Monday, November 25, 2024
Monday, November 25, 2024

ಆರೋಗ್ಯ ನಿಗಾ ಸಹಾಯಕರ ತರಬೇತಿ (ಹೋಮ್ ನರ್ಸಿಂಗ್): ಅರ್ಜಿ ಆಹ್ವಾನ

ಆರೋಗ್ಯ ನಿಗಾ ಸಹಾಯಕರ ತರಬೇತಿ (ಹೋಮ್ ನರ್ಸಿಂಗ್): ಅರ್ಜಿ ಆಹ್ವಾನ

Date:

ಉಡುಪಿ, ಆ.15: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ಉಡುಪಿ ಜಿಲ್ಲಾ ಘಟಕದ ವತಿಯಿಂದ ಒಂದು ತಿಂಗಳ ಉದ್ಯೋಗಾಧಾರಿತ ಆರೋಗ್ಯ ನಿಗಾ ಸಹಾಯಕರ ತರಬೇತಿಗಾಗಿ 18 ರಿಂದ 30 ವರ್ಷದ ವರೆಗಿನ ವಯೋಮಿತಿಯ ಎಸ್.ಎಸ್.ಎಲ್.ಸಿ ಅಥವಾ ಪಿಯುಸಿ ಉತ್ತೀರ್ಣ/ ಅನುತ್ತೀರ್ಣ ಅಥವಾ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರುವ ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತ ಸರಕಾರದ ಕೌಶಲ್ಯಾಭಿವೃದ್ಧಿ ಮಂತ್ರಾಲಯದ ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮದ ಮಾನ್ಯತೆ ಪಡೆದ ಪಠ್ಯ ಕ್ರಮದಲ್ಲಿ ತರಬೇತಿ ನೀಡಲಾಗುವುದು. ಒಂದು ತಿಂಗಳ ತರಬೇತಿಯ ಅವಧಿಯಲ್ಲಿ ಊಟೋಪಚಾರ ಮತ್ತು ಅಗತ್ಯವಿರುವವರಿಗೆ ವಸತಿ ಸೌಲಭ್ಯ ಒದಗಿಸಲಾಗುವುದು. ತರಬೇತಿಯನ್ನು ಯಶಸ್ವಿಯಾಗಿ ಪೂರೈಸಿದ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶವನ್ನು ಒದಗಿಸಲಾಗುವುದು.

ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ರೆಡ್‌ಕ್ರಾಸ್ ಕಛೇರಿ, ದೂ.ಸಂಖ್ಯೆ: 0820 – 2532222 ಅಥವಾ ಕಾರ್ಯದರ್ಶಿ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ರೆಡ್‌ಕ್ರಾಸ್ ಭವನ, ಅಜ್ಜರಕಾಡು ಉಡುಪಿ ಮೊ. 8310311448 ಅಥವಾ 9741762007 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರೆಡ್‌ಕ್ರಾಸ್ ಸಂಸ್ಥೆಯ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!