Sunday, November 24, 2024
Sunday, November 24, 2024

ಮಳೆಯಿಂದ ಹಾನಿಗೊಳಗಾದ ಮೂಲಸೌಕರ್ಯಗಳ ಪುನರ್‌ನಿರ್ಮಾಣ ಕಾಮಗಾರಿಯನ್ನು ಕೈಗೊಳ್ಳಿ: ಅಪರ ಜಿಲ್ಲಾಧಿಕಾರಿ

ಮಳೆಯಿಂದ ಹಾನಿಗೊಳಗಾದ ಮೂಲಸೌಕರ್ಯಗಳ ಪುನರ್‌ನಿರ್ಮಾಣ ಕಾಮಗಾರಿಯನ್ನು ಕೈಗೊಳ್ಳಿ: ಅಪರ ಜಿಲ್ಲಾಧಿಕಾರಿ

Date:

ಉಡುಪಿ, ಆ.14: ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಿಂದಾಗಿ ಮೂಲಸೌಕರ್ಯಗಳ ಹಾನಿಯ ಪುನರ್‌ನಿರ್ಮಾಣ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಕೈಗೊಂಡು ಸಾರ್ವಜನಿಕ ಉಪಯೋಗಕ್ಕೆ ಅನುವು ಮಾಡಿಕೊಡಬೇಕು ಎಂದು ಅಪರ ಜಿಲ್ಲಾಧಿಕಾರಿ
ಮಮತಾ ದೇವಿ ಜಿ.ಎಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪ್ರಸಕ್ತ ಸಾಲಿನ ಮುಂಗಾರು ಮಳೆಯು ಜುಲೈ ತಿಂಗಳಿನಲ್ಲಿ ವಾಡಿಕೆ ಮಳೆಗಿಂತ ಶೇ. 41 ರಷ್ಟು ಹೆಚ್ಚುವರಿ ಮಳೆ ಉಂಟಾಗಿ ರಸ್ತೆ, ಮೇಲ್ಸೇತುವೆ, ವಿದ್ಯುತ್‌ಚ್ಛಕ್ತಿ ಕಂಬ, ಟ್ರಾನ್ಸ್ಫಾರ್ಮ್ ಹಾಗೂ ಲೈನ್‌ಗಳು, ಶಾಲೆಗಳು, ಅಂಗನವಾಡಿ ಕಟ್ಟಡಗಳು ಸೇರಿದಂತೆ ಮತ್ತಿತರ ಹಾನಿಯಿಂದಾಗಿ 183 ಕೋಟಿ ರೂ. ಗಳಷ್ಟು ಅಂದಾಜು ನಷ್ಟ ಉಂಟಾಗಿದೆ. ಇವುಗಳ ಪುನರ್ ನಿರ್ಮಾಣ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಕೈಗೊಳ್ಳಬೇಕು ಎಂದರು.

ಮಳೆಗಾಲದಲ್ಲಿ ಸಂಭವಿಸುವ ಭೂಕುಸಿತಗಳಿಂದಾಗುವ ಅಪಾಯಗಳನ್ನು ತಪ್ಪಿಸಿ, ಜನ ಹಾಗೂ ಜಾನುವಾರುಗಳ ಜೀವಕ್ಕೆ ಅಪಾಯವಾಗದಂತೆ ಸಾಕಷ್ಟು ಮುಂಚಿತವಾಗಿಯೇ ಮುನ್ನಚ್ಚರಿಕೆ ವಹಿಸುವ ಉದ್ದೇಶದಿಂದ ಈಗಾಗಲೇ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ವತಿಯಿಂದ ಭೂಕುಸಿತ ಪ್ರದೇಶಗಳನ್ನು ನಿಖರವಾಗಿ ಗುರುತಿಸಲಾಗಿದೆ. ಮಳೆಗಾಲದಲ್ಲಿ ಪ್ರತಿನಿತ್ಯ ಅಂತಹ ಪ್ರದೇಶಗಳ ಸ್ಥಳಗಳನ್ನು ಪರಿಶೀಲಿಸಬೇಕು. ಭೂಕುಸಿತ ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕಾ ತಡೆಗೋಡೆ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದರು. ಮಳೆಯ ಪ್ರಮಾಣ ಕಳೆದ ನಾಲ್ಕೈದು ದಿನಗಳಿಂದ ಕಡಿಮೆಯಾಗಿದ್ದು, ಕೆಲವು ಪ್ರದೇಶಗಳಲ್ಲಿ ಮಳೆಯ ನೀರು ಕೆಲವು ವಸ್ತುಗಳಲ್ಲಿ ಸಂಗ್ರಹಣೆಯಾಗಿ ಸೊಳ್ಳೆಗಳ ಉತ್ಪತ್ತಿ ತಾಣವಾಗಿದೆ. ಇದರಿಂದಾಗಿ ಡೆಂಗ್ಯೂ ಉಲ್ಬಣವಾಗುವ ಸಾಧ್ಯತೆಗಳು ಇವೆ. ಸ್ಥಳೀಯ ಸಂಸ್ಥೆಗಳು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಸಾಂಕ್ರಾಮಿಕ ರೋಗಗಳ ನಿಯಂತ್ರಣ ಹಾಗೂ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವುದರೊಂದಿಗೆ ಡೆಂಗ್ಯೂ ಸೇರಿದಂತೆ ಮತ್ತಿತರ ರೋಗಗಳ ನಿಯಂತ್ರಣಕ್ಕೆ ಮುಂದಾಗಬೇಕು ಎಂದು ಸೂಚನೆ ನೀಡಿದರು.

