ಉಡುಪಿ, ಜು.25: ಉಡುಪಿ ನಗರಸಭೆಯ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ತಡೆಗಟ್ಟುವ ನಿಟ್ಟಿನಲ್ಲಿ ನಗರಸಭೆಯ ವತಿಯಿಂದ ನಿರಂತರ ಕಾರ್ಯಾಚರಣೆ ನಡೆಯುತ್ತಿದ್ದು, ಮಂಗಳವಾರ ನಗರದ ಸಿಟಿ ಬಸ್ ನಿಲ್ದಾಣ ಸಮೀಪದ ಮಾರ್ಕೆಟಿಂಗ್ ಉದ್ದಿಮೆಯೊಂದರಲ್ಲಿ 415 ಕೆ.ಜಿ ನಿಷೇಧಿತ ಪ್ಲಾಸ್ಟಿಕ್ ಅನ್ನು ವಶಕ್ಕೆ ಪಡೆದು ರೂ. 5000 ದಂಡ ವಿಧಿಸಲಾಯಿತು. ನಗರಸಭೆಯ ಪರಿಸರ ಅಭಿಯಂತರರಾದ ಸ್ನೇಹ ಕೆ.ಎಸ್, ಪ್ರಭಾರ ಆರೋಗ್ಯ ನಿರೀಕ್ಷಕ ಸುರೇಂದ್ರ ಹೋಬಳಿದಾರ್, ಸೂಪರ್ ವೈಸರ್‌ಗಳಾದ ಭೋಜ ನಾಯ್ಕ್, ಸುರೇಶ್ ಶೆಟ್ಟಿ, ನಾಗರ್ಜುನ್ ಹಾಗೂ ಮತ್ತಿತರರು ಪಾಲ್ಗೊಂಡಿದ್ದರು.
ನಗರಸಭೆ ವತಿಯಿಂದ ನಿಷೇಧಿತ ಪ್ಲಾಸ್ಟಿಕ್ ವಶ

ನಗರಸಭೆ ವತಿಯಿಂದ ನಿಷೇಧಿತ ಪ್ಲಾಸ್ಟಿಕ್ ವಶ
Date: