ಕಾಪು, ಆ.14: ಕಾಪು ಮಂಡಲ ಬಿಜೆಪಿ ಯುವಮೋರ್ಚಾ ವತಿಯಿಂದ ಬೆಳಪು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಮ್ಮಿಕೊಳ್ಳಲಾದ ‘ಹರ್ ಘರ್ ತಿರಂಗಾ’ ಅಭಿಯಾನಕ್ಕೆ ಸುರೇಂದ್ರ ಪಣಿಯೂರು ಅವರ ಮನೆಯಲ್ಲಿ ತ್ರಿವರ್ಣ ಧ್ವಜ ನೀಡುವ ಮೂಲಕ ಚಾಲನೆ ನೀಡಲಾಯಿತು.
ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಮಂಡಲ ಬಿಜೆಪಿ ಅಧ್ಯಕ್ಷ ಜಿತೇಂದ್ರ ಶೆಟ್ಟಿ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ, ಕಾಪು ಮಂಡಲ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಸೋನು ಪಾಂಗಾಳ, ಉಚ್ಚಿಲ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಚಂದ್ರಶೇಖರ್, ಬೆಳಪು ಶಕ್ತಿ ಕೇಂದ್ರದ ಸುರೇಶ್ ದೇವಾಡಿಗ, ಬೆಳಪು ಗ್ರಾಮ ಪಂಚಾಯತ್ ಸದಸ್ಯ ಪ್ರಕಾಶ್ ಭಟ್ ಹಾಗೂ ಕಾಪು ಮಂಡಲ ಬಿಜೆಪಿ ಯುವಮೋರ್ಚಾದ ಪದಾಧಿಕಾರಿಗಳು ಉಪಸ್ಥಿತರಿದ್ದರು.