ಉಡುಪಿ, ಆ.13: ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯ ನಶಾಮುಕ್ತ ಭಾರತ ಅಭಿಯಾನ 5 ನೇ ವರ್ಷದ ಆಚರಣೆಯ ಪ್ರಯುಕ್ತವಾಗಿ ಡ್ರಗ್ಸ್ ವಿರುದ್ಧ ಸಾಮೂಹಿಕ ಪ್ರತಿಜ್ಞಾವಿಧಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಮಾದಕ ವ್ಯಸನವು ವ್ಯಸನಿ, ವ್ಯಕ್ತಿ, ಕುಟುಂಬ ಮತ್ತು ಸಮಾಜದ ಮೇಲೆ ಯಾವ ರೀತಿಯ ವಿನಾಶಕಾರಿ ಪರಿಣಾಮ ಬೀರಿದೆ ಎಂಬ ಅಂಶಗಳನ್ನು ತಿಳಿಸಿ ಜಾಗೃತಿ ಮೂಡಿಸಲಾಯಿತು. ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ವೃಂದದವರು, ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ಹಿಂದಿ ಭಾಷಾ ವಿಭಾಗ ಮುಖ್ಯಸ್ಥರಾದ ವಿನಾಯಕ ಜೋಗ್ ರವರು ಪ್ರತಿಜ್ಞಾವಿಧಿ ಬೋಧಿಸಿದರು.