Sunday, January 19, 2025
Sunday, January 19, 2025

ಬಾರಕೂರು: ಗಾಳಿ ಮಳೆಗೆ ವಿದ್ಯುತ್ ಕಂಬಗಳ ಮೇಲೆ ಉರುಳಿದ ಮರ; ಸಂಚಾರ ಅಸ್ತವ್ಯಸ್ತ

ಬಾರಕೂರು: ಗಾಳಿ ಮಳೆಗೆ ವಿದ್ಯುತ್ ಕಂಬಗಳ ಮೇಲೆ ಉರುಳಿದ ಮರ; ಸಂಚಾರ ಅಸ್ತವ್ಯಸ್ತ

Date:

ಬಾರಕೂರು, ಜು. 26: (ಉಡುಪಿ ಬುಲೆಟಿನ್ ವರದಿ) ಕಳೆದ ಕೆಲವು ದಿನಗಳಿಂದ ಕರಾವಳಿಯಲ್ಲಿ ಭಾರೀ ಗಾಳಿ ಮಳೆಯಾಗುತ್ತಿದ್ದು, ಶುಕ್ರವಾರ ಬೆಳಿಗ್ಗೆ ಗಾಳಿಗೆ ಬಾರಕೂರು ಮಂದಾರ್ತಿ ರಸ್ತೆ ಬದಿಯಲ್ಲಿ ಬೃಹತ್ ಮರಗಳು ವಿದ್ಯುತ್ ಕಂಬಗಳ ಮೇಲೆ ಉರುಳಿ ಬಿದ್ದ ಪರಿಣಾಮ ಸುಮಾರು ಒಂದು ಗಂಟೆಗಳ ಕಾಲ ಈ ಭಾಗದಲ್ಲಿ ಸಂಚಾರ ಅಸ್ತವ್ಯಸ್ತವಾಗಿದೆ. ಬಾರಕೂರು ರೈಲು ನಿಲ್ದಾಣದ ಬಳಿ ಘಟನೆ ಸಂಭವಿಸಿದ್ದು ಸ್ಥಳೀಯ ಸಂಘಟನೆಯ ಸದಸ್ಯರು ಮತ್ತು ಮೆಸ್ಕಾಂ ಸಿಬ್ಬಂದಿ ರಸ್ತೆಯಲ್ಲಿ ಉರುಳಿದ ಮರಗಳನ್ನು ತೆರವುಗೊಳಿಸಿ ಸಂಚಾರ ಆರಂಭಗೊಳ್ಳಲು ಸಹಕರಿಸಿದರು.

ಏನಾಗಿತ್ತು?: ಸ್ಥಳೀಯ ಪ್ರತ್ಯಕ್ಷದರ್ಶಿಗಳ ಪ್ರಕಾರ ಶುಕ್ರವಾರ ಬೆಳಿಗ್ಗೆ ಸುಮಾರು 6 ಗಂಟೆಗೆ ಜೋರಾಗಿ ಬೀಸಿದ ಗಾಳಿಗೆ ಬಾರಕೂರು ರೈಲು ನಿಲ್ದಾಣದ ಬಳಿಯ ಮಂದಾರ್ತಿ ರಸ್ತೆಯ ಬಳಿ ಹಲವಾರು ಮರಗಳು ವಿದ್ಯುತ್ ಕಂಬಗಳ ಮೇಲೆ ಉರುಳಿದ ಪರಿಣಾಮ ಸಂಚಾರ ಅಸ್ತವ್ಯಸ್ತವಾಯಿತು.

ತಪ್ಪಿದ ದುರಂತ: ರಸ್ತೆಯ ಮೇಲೆ ವಿದ್ಯುತ್ ತಂತಿ ಸಮೇತ ಮರಗಳು ಉರುಳಿ ಬೀಳುವ ಸಮಯದಲ್ಲಿ ಮುಖ್ಯ ರಸ್ತೆಯಲ್ಲಿ ಯಾವುದೇ ವಾಹನ ಸಂಚರಿಸದ ಪರಿಣಾಮ ಯಾವುದೇ ಜೀವಹಾನಿ ಆಗಲಿಲ್ಲ ಎನ್ನುತ್ತಾರೆ ಸ್ಥಳೀಯರು.

ಸುರಿಯುವ ಮಳೆಯಲ್ಲೇ ತೆರವು ಕಾರ್ಯಾಚರಣೆ: ರಸ್ತೆಗೆ ತಂತಿಗಳ ಜತೆ ಉರುಳಿದ ಮರಗಳನ್ನು ತೆರವುಗೊಳಿಸಲು ಸ್ಥಳೀಯ ಸಂಘಟನೆಯ ಸದಸ್ಯರು ಮೆಸ್ಕಾಂ ಸಿಬ್ಬಂದಿ ಹಾಗೂ ಸ್ಥಳೀಯರು ಜತೆಗೂಡಿ ಸುರಿಯುವ ಮಳೆಯಲ್ಲೇ ತೆರವು ಕಾರ್ಯಾಚರಣೆ ನಡೆಸಿ ಸಂಚಾರ ಆರಂಭವಾಗಲು ಸಹಕರಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!