Sunday, February 23, 2025
Sunday, February 23, 2025

ಹಿರಿಯಡ್ಕ: ಫಿಸಿಯೋಥೆರಪಿ ಘಟಕ ಉದ್ಘಾಟನೆ

ಹಿರಿಯಡ್ಕ: ಫಿಸಿಯೋಥೆರಪಿ ಘಟಕ ಉದ್ಘಾಟನೆ

Date:

ಉಡುಪಿ, ಜು.30: ಫಿಸಿಯೋಥೆರಪಿ ಘಟಕದ ಉದ್ಘಾಟನಾ ಕಾರ್ಯಕ್ರಮ ಹಾಗೂ ದಿವ್ಯಾಂಗರಿಗೆ ಫಿಸಿಯೋಥೆರಪಿ ಶಿಬಿರವು ಮಂಗಳವಾರ ಹಿರಿಯಡ್ಕದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಯಿತು. ಮಣಿಪಾಲ ಮಾಹೆಯ ಎಮ್.ಸಿ.ಹೆಚ್.ಪಿ ಡಾ. ಅರುಣ್ ಮಯ್ಯ ಕಾರ್ಯಕ್ರಮ ಉದ್ಘಾಟಿಸಿ, ಎಂಡೋಸಲ್ಫಾನ್ ಸೇರಿದಂತೆ ದೈಹಿಕ ಅಂಗವಿಕಲತೆ ಇರುವ ಎಲ್ಲಾ ದಿವ್ಯಾಂಗರು ಈ ಘಟಕದಲ್ಲಿ ದೊರಕುವ ಫಿಸಿಯೋಥೆರಪಿ ಸೌಲಭ್ಯ ಪಡೆದುಕೊಳ್ಳುವಂತೆ ತಿಳಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಐ.ಪಿ ಗಡಾದ್ ಮಾತನಾಡಿ, ಈ ಭಾಗದ ಜನರಿಗೆ ಅನುಕೂಲವಾಗುವ ಉದ್ದೇಶದಿಂದ ಫಿಸಿಯೋಥೆರಪಿ ಘಟಕವನ್ನು ಪ್ರಾರಂಭಿಸಲಾಗಿದ್ದು, ಸ್ಥಳೀಯ ದಿವ್ಯಾಂಗರು ಸದ್ರಿ ಘಟಕದಲ್ಲಿ ಲಭ್ಯವಿರುವ
ಸೇವೆಯನ್ನು ಪಡೆದುಕೊಳ್ಳುವಂತೆ ತಿಳಿಸಿದರು.

ಎಂಡೋಸಲ್ಫಾನ್ ಕಾರ್ಯಕ್ರಮದ ಜಿಲ್ಲಾ ನೋಡೆಲ್ ಅಧಿಕಾರಿ ಡಾ. ಪ್ರಶಾಂತ ಜಿ. ಭಟ್ ಪ್ರಾಸ್ತಾವಿಕವಾಗಿ ಮಾತನಾಡಿ, ಶಿಬಿರದ ಧ್ಯೇಯೋದ್ಧೇಶ ಹಾಗೂ ಫಿಸಿಯೋಥೆರಪಿ ಘಟಕದ ಕಾರ್ಯವೈಖರಿ ಬಗ್ಗೆ ಮಾಹಿತಿ ನೀಡಿದರು. ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಹರೀಶ್ ಸಾಲಿಯಾನ್, ಒನ್ ಗುಡ್ ಸ್ಟೆಪ್‌ನ ಮ್ಯಾನೆಜಿಂಗ್ ಡೈರೆಕ್ಟರ್ ಅಮಿತಾ ಪೈ, ಡಾ. ರಾಜೇಶ್ ನಾವಡ ಜಿ.ವಿ. ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಹಿರಿಯಡಕ ಪ್ರಾಥಮಿಕ ಆರೋಗ್ಯ ಕೇಂದ್ರದ ಆಢಳಿತ ವೈದ್ಯಾಧಿಕಾರಿ ಡಾ.ಸತ್ಯಶಂಕರ್ ಸ್ವಾಗತಿಸಿ, ಪ್ರಶಾಂತ್ ಶೆಟ್ಟಿ ನಿರೂಪಿಸಿ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ವಿಜಯಾಬಾಯಿ ಕೆ. ವಂದಿಸಿದರು. ಶಿಬಿರದಲ್ಲಿ 100 ಕ್ಕೂ ಅಧಿಕ ಮಂದಿ ಭಾಗವಹಿಸಿದ್ದು, ಇವರಲ್ಲಿ 30 ಮಂದಿ ಫಿಸಿಯೋಥೆರಪಿ ಸೌಲಭ್ಯವನ್ನು ಪಡೆಯಲು ಅರ್ಹರಾಗಿರುತ್ತಾರೆ. ಇವರನ್ನು ನೋಂದಾವಣೆ ಮಾಡಿಕೊಂಡು, ಮುಂದಿನ ದಿನಗಳಲ್ಲಿ ನಿಯಮಿತವಾಗಿ ಫಿಸಿಯೋಥೆರಪಿ ಸೇವೆ ನೀಡಲಾಗುತ್ತದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!