Monday, September 7, 2026
Monday, September 7, 2026

ಬೃಹತ್ ಆಧಾರ್ ಮೇಳ

ಬೃಹತ್ ಆಧಾರ್ ಮೇಳ

Date:

ಕೋಟ, ಜು.27: ಸಂಘಸಂಸ್ಥೆಗಳು ಸಾಮಾಜಿಕ ವ್ಯವಸ್ಥೆಯ ಪರವಾಗಿ ಸದಾ ತುಡಿತ ಹೊಂದಿರಬೇಕು, ಆಗ ಮಾತ್ರ ಸಮಾಜದಲ್ಲಿ ಸ್ಚಲ್ಪ ಬದಲಾವಣೆ ಸಾಧ್ಯ ಎಂದು ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಹೇಳಿದರು. ಅವರು ಶನಿವಾರ ಕೋಟದ ಮಣೂರು ಮಹಾಲಿಂಗೇಶ್ವರ ದೇವಸ್ಥಾನ ಸಭಾಂಗಣದಲ್ಲಿ ಭಾರತೀಯ ಅಂಚೆ ಇಲಾಖೆ, ನವೋದಯ ಫ್ರೆಂಡ್ಸ್ ಹರ್ತಟ್ಟು ಇವರ ನೇತೃತ್ವದಲ್ಲಿ ಗ್ರಾಮ ಪಂಚಾಯತ್ ಕೋಟ, ವ್ಯವಸ್ಥಾಪನ ಸಮಿತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಮಣೂರು, ಜಯಂಟ್ಸ್ ಗ್ರೂಪ್ ಬ್ರಹ್ಮಾವರ, ಪ್ರಧಾನಮಂತ್ರಿ ಭಾರತೀಯ ಜಔಷಧಿ ಕೇಂದ್ರ ಬ್ರಹ್ಮಾವರ, ತೆಕ್ಕಟ್ಟೆ, ಪಂಚವರ್ಣ ಯುವಕ ಮಂಡಲ ಕೋಟ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಕೋಟ ಇವರ ಸಹಯೋಗದಲ್ಲಿ ಅಂಚೆ ಜನ ಸಂಪರ್ಕ ಅಭಿಯಾನ ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ಸರಕಾರದ ಸೌಲಭ್ಯಗಳ ಬಗ್ಗೆ ಜನಸಾಮಾನ್ಯರಿಗೆ ತಲುಪಿಸುವ ಕಾರ್ಯ ಜನಪ್ರತಿನಿಧಿಗಳಿಗೆ ಸೀಮಿತವಾಗದೆ, ಸಂಘಸಂಸ್ಥೆಗಳು ಹೊಂದಿರುವುದು ಶ್ಲಾಘನೀಯ ಎಂದರು. ಕೋಟ ಗ್ರಾಮ ಪಂಚಾಯತ್ ಅಧ್ಯಕ್ಷೆ ಜ್ಯೋತಿ ಭರತ್ ಕುಮಾರ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ನಿವೃತ್ತ ಪೋಸ್ಟ್ ಮ್ಯಾನ್ ರಮೇಶ್ ಭಟ್ ಅವರನ್ನು ಸನ್ಮಾನಿಸಲಾಯಿತು. ಸಭಾಧ್ಯಕ್ಷತೆಯನ್ನು ನವೋದಯ ಫ್ರೆಂಡ್ಸ್ ಗೌರವಾಧ್ಯಕ್ಷ ಮಹೇಶ್ ಪೂಜಾರಿ ವಹಿಸಿದ್ದರು.

