Friday, September 20, 2024
Friday, September 20, 2024

ಅ.28- ರಾಜ್ಯಾದ್ಯಂತ ಏಕಕಾಲದಲ್ಲಿ ಕನ್ನಡ ಗೀತೆಗಳ ಗಾಯನ: ಸಚಿವ ವಿ. ಸುನೀಲ್ ಕುಮಾರ್

ಅ.28- ರಾಜ್ಯಾದ್ಯಂತ ಏಕಕಾಲದಲ್ಲಿ ಕನ್ನಡ ಗೀತೆಗಳ ಗಾಯನ: ಸಚಿವ ವಿ. ಸುನೀಲ್ ಕುಮಾರ್

Date:

ಉಡುಪಿ: ಅಕ್ಟೋಬರ್ 28ರಂದು ಬೆಳಗ್ಗೆ 11 ಗಂಟೆಗೆ ರಾಜ್ಯಾದ್ಯಂತ ಏಕಕಾಲದಲ್ಲಿ ಕನ್ನಡದ ಶ್ರೇಷ್ಠತೆಯನ್ನು ಸಾರುವ ಬಾರಿಸು ಕನ್ನಡ ಡಿಂಡಿಮವ, ಜೋಗದ ಸಿರಿ ಬೆಳಕಿನಲ್ಲಿ, ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಈ ಗೀತೆಗಳನ್ನು ಹಾಡಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ಸೂಚನೆ ನೀಡಿದರು.

ಅವರು ಇಂದು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿ ಸೂಚನೆಗಳನ್ನು ನೀಡಿದರು.

ಎಲ್ಲಾ ಜಿಲ್ಲೆಗಳ ಪ್ರಮುಖ ಪ್ರವಾಸಿ ತಾಣಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ತಿಳಿಸಿದ ಸಚಿವರು, ಇದನ್ನು ಸರ್ಕಾರಿ ಕಾರ್ಯಕ್ರಮವಾಗಿ ಮಾತ್ರ ನಡೆಸದೇ ಎಲ್ಲಾ ಸಾರ್ವಜನಿಕರು ಮತ್ತು ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಅಭೂತಪೂರ್ವವಾಗಿ ಆಯೋಜಿಸಿ, ಎಲ್ಲಾ ಜಿಲ್ಲೆಗಳಲ್ಲಿ ನಡೆಯುವ ಕಾರ್ಯಕ್ರಮಗಳನ್ನು ಆನ್ ಲೈನ್ ಮೂಲಕ ಸಹ ವೀಕ್ಷಿಸಲು ಅನುಕೂಲವಾಗುವಂತೆ ಕ್ರಮ ಕೈಗೊಳ್ಳಿ. ಕಾರ್ಯಕ್ರಮದ ಸಂಪೂರ್ಣ ವೀಡಿಯೋ ಚಿತ್ರೀಕರಣ, ಡ್ರೋಣ್ ಚಿತ್ರೀಕರಣ, ಕಾರ್ಯಕ್ರಮದಲ್ಲಿ ಭಾಗವಹಿಸುವ ಜನಸಂಖ್ಯೆಯ ವಿವರ ಎಲ್ಲವನ್ನೂ ವ್ಯವಸ್ಥಿತ ರೀತಿಯಲ್ಲಿ ದಾಖಲೀಕರಣ ಮಾಡುವಂತೆ ಸೂಚಿಸಿದರು.

ಕಾರ್ಯಕ್ರಮ ಆಯೋಜಿಸುವಾಗ ಆರಂಭದಲ್ಲಿ ಯಾವುದೇ ಭಾಷಣ ಕಾರ್ಯಕ್ರಮ ಮಾಡಬೇಡಿ, 10.45 ಕ್ಕೆ ನಿಗಧಿತ ಜಾಗದಲ್ಲಿ ಸಮಾಪನಗೊಂಡು ಸರಿಯಾಗಿ ೧೧ ಗಂಟೆಗೆ ಹಾಡಲು ಆರಂಭಿಸಬೇಕು, ಈ 3 ಗೀತೆಗಳ ಜೊತೆಗೆ ಕನ್ನಡ ನಾಡು ನುಡಿಯ ಮಹತ್ವ ಇರುವ ಇತರೆ ಗೀತೆಗಳನ್ನು ಹಾಡಬಹುದಾಗಿದ್ದು, ಕೊನೆಯಲ್ಲಿ ಕನ್ನಡದ ಬಳಕೆ ಕುರಿತು ಸಂಕಲ್ಪ ಮಾಡಬೇಕು ಎಂದು ಸಚಿವರು ಹೇಳಿದರು.

ವಿಮಾನ ನಿಲ್ದಾಣ ಮುಂಭಾಗ, ಮೆಟ್ರೋದಲ್ಲಿ, ಆಟೋ ರಿಕ್ಷಾ ಸಂಘಗಳಲ್ಲಿ, ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ, ಮಾಲ್‌ಗಳಲ್ಲಿ, ವಸತಿ ಸಮುಚ್ಛಯಗಳಲ್ಲಿ, ರಾಜ್ಯದ ಗಡಿ ನಾಡ ಜಿಲ್ಲೆಗಳಲ್ಲಿ ಮತ್ತು ಗಡಿ ಭಾಗದಲ್ಲಿ ವಿಶೇಷವಾಗಿ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಸಚಿವರು ತಿಳಿಸಿದರು.

ಉಡುಪಿ ಜಿಲ್ಲೆಯಲ್ಲಿ ಶ್ರೀ ಕೃಷ್ಣ ಮಠದ ಮುಂಭಾಗ, ಮಲ್ಪೆ ಸೀ ವಾಕ್, ಮಲ್ಪೆ ಸಮುದ್ರದಲ್ಲಿ ದೋಣಿಯಲ್ಲಿ, ಕಾಪು ಲೈಟ್ ಹೌಸ್, ಪಡುಬಿದ್ರಿ ಬ್ಲೂ ಫ್ಲಾಗ್ ಬೀಚ್, ಕೊಲ್ಲೂರು ದೇವಾಲಯ ಮುಂಭಾಗ, ಕಾರ್ಕಳ ಗೊಮ್ಮಟ ಬೆಟ್ಟದ ಬಳಿ ಸೇರಿದಂತೆ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳು, ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳು, ಕೈಗಾರಿಕೆಗಳು, ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಕಾಲೇಜಿನಲ್ಲಿ ಹಾಗೂ ಎಲ್ಲಾ ಪಂಚಾಯತ್‌ಗಳು, ಜಿಲ್ಲೆಯಲ್ಲಿರುವ ರಾಷ್ಟಿçÃಕೃತ ಬ್ಯಾಂಕ್‌ಗಳ ಪ್ರಾದೇಶಿಕ ಕಚೇರಿಗಳಲ್ಲಿ, ಎಲ್ಲಾ ಸರ್ಕಾರಿ ಕಚೇರಿಗಳಲ್ಲಿಯೂ ಸಹ ಕಾರ್ಯಕ್ರಮ ಆಯೋಜಿಸಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಭಾರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್ ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಹಾಗೂ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!