ಉಡುಪಿ, ಆ.6: ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಲಿ. ಉಡುಪಿ ಇದರ ಆಡಳಿತ ಕಚೇರಿಗೆ ಕರ್ನಾಟಕ ಸರಕಾರದ ಮೀನುಗಾರಿಕೆ ಮತ್ತು ಬಂದರು ಸಚಿವರಾದ ಮಾಂಕಾಳ ವೈದ್ಯ ರವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಸ್ವಾಗತಿಸಿ ಬ್ಯಾಂಕಿನ ವತಿಯಿಂದ ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು. ಮಹಾಲಕ್ಷ್ಮೀ ಬ್ಯಾಂಕಿನ ವ್ಯವಹಾರ, ಪ್ರಗತಿ ಹಾಗೂ ಕಾರ್ಯಯೋಜನೆಗಳ ಬಗ್ಗೆ ಮಾಹಿತಿ ಪಡೆದ ಸಚಿವರು, ನಿರಂತರ ಪ್ರಗತಿಯೊಂದಿಗೆ ಗ್ರಾಹಕರಿಗೆ ಆಧುನಿಕ ಬ್ಯಾಂಕಿಂಗ್ ಸೇವೆ ನೀಡುತ್ತಿರುವ ಬಗ್ಗೆ ಶ್ಲಾಘಿಸಿದರು.
ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷರಾದ ದಯಾನಂದ ಕೆ. ಸುವರ್ಣ, ಬ್ಯಾಂಕಿನ ಉಪಾಧ್ಯಕ್ಷರಾದ ವಾಸುದೇವ ಸಾಲ್ಯಾನ್, ಮಲ್ಪೆ ಯಾಂತ್ರಿಕ ಟ್ರಾಲ್ ದೋಣಿ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷರಾದ ರಾಮಚಂದ್ರ ಕುಂದರ್, ಮಲ್ಪೆ ಮೀನುಗಾರ ಸಂಘದ ಪ್ರಧಾನ ಕಾರ್ಯದರ್ಶಿ ಜಗನ್ನಾಥ ಕಡೆಕಾರ್, ಕೋಶಾಧಿಕಾರಿ ಪ್ರಕಾಶ್ ಬಂಗೇರ, ಬ್ಯಾಂಕಿನ ನಿರ್ದೇಶಕರಾದ ವಿನಯ ಕರ್ಕೇರ, ಸುರೇಶ್ ಬಿ.ಕರ್ಕೇರ, ವೆಂಕಟರಮಣ ಕಿದಿಯೂರು, ಬ್ಯಾಂಕಿನ ವ್ಯವಸ್ಥಾಪನಾ ನಿರ್ದೇಶಕರಾದ ಶರತ್ ಕುಮಾರ್ ಶೆಟ್ಟಿ, ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ಶಾರಿಕಾ ಕಿರಣ್, ವೃತ್ತಿಪರ ಸಲಹೆಗಾರ ಪ್ರದೀಪ್ ಆರ್ ಭಕ್ತ ಮೊದಲಾದವರು ಉಪಸ್ಥಿತರಿದ್ದರು.