Saturday, November 23, 2024
Saturday, November 23, 2024

ದೇಶಪ್ರೇಮ ಬೆಳೆಸಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯ: ಡಾ.ಎಚ್.ಎಸ್ ಬಲ್ಲಾಳ್

ದೇಶಪ್ರೇಮ ಬೆಳೆಸಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯ: ಡಾ.ಎಚ್.ಎಸ್ ಬಲ್ಲಾಳ್

Date:

ಮಣಿಪಾಲ, ಆ.10: ದೇಶಪ್ರೇಮ ಎಲ್ಲರಲ್ಲಿ ಎಳವೆಯಿಂದಲೇ ಬೆಳೆಯಬೇಕು. ದೇಶದ ಬಗೆಗೆ ಪ್ರೇಮವನ್ನು ಹೊಂದಿದಾಗ ಮಾತ್ರ ಸಶಕ್ತ ಭಾರತದ ನಿರ್ಮಾಣ ಸಾಧ್ಯ. ಈ ಹಿನ್ನಲೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಲ್ಲಿ ದೇಶಪ್ರೇಮ ಮೂಡಿಸುವ ಉದ್ದೇಶದಿಂದ ರೇಡಿಯೋ ಮಣಿಪಾಲ್ ನಲ್ಲಿ ಆಯೋಜಿಸಲಾದ ದೇಶಭಕ್ತಿಗೀತೆ ಸಮೂಹ ಗಾಯನ ಸ್ಪರ್ಧಾ ಕಾರ್ಯಕ್ರಮ ಅಭಿನಂದನೀಯ ಎಂದು ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ ಇದರ ಸಹ ಕುಲಾಧಿಪತಿ ಡಾ. ಎಚ್ ಎಸ್ ಬಲ್ಲಾಳ್ ಹೇಳಿದರು. ಅವರು ಮಣಿಪಾಲ್ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಮತ್ತು ಮಣಿಪಾಲ್ ಇನ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ ಸಹಯೋಗದಲ್ಲಿ ರೇಡಿಯೋ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರವು ಸ್ವಾತಂತ್ರೋತ್ಸವದ ಅಂಗವಾಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡ ಉಡುಪಿ ಜಿಲ್ಲಾಮಟ್ಟದ ದೇಶಭಕ್ತಿ ಗೀತೆ ಸಮೂಹ ಗಾಯನ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭದಲ್ಲಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಮಣಿಪಾಲ್ ಇನ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ (ಎಮ್ ಐ ಸಿ) ಸಂಸ್ಥೆಯ ನಿರ್ದೆಶಕರಾದ ಡಾ. ಪದ್ಮಾರಾಣಿ ಅವರು ಸ್ವಾಗತ ಮಾತುಗಳನ್ನಾಡಿ, ಇಂತಹ ಸ್ಪರ್ಧಾ ಕಾರ್ಯಕ್ರಮದಿಂದ ಪ್ರೌಢಶಾಲಾ ವಿದ್ಯಾರ್ಥಿಗಳಲ್ಲಿ ದೇಶಪ್ರೇಮ ಮೂಡಲು ಸಾಧ್ಯ ಎಂದು ಅಭಿಪ್ರಾಯಪಟ್ಟರು. ಉಡುಪಿ ಜಿಲ್ಲೆಯ ಒಟ್ಟು ಹನ್ನೊಂದು ಪ್ರೌಢಶಾಲಾ ವಿದ್ಯಾರ್ಥಿ ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು. ಪ್ರಥಮ ಬಹುಮಾನವನ್ನು ಮಾಧವ ಕೃಪಾ ಆಂಗ್ಲ ಮಾಧ್ಯಮ ಶಾಲೆ ಮಣಿಪಾಲ್, ದ್ವಿತೀಯ ಬಹುಮಾನವನ್ನು ಟಿ.ಎ. ಪೈ ಇಂಗ್ಲೀಷ್ ಮೀಡಿಯಂ ಹೈಸ್ಕೂಲ್ ಕುಂಜಿಬೆಟ್ಟು, ತೃತೀಯ ಬಹುಮಾನವನ್ನು ಜ್ಙಾನಸುಧಾ ಇಂಗ್ಲೀಷ್ ಮೀಡಿಯಂ ಸ್ಕೂಲ್ ಕಾರ್ಕಳ ಪಡೆದರು. ಸಮಧಾನಕರ ಬಹುಮಾನವನ್ನು ಸೈಂಟ್ ಫ್ರಾನ್ಸೀಸ್ ಝೇವಿಯರ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ಉದ್ಯಾವರ ಮತ್ತು ಗ್ರೀನ್ ಪಾರ್ಕ್ ಸೆಂಟ್ರಲ್ ಸ್ಕೂಲ್ ಹಿರಿಯಡಕ ತಂಡ ಪಡೆದುಕೊಂಡಿತು. ರೇಡಿಯೋ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದಲ್ಲಿ ಸಹಾಯಕ ಪ್ರಾಧ್ಯಾಪಕರು ಮತ್ತು ಸಂಯೋಜಕರಾದ ಡಾ. ರಶ್ಮಿ ಅಮ್ಮೆಂಬಳ ವಂದಿಸಿದರು. ಮಣಿಪಾಲ್ ಇನ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ ಸಂಸ್ಥೆಯ ವಿದ್ಯಾರ್ಥಿನಿ ಲೆರಿಸಾ ಡಿ’ಸೋಜ ನಿರೂಪಿಸಿದರು. ಸಿಬ್ಬಂದಿಗಳಾದ ಮಂಜುನಾಥ್ ಜಿ.ಹೆಚ್., ಮೋಹನದಾಸ್ ಪೈ, ಪೀಟರ್ ಡಿಸೋಜ, ಕುಶಲ್ ಕುಮಾರ್ ಬಿ., ಸುಧೀರ್ ಸಾಮಂತ್, ವಿನಾಯಕ್ ಅಂಕೋಲಾ ಮತ್ತಿತರರು ಸಹಕರಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತಿಹಾಸದ ಅವಲೋಕನ ಬದುಕಿನ ಪುನರ್ ವಿಮರ್ಶೆಗೆ ಸಹಾಯಕ: ಶಬಾನ್ ಅಂಜುಮ್

