ಮಣಿಪಾಲ, ಆ.5: ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ ನ ಆಶ್ರಯದಲ್ಲಿ ವಿದೇಶಿ ವಿದ್ಯಾರ್ಥಿಗಳಿಗೆ ಭಾರತೀಯ ನೃತ್ಯ ಮತ್ತು ಜಾನಪದದಲ್ಲಿ ವಿಶೇಷ ಉಪನ್ಯಾಸ ಹಾಗೂ ಪ್ರಾತ್ಯಕ್ಷಿಕೆ ನಡೆಯಿತು. ಅಧ್ಯಾಪಕರಾದ ಡಾ. ಭ್ರಮರಿ ಶಿವಪ್ರಕಾಶ್ ಮತ್ತು ಡಾ.ಸುಶ್ಮಿತಾ ಶೆಟ್ಟಿ ಕಾರ್ಯಕ್ರಮ ನಡೆಸಿಕೊಟ್ಟರು. ಮುಖ್ಯಸ್ಥ ಪ್ರೊ.ವರದೇಶ್ ಹಿರೇಗಂಗೆ ಸಂಯೋಜಿಸಿದರು. ಮಾಹೆಯ ಅಂತರಾಷ್ಟ್ರೀಯ ಕೇಂದ್ರ ಇದನ್ನು ಆಯೋಜಿಸಿತ್ತು. ಇಂಗ್ಲೆಂಡ್, ಇಸ್ರೇಲ್, ಓಮನ್ ಇತ್ಯಾದಿ ದೇಶಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಭಾರತೀಯ ನೃತ್ಯ; ಜಾನಪದ- ವಿಶೇಷ ಉಪನ್ಯಾಸ ಹಾಗೂ ಪ್ರಾತ್ಯಕ್ಷಿಕೆ

ಭಾರತೀಯ ನೃತ್ಯ; ಜಾನಪದ- ವಿಶೇಷ ಉಪನ್ಯಾಸ ಹಾಗೂ ಪ್ರಾತ್ಯಕ್ಷಿಕೆ
Date: