ಉಡುಪಿ, ಆ.12: ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅನುಷ್ಠಾನಗೊಳಿಸಲಾದ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಅರಿವು ಶೈಕ್ಷಣಿಕ ನೇರಸಾಲ ಯೋಜನೆ (ಹೊಸದು), ಅರಿವು-ಶೈಕ್ಷಣಿಕ ನೇರಸಾಲ ಯೋಜನೆ (ನವೀಕರಣ), ಗಂಗಾಕಲ್ಯಾಣ ಯೋಜನೆ, ಬ್ಯಾಂಕ್‌ಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ ಮತ್ತು ವಿದೇಶಿ ವ್ಯಾಸಾಂಗ ಯೋಜನೆಗೆ ಅರ್ಹ ಫಲಾನುಭವಿಗಳು ಬೆಂಗಳೂರು ಒನ್, ಕರ್ನಾಟಕ ಒನ್,ಅಟಲ್ ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರೀಕ ಸೇವಾ ಕೇಂದ್ರಗಳಲ್ಲಿ ಸೇವಾಸಿಂಧು ಪೋರ್ಟಲ್ ಮೂಲಕ ಹಾಗೂ ಸ್ವಾತಂತ್ರ್ಯ ಅಮೃತ ಮುನ್ನಡೆ ಯೋಜನೆಗೆ http://www.kaushalkar.comನಲ್ಲಿ ಆನ್‌ಲೈನ್ ಮೂಲಕ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ. (ಶೈಕ್ಷಣಿಕ ಸಾಲ ಯೋಜನೆಗೆ ಕೊನೆ ದಿನಾಂಕ ಇರುವುದಿಲ್ಲ) ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ https://kvcdcl.karnataka.gov.in ಅಥವಾ ನಿಗಮದ ಕೇಂದ್ರ ಕಚೇರಿಯ ದೂ.ಸಂಖ್ಯೆ: 080-22374848, 7899899039 ಹಾಗೂ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ದೂ.ಸಂಖ್ಯೆ: 0820-2574882 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.