Saturday, January 18, 2025
Saturday, January 18, 2025

ಚಕ್ರತೀರ್ಥ ಮಾರ್ಗದ ಕಿರು ಸೇತುವೆ ಹಾನಿ; ಶಾಸಕ ಯಶ್ಪಾಲ್ ಸುವರ್ಣ ಪರಿಶೀಲನೆ

ಚಕ್ರತೀರ್ಥ ಮಾರ್ಗದ ಕಿರು ಸೇತುವೆ ಹಾನಿ; ಶಾಸಕ ಯಶ್ಪಾಲ್ ಸುವರ್ಣ ಪರಿಶೀಲನೆ

Date:

ಉಡುಪಿ, ಜು.30: ಉಡುಪಿ ನಗರಸಭೆ ವ್ಯಾಪ್ತಿಯ ಮೂಡುಸಗ್ರಿ ವಾರ್ಡಿನಲ್ಲಿಮಳೆಯಿಂದಾಗಿ ಹಾನಿಗೀಡಾದ ಚಕ್ರತೀರ್ಥ ಮಾರ್ಗದ ಕಿರುಸೇತುವೆ ವಾಹನ ಸಂಚಾರಕ್ಕೆ ಅಪಾಯ ಸ್ಥಿತಿಯಲ್ಲಿರುವ ಹಿನ್ನಲೆಯಲ್ಲಿ, ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮುಂಜಾಗ್ರತಾ ಕ್ರಮವಾಗಿ ಈಗಾಗಲೇ ಈ ಮಾರ್ಗದಲ್ಲಿ ವಾಹನ ಸಂಚಾರ ನಿರ್ಬಂಧಿಸಿದ್ದು, ಈಗಾಗಲೇ ಸುಮಾರು ರೂ. 13 ಲಕ್ಷ ಅನುದಾನವನ್ನು ಕಿರು ಸೇತುವೆಯ ಮರು ನಿರ್ಮಾಣಕ್ಕೆ ಮಂಜೂರು ಮಾಡಿದ್ದು ಅತೀ ಶೀಘ್ರದಲ್ಲಿ ಕಾಮಗಾರಿ ಆರಂಭಿಸಲು ನಗರಸಭೆಯ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದರು.

ಸ್ಥಳೀಯ ನಗರಸಭಾ ಸದಸ್ಯರಾದ ಭಾರತಿ ಪ್ರಶಾಂತ್, ನಗರ ಬಿಜೆಪಿ ಅಧ್ಯಕ್ಷ ದಿನೇಶ್ ಅಮೀನ್, ನಗರಸಭಾ ಸದಸ್ಯರಾದ ಗಿರೀಶ್ ಅಂಚನ್, ಸ್ಥಳೀಯ ಮುಖಂಡರಾದ ಈಶ್ವರ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!