ಜಿಲ್ಲೆಯಲ್ಲಿ ನೀರಿನಲ್ಲಿ ಯಾವುದೇ ರೀತಿಯ ತೈಲ ಹಾಗೂ ರಾಸಾಯನಿಕ ಸೋರಿಕೆಯ ಅನಿಶ್ಚಿತತೆಗೆ ಪ್ರತಿಕ್ರಿಯಿಸಲು ಸಾಮೂಹಿಕ ಸನ್ನದ್ದತೆ ಅವಶ್ಯವಿದ್ದು, ಇವುಗಳ ನಿರ್ವಹಣೆಗೆ ಜಿಲ್ಲಾ ಮಟ್ಟದಲ್ಲಿ ರಾಷ್ಟ್ರೀಯ ತೈಲ ಸೋರಿಕೆ ವಿಪತ್ತು ನಿರ್ವಹಣಾ ಸಮಿತಿಯನ್ನು ಜಿಲ್ಲಾಮಟ್ಟದಲ್ಲಿ ರಚಿಸಲಾಗಿದೆ. ಸಮುದ್ರ ಸೇರಿದಂತೆ ಜಿಲ್ಲೆಯ ಯಾವುದೇ ಭಾಗದ ನೀರಿನಲ್ಲಿ ತೈಲ ಅಥವಾ ರಾಸಾಯನಿಕ ಸೋರಿಕೆಯಾಗಿ ಪರಿಸರ ಮಾಲಿನ್ಯ ಸಂರಕ್ಷಿಸಲು ಹಾಗೂ ಅಪಾಯವನ್ನು ಕಡಿಮೆಮಾಡಲು ಸಮಿತಿಯು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಬೇಕು ಎಂದರು. ಡೆಂಗ್ಯೂ ಪ್ರಕರಣಗಳು ಹೆಚ್ಚು ಇರುವ ಪ್ರದೇಶ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸಲು ಜಿಂಗಲ್ಸ್, ಎಸ್.ಎಲ್.ಆರ್.ಎಮ್ ವಾಹನಗಳ ಮೂಲಕ ರೋಗ ನಿಯಂತ್ರಣಕ್ಕೆ ಕೈಗೊಳ್ಳಬಹುದಾದದ ಮಾಹಿತಿಗಳನ್ನು ಪ್ರಚಾರಪಡಿಸಬೇಕು ಎಂದ ಅವರು, ಸಣ್ಣ ಗೂಡಂಗಡಿಗಳಲ್ಲಿ ಎಳನೀರು ಬೊಂಡ, ಟೀಕಪ್ ಮುಂತಾದವುಗಳ ವಿಲೇವಾರಿಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು. ಜಿಲ್ಲಾ ವಿಪತ್ತು ನಿರ್ವಹಣಾ ಕ್ರಮಕ್ಕೆ ಈಗಾಗಲೇ ಪಿ.ಡಿ ಖಾತೆಯಲ್ಲಿ 16.93 ಕೋಟಿ ರಷ್ಟು ಅನುದಾನ ಲಭ್ಯವಿದೆ. ತಾಲೂಕು ಮಟ್ಟದ ತಹಶೀಲ್ದಾರರ ವಿಪತ್ತು ಪಿ.ಡಿ ಖಾತೆಯಲ್ಲಿ 2.61 ಕೋಟಿ ರೂ. ಅನುದಾನ ಲಭ್ಯವಿದ್ದು, ಬರ ನಿರ್ವಹಣೆಗೆ ಸಂಬಂಧಿಸಿದಂತೆ ಅನುದಾನ ಬಳಸಿಕೊಳ್ಳಬಹುದಾಗಿದೆ ಎಂದರು.

ಸಭೆಯಲ್ಲಿ ಸಹಾಯಕ ಕಮೀಷನರ್ ಮಹೇಶ್ಚಂದ್ರ, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಉಪನಿರ್ದೇಶಕ ರವೀಂದ್ರ, ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ ವಿ ನಾಯಕ್, ಪೌರಾಯುಕ್ತ ರಾಯಪ್ಪ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ತಹಶೀಲ್ದಾರ್‌ಗಳು, ಹಾಗೂ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನ.28: ನರೇಂದ್ರ ಎಸ್ ಗಂಗೊಳ್ಳಿ ಅವರ ‘ನಿಭೃತ’ ಪತ್ತೇದಾರಿ ಕಾದಂಬರಿ ಬಿಡುಗಡೆ

ಉಡುಪಿ, ನ.23: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮತ್ತು...

ವಯನಾಡ್: ಪ್ರಿಯಾಂಕಾ ಗಾಂಧಿಗೆ ಐತಿಹಾಸಿಕ ಗೆಲುವು

ವಯನಾಡ್, ನ.23: ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ನಾಯಕಿ...

ಉಪಚುನಾವಣೆಯಲ್ಲಿ ಕಾಂಗ್ರೆಸ್ ಕ್ಲೀನ್ ಸ್ವೀಪ್- ನಮ್ಮ ಕಾರ್ಯಕರ್ತರ ಅವಿರತ ಶ್ರಮದ ಗೆಲುವು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ನ.23: ಕರ್ನಾಟಕದಲ್ಲಿ ನಡೆದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್...

ಮಹಾರಾಷ್ಟ್ರದ ಗೆಲುವು ಅಭಿವೃದ್ಧಿ ಮತ್ತು ಉತ್ತಮ ಆಡಳಿತದ ಗೆಲುವು: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ನ.23: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಗೆಲುವು ಉತ್ತಮ...
error: Content is protected !!