Friday, November 13, 2026
Friday, November 13, 2026

ಕ್ರಿಯೇಟಿವ್ ಕಾಲೇಜು- ‘ಕಾನೂನು ಅರಿವು’

ಕ್ರಿಯೇಟಿವ್ ಕಾಲೇಜು- ‘ಕಾನೂನು ಅರಿವು’

Date:

ಉಡುಪಿ, ಜು.26: ಕಾರ್ಕಳದ ಕ್ರಿಯೇಟಿವ್ ಪಿಯು ಕಾಲೇಜಿನ ‘ಸಪ್ತಸ್ವರ’ ವೇದಿಕೆಯಲ್ಲಿ ‘ಕಾನೂನು ಅರಿವು’ ಮಾಹಿತಿ ಕಾರ್ಯಕ್ರಮ ನಡೆಯಿತು. ಮಾಹಿತಿ ಕಾರ್ಯಾಗಾರಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಸುಬ್ರಹ್ಮಣ್ಯ ಎಚ್, ಪೊಲೀಸ್ ಉಪನಿರೀಕ್ಷಕರು, ಕಾರ್ಕಳ ಇವರು ಶಿಕ್ಷಣ ಪಡೆದಾಗ ಜ್ಞಾನ ಮೂಡುತ್ತದೆ. ಆಗ ಸಮಾಜದಲ್ಲಿ ಶಾಂತಿ ಹಾಗೂ ಸಹಬಾಳ್ವೆಯಿಂದ ಬದುಕಲು ಸಾಧ್ಯ ಎಂದರು. ಪೊಲೀಸ್ ಇಲಾಖೆಯ ಕಾನ್ಸ್ಟೇಬಲ್ ಸಂತೋಷ್ ರವರು ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಓದಿನ ಜೊತೆಗೆ ತಮ್ಮ ಹಕ್ಕುಗಳು ಮತ್ತು ಕಾನೂನು ಅರಿವು ಹೊಂದುವುದು ಅತ್ಯಗತ್ಯವಾಗಿದೆ ಎಂದರು.

ಸಭಾಧ್ಯಕ್ಷತೆಯನ್ನು ವಹಿಸಿದ ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ರವರು, ಜೀವಿಸಲು ಗಾಳಿ, ನೀರು, ಆಹಾರ ಎಷ್ಟು ಅಗತ್ಯವೋ ಸಮಾಜದಲ್ಲಿ ಬದುಕಬೇಕಾದರೆ ಕಾನೂನಿನ ಅರಿವು ಅಷ್ಟೇ ಅವಶ್ಯಕವಾಗಿದೆ ಎಂದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪೊಲೀಸ್ ಇಲಾಖೆಯ ರವೀಂದ್ರ ಹಾಗೂ ಘನಶ್ಯಾಮ್ ರವರು ಉಪಸ್ಥಿತರಿದ್ದರು. ಉಪನ್ಯಾಸಕ ವರ್ಗದವರು, ವಸತಿ ನಿಲಯ ಪಾಲಕರು ಹಾಗೂ ಮೇಲ್ವಿಚಾರಕರು, ಬೋಧಕೇತರ ಸಿಬ್ಬಂದಿ ವರ್ಗದವರು, ವಾಣಿಜ್ಯ ವಿಭಾಗದ ವಿದ್ಯಾರ್ಥಿ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು. ಕನ್ನಡ ಭಾಷಾ ಉಪನ್ಯಾಸಕರಾದ ಶಿವಕುಮಾರ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಅರ್ಥಶಾಸ್ತ್ರ ಉಪನ್ಯಾಸಕ ಉಮೇಶ್ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಐಪಿಎಸ್ ಅಧಿಕಾರಿ ಐ. ಜಯಕುಮಾರ್ ಭೇಟಿ

ಕಾಪು, ನ.13: ಮುಂಬೈ ಪೊಲೀಸ್ ಇಲಾಖೆಯ ಫೋರ್ಸ್ ಒನ್ ಘಟಕದ ವಿಶೇಷ...

ಪೂರ್ಣಪ್ರಜ್ಞ ಸಂಧ್ಯಾ ಕಾಲೇಜು: ಆಹಾರ ಮೇಳದಲ್ಲಿ ಭರ್ಜರಿ ವಹಿವಾಟು

ಉಡುಪಿ, ನ.13: ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜು ಉಡುಪಿಯ ವಾಣಿಜ್ಯ ಸಂಘದ...

ಕಟಪಾಡಿ: 1 ಕೋಟಿ 10 ಲಕ್ಷ ರೂಪಾಯಿ ವೆಚ್ಚದ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ

ಕಟಪಾಡಿ, ನ.13: ಕಾಪು ವಿಧಾನಸಭಾ ಕ್ಷೇತ್ರದ ಉದ್ಯಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಶ್ರೀ ಕ್ಷೇತ್ರ ಶಂಕರಪುರ: ಬೀದಿ ಶ್ವಾನ ಸಂರಕ್ಷಣಾ ದಿನಾಚರಣೆ

ಕಟಪಾಡಿ, ನ.13: ಉಡುಪಿ ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ...
error: Content is protected !!