ಕೋಟ, ನ.22: ಇತಿಹಾಸದ ಪಿತಾಮಹ ಹೆರೋಡಟಸ್ ಸಂಸ್ಕೃತಿಗಳ ತಿಳಿಯಲು ಒಂದು ಉತ್ತಮ...

ಆನಂದತೀರ್ಥ: ವಾರ್ಷಿಕ ಕ್ರೀಡಾಕೂಟ

ಕಟಪಾಡಿ, ನ.22: ಪೇಜಾವರ ಮಠದ ಆಡಳಿತಕ್ಕೊಳಪಟ್ಟ ಪಾಜಕ ಆನಂದತೀರ್ಥ ಪ.ಪೂ ಕಾಲೇಜು...

ಸಾಂಸ್ಕೃತಿಕ ಸ್ಪರ್ಧೆ: ಮಣಿಪಾಲ ಜ್ಞಾನಸುಧಾದ ವಿದ್ಯಾರ್ಥಿಗಳ ಅಮೋಘ ಸಾಧನೆ

ಉಡುಪಿ, ನ.22: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಮತ್ತು ಶಾಲಾ ಶಿಕ್ಷಣ...

ಅರುಣ್ಯಾ 2024: ಭಂಡಾರಕಾರ್ಸ್ ಪಿಯು ಕಾಲೇಜು ತಂಡ ಚಾಂಪಿಯನ್

ಬಸ್ರೂರು, ನ.22: ಶ್ರೀ ಶಾರದಾ ಕಾಲೇಜು ಬಸ್ರೂರು ಇಲ್ಲಿ ಉಡುಪಿ ಜಿಲ್ಲಾಮಟ್ಟದ...
error: Content is protected !!