Saturday, November 23, 2024
Saturday, November 23, 2024

ರಿಯಾಯಿತಿ ದರದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕಗಳು ಲಭ್ಯ

ರಿಯಾಯಿತಿ ದರದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕಗಳು ಲಭ್ಯ

Date:

ಉಡುಪಿ, ಆ.4: ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ, ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಪ್ರಕಟಿಸುತ್ತಾ ಬಂದಿದ್ದು, ಇವುಗಳಲ್ಲಿ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃಷಿ ಹೀಗೆ ಹಲವು ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳನ್ನು ಇದುವರೆಗೆ ಸುಮಾರು 704 ಶೀರ್ಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದೆ. ಅತ್ಯಂತ ಮೌಲಿಕವಾದ, ಪ್ರಾಜ್ಞರಿಂದ ರಚಿತವಾದ ಈ ಕೃತಿಗಳನ್ನು ಜನಸಾಮಾನ್ಯರಿಗೆ ಸುಲಭ ಬೆಲೆಯಲ್ಲಿ ತಲುಪಿಸಬೇಕೆಂಬ ಉದ್ದೇಶ ಕನ್ನಡ ಪುಸ್ತಕ ಪ್ರಾಧಿಕಾರದ್ದಾಗಿದೆ.

ಸ್ವಾತಂತ್ರ‍್ಯ ದಿನಾಚರಣೆಯ ಅಂಗವಾಗಿ ಪ್ರಸಕ್ತ ಆಗಸ್ಟ್ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ.50 ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು. ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ, ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ, ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದ ಆನ್‌ಲೈನ್ https://kpp.karnataka.gov.in ನಲ್ಲಿಯೂ ಕೂಡ ಶೇ.50 ರ ರಿಯಾಯಿತಿ ಲಭ್ಯವಿದ್ದು, ಓದುಗರ ಇದರ ಸದುಪಯೋಗಪಡೆದುಕೊಳ್ಳಬಹುದಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ಜ್ಞಾನಸುಧಾ ವಿದ್ಯಾರ್ಥಿಗಳು ವಿಭಾಗ ಮಟ್ಟಕ್ಕೆ ಆಯ್ಕೆ

ಉಡುಪಿ, ನ.23: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಮತ್ತು ಶಾಲಾ ಶಿಕ್ಷಣ...

ಪ್ರಧಾನಮಂತ್ರಿ ಫಸಲ್ ಬಿಮಾ ಹಿಂಗಾರು ಮತ್ತು ಬೇಸಿಗೆ ಹಂಗಾಮು ಯೋಜನೆ

ಉಡುಪಿ, ನ.22: ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿಗೆ ಮುಖ್ಯ ಬೆಳೆಯಾದ ಭತ್ತವನ್ನು ಗ್ರಾಮ...

ಜಿಲ್ಲೆಯಲ್ಲಿ ಕೆ.ಎಫ್.ಡಿ ಪ್ರಕರಣಗಳು ಆಗದಂತೆ ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ

ಉಡುಪಿ, ನ.22: ಕ್ಯಾಸನೂರು ಅರಣ್ಯ ರೋಗವು ಅಥವಾ ಮಂಗನ ಜ್ವರ ಕಾಯಿಲೆಯು...

ಇತಿಹಾಸದ ಅವಲೋಕನ ಬದುಕಿನ ಪುನರ್ ವಿಮರ್ಶೆಗೆ ಸಹಾಯಕ: ಶಬಾನ್ ಅಂಜುಮ್

ಕೋಟ, ನ.22: ಇತಿಹಾಸದ ಪಿತಾಮಹ ಹೆರೋಡಟಸ್ ಸಂಸ್ಕೃತಿಗಳ ತಿಳಿಯಲು ಒಂದು ಉತ್ತಮ...
error: Content is protected !!