ಮುಖ್ಯ ಅಭ್ಯಾಗತರಾಗಿ ಕೋಟ ಗ್ರಾಮ ಲೆಕ್ಕಿಗ ರಾಘವೇಂದ್ರ ಹಕ್ಲಾಡಿ, ಕೋಟ ಪಂಚಾಯತ್ ಉಪಾಧ್ಯಕ್ಷ ಪಾಂಡು ಪೂಜಾರಿ, ಸದಸ್ಯರಾದ ಶಿವರಾಮ ಶೆಟ್ಟಿ, ಅಜಿತ್ ದೇವಾಡಿಗ, ಮಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಆಡಳಿತ ಮಂಡಳಿಯ ಅಧ್ಯಕ್ಷ ಸತೀಶ್ ಹೆಚ್ ಕುಂದರ್, ಉಡುಪಿ ಅಂಚೆ ಇಲಾಖೆಯ ಸಹಾಯಕ ಅಧೀಕ್ಷ ಪಿ.ಎನ್ ಸತೀಶ್, ಭಾರತೀಯ ಜನೌಷಧ ಕೇಂದ್ರ ಬ್ರಹ್ಮಾವರ ಇದರ ಮುಖ್ಯಸ್ಥ ಮಧುಸೂಧನ ಹೇರೂರು, ಜಯಂಟ್ಸ್ ಗ್ರೂಪ್ ಬ್ರಹ್ಮಾವರ ಅಧ್ಯಕ್ಷ ಸುಂದರ್ ಪೂಜಾರಿ, ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿಲಾ ಪೂಜಾರಿ, ಜಯಂಟ್ಸ್ ಯೂನಿಟ್ ನಿರ್ದೇಶಕ ವಿವೇಕ್ ಕಾಮತ್ ಉಪಸ್ಥಿತರಿದ್ದರು. ನವೋದಯ ಫ್ರೆಂಡ್ಸ್ ಸದಸ್ಯ ಕೀರ್ತಿಶ ಪೂಜಾರಿ ಸ್ವಾಗತಿಸಿ, ನಿರೂಪಿಸಿದರು. ನವೋದಯ ಫ್ರೆಂಡ್ಸ್ ಕಾರ್ಯದರ್ಶಿ ಭರತ್ ಕೋಟ ವಂದಿಸಿದರು. ಪ್ರಸನ್ನ ಕಾರಂತ್ ಸಹರಿಸಿದರು. ನವೋದಯ ಫ್ರೆಂಡ್ಸ್ ಮಾಜಿ ಅಧ್ಯಕ್ಷ ಶ್ರೀನಾಥ್ ಕೋಟ ಕಾರ್ಯಕ್ರಮ ಸಂಯೋಜಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಜ್ಞಾನದ ಕ್ತತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವವರೇ ಶಿಕ್ಷಕರು: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಸೆ.6: ಅಜ್ಞಾನದ ಕತ್ತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವ ವ್ಯಕ್ತಿಯೇ ಶಿಕ್ಷಕ....

ಸೆ. 9: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಸೆ.6: ನಗರದ ಕಲ್ಸಂಕ ಅಂಬಾಗಿಲು ರಸ್ತೆಯಲ್ಲಿರುವ ಸಾನ್ವಿ ಟ್ರೇರ‍್ಸ್ನಲ್ಲಿ ಸೆಪ್ಟೆಂಬರ್...

ಮಣಿಪಾಲ ಜ್ಞಾನಸುಧಾ: ಶಿಕ್ಷಕರ ದಿನಾಚರಣೆ; ನಿವೃತ್ತ ಶಿಕ್ಷಕರಿಗೆ ಸನ್ಮಾನ

ಮಣಿಪಾಲ, ಸೆ.6: ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ...

ಡಾ. ಪಾರ್ವತಿ ಜಿ. ಐತಾಳರ ಎರಡು ಕೃತಿಗಳ ಲೋಕಾರ್ಪಣೆ

ಕುಂದಾಪುರ, ಸೆ.3: ಸಣ್ಣ ಕಥೆಗಳು ಮನುಷ್ಯನ ಜೀವನದಲ್ಲಿ ಅವನನ್ನು ಗಾಢವಾಗಿ ತಟ್ಟುವ...
error: Content is protected !!