ಉಡುಪಿ, ಆ.7: ಜಿಲ್ಲೆಯ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತ್‌ಗಳ 10 ನೇ ಅವಧಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಕರ್ನಾಟಕ ಪೌರಸಭೆಗಳ ಕಾಯ್ದೆ 1964 ರ ಅನ್ವಯ ನಿಯಮಾನುಸಾರ ಚುನಾವಣೆ ನಡೆಸಲು, ಮೀಸಲಾತಿ ನಿಗದಿಪಡಿಸಿ, ರಾಜ್ಯ ಸರ್ಕಾರವು ಆಧಿಸೂಚನೆ ಹೊರಡಿಸಿದೆ. ಉಡುಪಿ ನಗರಸಭೆಯ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ, ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ (ಮಹಿಳೆ), ಚುನಾವಣಾ ಅಧಿಕಾರಿಯಾಗಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ್ ವಿ ನಾಯಕ್, ಕುಂದಾಪುರ ಪುರಸಭೆಯ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ, ಉಪಾಧಕ್ಷ ಸ್ಥಾನಕ್ಕೆ ಸಾಮಾನ್ಯ (ಮಹಿಳೆ), ಚುನಾವಣಾಧಿಕಾರಿಯಾಗಿ ಕುಂದಾಪುರ ತಹಶೀಲ್ದಾರ್ ಶೋಭಾಲಕ್ಷ್ಮಿ, ಕಾರ್ಕಳ ಪುರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ, ಚುನಾವಣಾಧಿಕಾರಿಯಾಗಿ ಕಾರ್ಕಳ ತಾಲೂಕು ತಹಶೀಲ್ದಾರ್, ಕಾಪು ಪುರಸಭೆಯ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ (ಮಹಿಳೆ), ಉಪಾಧ್ಯಕ್ಷ ಸ್ಥಾನಕ್ಕೆ ಪರಿಶಿಷ್ಟ ಜಾತಿ ಹಾಗೂ ಚುನಾವಣಾಧಿಕಾರಿಯಾಗಿ ಕಾಪು ತಾಲೂಕು ತಹಶೀಲ್ದಾರ್ ಪ್ರತಿಭಾ. ಆರ್ ಹಾಗೂ ಸಾಲಿಗ್ರಾಮ ಪಟ್ಟಣ ಪಂಚಾಯತ್‌ನ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ (ಮಹಿಳೆ), ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ-ಅ (ಮಹಿಳೆ) ಮತ್ತು ಚುನಾವಣಾ ಅಧಿಕಾರಿಯಾಗಿ ಬ್ರಹ್ಮಾವರ ತಹಶೀಲ್ದಾರ್ ಶ್ರೀಕಾಂತ್ ಹೆಗ್ಡೆ ಅವರನ್ನು ನೇಮಿಸಲಾಗಿದ್ದು, ಕರ್ನಾಟಕ ಪೌರಸಭೆ ನಿಯಮ 1965 ರ ನಿಯಮ 01 ರಿಂದ 18 ರ ವರೆಗಿನ ನಿಯಮದಂತೆ ಚುನಾವಣೆ ನಡೆಸಿ, ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಆಯ್ಕೆ ಮಾಡುವಂತೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ: ಮೀಸಲಾತಿ ಪ್ರಕಟ
ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ: ಮೀಸಲಾತಿ ಪ್ರಕಟ
Date: