ಗಣಿತನಗರ, ಆ.15: ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ೭೮ನೇ ಧ್ವಜಾರೋಹಣವನ್ನು ಮಾಜಿ ನೌಕಾಧಿಕಾರಿ, ಲೆ.ಕಮಾಂಡರ್ ಭರತ್ ಕುಮಾರ್ ನೆರವೇರಿಸಿದರು. ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದ ಅವರು, ದೇಶಭಕ್ತಿಯು ನಮ್ಮ ಪ್ರತಿ ಕೆಲಸ ಕಾರ್ಯದಲ್ಲೂ ಇರಬೇಕು. ನಮ್ಮ ಪ್ರಧಾನಿಯವರ ಕನಸಾದ ಸದೃಢ ಭಾರತ ನಿರ್ಮಾಣದಲ್ಲಿ ನಾವೆಲ್ಲರೂ ನಮ್ಮ ಪಾತ್ರವನ್ನು ಧನಾತ್ಮಕ ಚಿಂತನೆಗಳ ಮೂಲಕ ಸಾಕಾರಗೊಳಿಸಬೇಕು ಎಂದರು. ಅದೆಷ್ಟೋ ಹೋರಾಟಗಾರರ ಯಶೋಗಾಥೆಗಳು ನಮಗೆ ಆದರ್ಶನೀಯ ಎಂದರು.
ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿ, ಟ್ರಸ್ಟಿ ಸಿ.ಎ. ನಿತ್ಯಾನಂದ ಪ್ರಭು, ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಕಾರ್ಯನಿರ್ವಹಣಾಧಿಕಾರಿ ಹಾಗೂ ಪ್ರಾಂಶುಪಾಲ ದಿನೇಶ್ ಎಂ ಕೊಡವೂರ್, ಉಪಪ್ರಾಂಶುಪಾಲ ಸಾಹಿತ್ಯ ಹಾಗೂ ಉಷಾ ರಾವ್ ಯು ಮತ್ತು ಪ್ರೌಢಶಾಲಾ ವಿಭಾಗದ ಉಪಪ್ರಾಂಶುಪಾಲೆ ವಾಣಿ ಕೆ ಉಪಸ್ಥಿತರಿದ್ದರು. ಸಂಸ್ಥೆಯ ಸಾರ್ವಜನಿಕ ಸಂಪರ್ಕಾದಿಕಾರಿ ಜ್ಯೋತಿ ಪದ್ಮನಾಭ ಭಂಡಿ ವಂದಿಸಿದರು. ಕನ್ನಡ ಉಪನ್ಯಾಸಕ ಸಂತೋಷ್ ನೆಲ್ಲಿಕಾರು ನಿರೂಪಿಸಿದರು.