Saturday, November 23, 2024
Saturday, November 23, 2024

ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ

ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ

Date:

ಉಡುಪಿ, ಆ.4: ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆ ಅಧಿನಿಯಮದ ಅನ್ವಯ ಜಿಲ್ಲೆಯಲ್ಲಿರುವ ಪ್ರವರ್ಗ ಬಿ ಯ-4 ಮತ್ತು ಪ್ರವರ್ಗ ಸಿ ಯ-38 ದೇವಸ್ಥಾನಗಳಲ್ಲಿ ಮೂರು ವರ್ಷಗಳ ಅವಧಿಗೆ ವ್ಯವಸ್ಥಾಪನಾ ಸಮಿತಿಯನ್ನು ರಚಿಸಲು ಆಸಕ್ತ ಭಕ್ತಾದಿಗಳು ಹಾಗೂ ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಕನಿಷ್ಠ 25 ವರ್ಷ ವಯಸ್ಸಾಗಿರುವ ಆಸಕ್ತ ಭಕ್ತಾದಿಗಳು ಯಾವುದೇ ಒಂದು ಅಧಿಸೂಚಿತ ಸಂಸ್ಥೆ ಅಥವಾ ದೇವಾಲಯದ ವ್ಯವಸ್ಥಾಪನಾ ಸಮಿತಿಗೆ ಮಾತ್ರ ಸದಸ್ಯತ್ವ ಕೋರಿ ಆಗಸ್ಟ್ 24 ರ ಒಳಗಾಗಿ ಭರ್ತಿ ಮಾಡಿದ ಅರ್ಜಿಯನ್ನು ನೇರವಾಗಿ ಸಹಾಯಕ ಆಯುಕ್ತರು, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ, ಕೊಠಡಿ ಸಂಖ್ಯೆ 206 ಬಿ, ಮೊದಲನೇ ಮಹಡಿ, ಜಿಲ್ಲಾ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ಇಲ್ಲಿಗೆ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಧಿಕಾರಿಗಳ ಕಛೇರಿ ಅಥವಾ ಸಹಾಯಕ ಆಯುಕ್ತರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಮ್ಮ ಉಳಿವಿಗಾಗಿ ಪಶ್ಚಿಮ ಘಟ್ಟದ ಸಂರಕ್ಷಣೆ ಅತ್ಯಗತ್ಯ

ಮಂಗಳೂರು, ನ.23: ‘ಸಾರ ಸಂಸ್ಥೆ’ ‘ಪರಿಸರಕ್ಕಾಗಿ ನಾವು’ ವೇದಿಕೆಯ ಸಹಯೋಗದೊಂದಿಗೆ ಡಾ....

ಉಡುಪಿ ಜ್ಞಾನಸುಧಾ ವಿದ್ಯಾರ್ಥಿಗಳು ವಿಭಾಗ ಮಟ್ಟಕ್ಕೆ ಆಯ್ಕೆ

ಉಡುಪಿ, ನ.23: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಮತ್ತು ಶಾಲಾ ಶಿಕ್ಷಣ...

ಪ್ರಧಾನಮಂತ್ರಿ ಫಸಲ್ ಬಿಮಾ ಹಿಂಗಾರು ಮತ್ತು ಬೇಸಿಗೆ ಹಂಗಾಮು ಯೋಜನೆ

ಉಡುಪಿ, ನ.22: ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿಗೆ ಮುಖ್ಯ ಬೆಳೆಯಾದ ಭತ್ತವನ್ನು ಗ್ರಾಮ...

ಜಿಲ್ಲೆಯಲ್ಲಿ ಕೆ.ಎಫ್.ಡಿ ಪ್ರಕರಣಗಳು ಆಗದಂತೆ ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ

ಉಡುಪಿ, ನ.22: ಕ್ಯಾಸನೂರು ಅರಣ್ಯ ರೋಗವು ಅಥವಾ ಮಂಗನ ಜ್ವರ ಕಾಯಿಲೆಯು...
error: Content is protected !!