಷಗಳ ಇತಿಹಾಸ ಇರುವ ರಾಜ್ಯ ಅತ್ಯುತ್ತಮ ಯುವ ಮಂಡಲ ಪ್ರಶಸ್ತಿ ಪುರಸ್ಕೃತ ಯುವಕ ಮಂಡಲ (ರಿ.) ಸಾಣೂರು ಈ ಸಂಸ್ಥೆಗೆ ಭಾರತ ಸರ್ಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಸಂಘಟನೆ ಉಡುಪಿ, ಜಿಲ್ಲಾಡಳಿತ ಉಡುಪಿ, ಜಿಲ್ಲಾ ಪಂಚಾಯತ್ ಉಡುಪಿ ಇವುಗಳ ಸಂಯುಕ್ತ ಆಶ್ರಯದಲ್ಲಿ ದೇಶದ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಸಂಭ್ರಮದ ಪ್ರಯುಕ್ತ ನಡೆದ ಕ್ಲೀನ್ ಇಂಡಿಯಾ ಪ್ಲಾಸ್ಟಿಕ್ ಮುಕ್ತ ಪ್ರದೇಶ ಸ್ವಚ್ಛತಾ ಕಾರ್ಯಕ್ರಮಕ್ಕೆ ಉಡುಪಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಲಭಿಸಿದೆ.
ಸಾಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಲ 5 ವಾರ್ಡಿಗಳಲ್ಲಿ ಮತ್ತು ಕಾರ್ಕಳ ತಾಲೂಕಿನ ಹಲವಾರು ಇತಿಹಾಸ ಪ್ರಸಿದ್ಧ ಧಾರ್ಮಿಕ ಮತ್ತು ಪ್ರವಾಸಿ ತಾಣಗಳಲ್ಲಿ ಸ್ವಚ್ಛತಾ ಆಂದೋಲನವನ್ನು ಹಮ್ಮಿಕೊಳ್ಳಲಾಗಿತ್ತು.
ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಎಂ ಅವರು ಪ್ರಶಸ್ತಿ ಪ್ರಧಾನ ಮಾಡಿದರು.
ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ವಿಲ್ಫ್ರೆಡ್ ಡಿಸೋಜ, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಇತರ ಗಣ್ಯರು ಉಪಸ್ಥಿತರಿದ್ದರು.
ಸಾಣೂರು ಯುವಕ ಮಂಡಲದ ಪರವಾಗಿ ಅಧ್ಯಕ್ಷರಾದ ಪ್ರಸಾದ್ ಪೂಜಾರಿ, ಕಾರ್ಯದರ್ಶಿ ಮೋಹನ್ ಶೆಟ್ಟಿ, ಉಪಾಧ್ಯಕ್ಷ ಪ್ರಸಾದ್ ಶೆಟ್ಟಿ, ಕೋಶಾಧಿಕಾರಿ ರಾಜೇಶ್, ಜೊತೆ ಕಾರ್ಯದರ್ಶಿ ಪ್ರಮಿತ್ ಸುವರ್ಣ, ಮಾಜಿ ಅಧ್ಯಕ್ಷರುಗಳಾದ ಪ್ರವೀಣ್ ಶೆಟ್ಟಿ, ಜಗದೀಶ್ ಕುಮಾರ್, ಶಂಕರ್ ಶೆಟ್ಟಿ ಹಿರಿಯ ಸದಸ್ಯರಾದ ಸುಧಾಕರ್ ಶೆಟ್ಟಿ, ಪದಾಧಿಕಾರಿಗಳಾದ ಪ್ರಸನ್ನ ಆಚಾರ್ಯ, ಸೀತಾರಾಮ್, ಅನಿಲ್ ಕೋಟ್ಯಾನ್, ರಮೇಶ್ ಪೂಜಾರಿ, ಜಯನ್ ಶೆಟ್ಟಿ, ಪ್ರಖ್ಯಾತ್, ವಿದ್ಯಾನಂದ್ ಕೋಟ್ಯಾನ್, ಸುದರ್ಶನ್ ನಾಯ್ಕ್ ಉಪಸ್ಥಿತರಿದ್ದರು.