Tuesday, September 8, 2026
Tuesday, September 8, 2026

ಕರಾವಳಿ ಮೊಗವೀರ ಮಹಾಜನ ಸಂಘದ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ

ಕರಾವಳಿ ಮೊಗವೀರ ಮಹಾಜನ ಸಂಘದ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ

Date:

ಕೋಟ, ಆ.7: ಕರಾವಳಿ ಮೊಗವೀರ ಮಹಾಜನ ಸಂಘ ಕೋಟ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ ಹಾಗೂ ವಿದ್ಯಾರ್ಥಿವೇತನ ಮತ್ತು ಗುರಿಕಾರರಿಗೆ ಗೌರವಧನ ವಿತರಣೆ ಕಾರ್ಯಕ್ರಮ ಸಾಲಿಗ್ರಾಮದ ಕರಾವಳಿ ಮೊಗವೀರ ಸಭಾಭವನದಲ್ಲಿ ನಡೆಯಿತು. ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಅಂಬಲಪಾಡಿ ಪ್ರವರ್ತಕ ನಾಡೋಜ ಡಾ. ಜಿ ಶಂಕರ್ ಕಾರ್ಯಕ್ರಮ ಉದ್ಘಾಟಿಸಿದರು. ಕೋಟ ಕರಾವಳಿ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಆನಂದ ಸಿ ಕುಂದರ್ ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ಕೋಟ ಹಾಗೂ ಸಾಲಿಗ್ರಾಮ ವ್ಯಾಪ್ತಿಯ ಗುರಿಕಾರರಿಗೆ ಗೌರವಧನ ನೀಡಿ ಗೌರವಿಸಲಾಯಿತು. ಕೃಷ್ಣಮೂರ್ತಿ ಮರಕಾಲರು ಸಂಸ್ಥೆಯಲ್ಲಿ ಕಾರ್ಯದರ್ಶಿಯಾಗಿ ದಶವರ್ಷಗಳ ಸೇವೆಯನ್ನು ಗುರುತಿಸಿ ವಿಶೇಷ ಅಭಿನಂದನೆ ಸಲ್ಲಿಸಲಾಯಿತು. ಎಂ.ಬಿ.ಬಿ.ಎಸ್ ವಿದ್ಯಾರ್ಥಿನಿ ನಾಗಶ್ರೀ ಡಾ. ಕೃಷ್ಣ ಕಾಂಚನ್ ಕೃಷ್ಣಮೂರ್ತಿ ಮರಕಾಲ, ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ಕುಂದರ್ ಅವರುಗಳನ್ನು ಸನ್ಮಾನಿಸಲಾಯಿತು.

ಮುಖ್ಯ ಅತಿಥಿಗಳಾಗಿ ದ.ಕ ಮೊಗವೀರ ಮೊಗವೀರ ಮಹಾಜನ ಸಂಘ ಉಚ್ಚಿಲ ಅಧ್ಯಕ್ಷ ಜಯ ಸಿ.ಕೋಟ್ಯಾನ್, ಬಾರ್ಕೂರು ಮೊಗವೀರ ಸಂಯುಕ್ತ ಸಭಾ ಅಧ್ಯಕ್ಷ ಸತೀಶ್ ಅಮೀನ್, ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲಾಧ್ಯಕ್ಷ ಜಯಂತ್ ಅಮೀನ್ ಕೋಡಿ, ಕೋಟ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷ ಡಾ. ಕೃಷ್ಣ ಕಾಂಚನ್, ಮಾತಾ ಆಸ್ಪತ್ರೆ ಕುಂದಾಪುರ ಮನೋವೈದ್ಯ ಡಾ. ಪ್ರಕಾಶ್ ತೋಳಾರ್, ಚಾರ್ಟೆಡ್ ಅಕೌಂಟೆಂಟ್ ಪದ್ಮನಾಭ ಕಾಂಚನ್, ಮೊಗವೀರ ಯುವ ಸಂಘಟನೆ ಸಾಲಿಗ್ರಾಮ ಘಟಕದ ಅಧ್ಯಕ್ಷ ಕಿರಣ್ ಕುಂದರ್, ಕೋಟ ಘಟಕದ ಅಧ್ಯಕ್ಷ ರಂಜಿತ್ ಕುಮಾರ್ ಉಪಸ್ಥಿತರಿದ್ದರು. ಮಹಾಜನ ಸಂಘದ ಕಾರ್ಯದರ್ಶಿ ಕೃಷ್ಣಮೂರ್ತಿ ಮರಕಾಲ ಪ್ರಾಸ್ತಾವಿಕವಾಗಿ ಮಾತನಾಡಿದರು. ನಿಯೋಜಿತ ಕಾರ್ಯದರ್ಶಿ ಚಂದ್ರ ಬಂಗೇರ ಸ್ವಾಗತಿಸಿ, ಸಂಘಟನೆಯ ಪ್ರಮುಖರಾದ ಶಿವರಾಮ್ ಕೆ.ಎಮ್ ನಿರೂಪಿಸಿದರು. ಕೃಷ್ಣ ಶ್ರೀಯಾನ್ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿಯಲ್ಲಿ ಕೇರಳದ ಸಾಂಸ್ಕೃತಿಕ ವೈಭವ: ಓಣಂ ಸಂಭ್ರಮಕ್ಕೆ ಮನಸೋತ ಕರಾವಳಿಗರು

ಉಡುಪಿ, ಸೆ.7: ಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ಮಹೋತ್ಸವದ ಸಂಭ್ರಮದ ನಡುವೆಯೇ...

ಕ್ರಿಯೇಟಿವ್ ಗುರುದೇವೋಭವ: ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಭಾಗಿ

ಕಾರ್ಕಳ, ಸೆ.7: ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಕ್ರಿಯೇಟಿವ್...

ಸರಸ್ವತಿ ವಿದ್ಯಾಲಯದಲ್ಲಿ ಇ ವೇಸ್ಟ್ ಮ್ಯಾನೇಜ್ಮೆಂಟ್ ಕಾರ್ಯಕ್ರಮ

ಗಂಗೊಳ್ಳಿ, ಸೆ.7: ಇ ತ್ಯಾಜ್ಯಗಳನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡುವುದು ಹೇಗೆ...

ತ್ರಿಶಾ ವಿದ್ಯಾ ಪಿಯು ಕಾಲೇಜು ಕಟಪಾಡಿ: ಕಾಪು ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಕಟಪಾಡಿ, ಸೆ.7: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ತ್ರಿಶಾ...
error: Content is protected !!