Sunday, January 19, 2025
Sunday, January 19, 2025

ಶಾಸಕ ಯಶ್ಪಾಲ್ ಸುವರ್ಣ ನೇತೃತ್ವದಲ್ಲಿ ಕೊರಗ ಸಮುದಾಯದ ಮುಖಂಡರೊಂದಿಗೆ ಜಿಲ್ಲಾಧಿಕಾರಿಗಳ ಭೇಟಿ

ಶಾಸಕ ಯಶ್ಪಾಲ್ ಸುವರ್ಣ ನೇತೃತ್ವದಲ್ಲಿ ಕೊರಗ ಸಮುದಾಯದ ಮುಖಂಡರೊಂದಿಗೆ ಜಿಲ್ಲಾಧಿಕಾರಿಗಳ ಭೇಟಿ

Date:

ಮಣಿಪಾಲ, ಜು.29: ಕಳೆದ 8 ದಿನಗಳಿಂದ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ರಿ. ಕರ್ನಾಟಕ ಕೇರಳ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಕೊರಗ ಸಮುದಾಯದ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿರುವ ಕೊರಗ ಸಮುದಾಯದ ಮುಖಂಡರು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ನೇತೃತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಕೆ. ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.

ಶಾಸಕ ಯಶ್ಪಾಲ್ ಸುವರ್ಣ ಮಾತನಾಡಿ, ಕೊರಗ ಸಮುದಾಯದ ನ್ಯಾಯ ಸಮ್ಮತ ಬೇಡಿಕೆಗಳಾದ ಭೂಮಿ ಹಕ್ಕು ಹಾಗೂ ವಿದ್ಯಾವಂತ ಕೊರಗ ಸಮುದಾಯದ ಯುವ ಜನತೆಗೆ ಅರ್ಹ ಸರಕಾರಿ ಉದ್ಯೋಗದ ಒದಗಿಸುವ ಬಗ್ಗೆ ಈಗಾಗಲೇ ರಾಜ್ಯ ಸರಕಾರದ ಗಮನಕ್ಕೆ ತರಲಾಗಿದ್ದು, ಶೀಘ್ರದಲ್ಲಿಯೇ ಕೊರಗ ಸಮುದಾಯದ ಮುಖಂಡರೊಂದಿಗೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಬೇಡಿಕೆ ಈಡೇರಿಕೆಗೆ ಆಗ್ರಹಿಸುವುದಾಗಿ ತಿಳಿಸಿದರು. ಜಿಲ್ಲಾಧಿಕಾರಿಗಳು ಜಿಲ್ಲೆಯ ಕೊರಗ ಸಮುದಾಯದ ಗಂಭೀರ ಸಮಸ್ಯೆ ಹಾಗೂ ಬೇಡಿಕೆಗಳ ಬಗ್ಗೆ ಉಸ್ತುವಾರಿ ಸಚಿವರು ಹಾಗೂ ಸಂಬಂಧಿತ ಇಲಾಖೆಗೆ ಸೂಕ್ತ ವರದಿ ನೀಡುವಂತೆ ಶಾಸಕರು ಕೊರಗ ಸಮುದಾಯದ ಪರವಾಗಿ ಹೇಳಿದರು. ಕೊರಗ ಸಮುದಾಯದ ಮುಖಂಡರು ತಮ್ಮ ಬೇಡಿಕೆ ಹಾಗೂ ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಸುದೀರ್ಘ ಚರ್ಚೆ ನಡೆಸಿದರು.

ಕೊರಗ ಸಮುದಾಯದ ಮುಖಂಡರಾದ ಸುಶೀಲ, ಸಂಜೀವ, ಶೇಖರ್, ಬೊಗ್ರ, ಪವಿತ್ರ, ಐ.ಟಿ.ಡಿ.ಪಿ. ಯೋಜನಾಧಿಕಾರಿ ನಾರಾಯಣ ಸ್ವಾಮಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!