ಕಟಪಾಡಿ, ಜು.31: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಹಾಗೂ ಆನಂದತೀರ್ಥ ಪ. ಪೂ ಕಾಲೇಜಿನ ಇಂಟಿ ಸಹಯೋಗದಿಂದ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಜನಜಾಗೃತಿ ವೇದಿಕೆಯ ಮಾಜಿ ಜಿಲ್ಲಾಧ್ಯಕ್ಷ ನವೀನ್ ಅಮೀನ್ ಉದ್ಘಾಟನೆ ನೆರವೇರಿಸಿದರು. ಉಡುಪಿ ಪ್ರಾದೇಶೀಕ ವಿಭಾಗದ ಜನಜಾಗೃತಿ ಯೋಜನಾಧಿಕಾರಿ ಗಣೇಶ್ ಆಚಾರ್ಯ ಮಾತನಾಡುತ್ತಾ, ಸ್ವಾಸ್ತ್ಯ ಸಮಾಜ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾಲ್ಗೊಳ್ಳುವಿಕೆ ಬಹಳ ಮುಖ್ಯ. ವಿದ್ಯಾರ್ಥಿಗಳು ಇಂದು ಹೆಚ್ಚು ವ್ಯಸನಿಗಳಾಗುತ್ತಿದ್ದಾರೆ ಅದರಿಂದಾಗುವ ಅನಾಹುತಗಳ ಬಗ್ಗೆ ಹೆಚ್ಚಿನ ಅರಿವು ಮೂಡಿಸಿದರೆ ವಿದ್ಯಾರ್ಥಿಗಳಲ್ಲಿ ಆರೋಗ್ಯದ ಬಗ್ಗೆ ಕಾಳಜಿ ಮೂಡುವಂತೆ ಮಾಡಬಹುದು, ಆಗ ಮಾತ್ರ ಸ್ವಾಸ್ತ್ಯ ಸಮಾಜ ನಿರ್ಮಾಣ ಸಾಧ್ಯ ಎಂದರು. ಸಪ್ತ ವ್ಯಸನಗಳು ಹಾಗೂ ಪಂಚ ಮಹಾ ಕಾಯಿಲೆಗಳ ಬಗ್ಗೆ ನಾಟಕದ ಮೂಲಕ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲಾಯಿತು.
ಪ್ರಾಂಶಯಪಾಲ ವಿಜಯ್ ಪಿ ರಾವ್ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ತಾಲೂಕು ಯೋಜನಾಧಿಕಾರಿ ಮಮತಾ ಶೆಟ್ಟಿ, ಅಧ್ಯಕ್ಷರಾದ ರಾಘವೇಂದ್ರ ಶೆಟ್ಟಿ, ಒಕ್ಕೂಟದ ಆದ್ಯಕ್ಷ ಮೌನೇಶ್, ವಲಯ ಮೇಲ್ವಿಚಾರಕಿ ಗೀತಾ ಸೇವಾ ಪ್ರತಿನಿಧಿಗಳು, ವಿದ್ಯಾರ್ಥಿಗಳು, ಉಪನ್ಯಾಸಕರು ಭಾಗವಹಿಸಿದ್ದರು. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ಮೇಧಿನಿ ಐತಾಳ್ ಕಾರ್ಯಕ್ರಮ ನಿರೂಪಿಸಿ, ವೃಷಭ್ ಹೆಬ್ಬಾರ್ ವಂದಿಸಿದರು.