ಕೋಟ, ಆ.15: ದೇಶ ಕಾಯುವ ಕಾಯಕ ಶ್ರೇಷ್ಠವಾದದ್ದು. ಅದರ ಬಗ್ಗೆ ತಪ್ಪು ಕಲ್ಪನೆ ಸಲ್ಲದು ಎಂದು ನಿವೃತ್ತ ಯೋಧ ಮಣೂರು ಪಡುಕರೆಯ ಯೋಗೀಶ್ ಕಾಂಚನ್ ಹೇಳಿದರು ಪಂಚವರ್ಣ ಕಛೇರಿಯಲ್ಲಿ ಪಂಚವರ್ಣ ಯುವಕ ಮಂಡಲ ಕೋಟ ಹಾಗೂ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಕೋಟ ಇದರ ಆಶ್ರಯದಲ್ಲಿ 78 ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಸೇನೆಯಲ್ಲಿ ತಮ್ಮ ಮಕ್ಕಳನ್ನು ಸೇರಿಸುವ ಬಗ್ಗೆ ಕೆಲ ತಾಯಂದಿರಲ್ಲಿ ಗೊಂದಲ ಮೂಡಿದೆ. ಸೇನೆಗೆ ಸೇರುವವರು ಸಾಯುವುದಕ್ಕೆ ಎಂಬ ತಪ್ಪು ಕಲ್ಪನೆಯನ್ನು ಹೊರದಬ್ಬಿ ದೇಶಾಭಿಮಾನದ ಬೀಜ ಬಿತ್ತಿ. ಸಾಮಾಜಸೇವೆಯ ಮೂಲಕ ದೇಶ ಕಾಯುವ ಕೆಲಸ ಪಂಚವರ್ಣ ಸಂಸ್ಥೆಯಿಂದಲೂ ಆಗುತ್ತಿದೆ ಎಂದರು.
ಸಂಸ್ಥೆಯ ವತಿಯಿಂದ ನಿವೃತ್ತ ಯೋಧ ಯೋಗೀಶ್ ಕಾಂಚನ್ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್ ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ ಕೋಟ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುರೇಶ್ ಬಂಗೇರ, ಕಾರ್ಯದರ್ಶಿ ಶೇಖರ್ ಮರವಂತೆ, ಪಂಚವರ್ಣದ ಗೌರವಾಧ್ಯಕ್ಷ ಸತೀಶ್ ಹೆಚ್ ಕುಂದರ್, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಪಂಚವರ್ಣದ ಸ್ಥಾಪಾಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ ಇದ್ದರು. ಪಂಚವರ್ಣ ಮಹಿಳಾ ಮಂಡಲದ ಸದಸ್ಯರು ದೇಶ ಭಕ್ತಿಯ ಗೀತಾ ಗಾಯನ ನಡೆಸಿಕೊಟ್ಟರು. ಸದಸ್ಯರಾದ ದಿನೇಶ್ ಆಚಾರ್ ಸಹಕರಿಸಿದರು. ಪಂಚವರ್ಣದ ಸದಸ್ಯ ಮಹೇಶ್ ಬೆಳಗಾವಿ ಸ್ವಾಗತಿಸಿ, ಮಹಿಳಾ ಮಂಡಲದ ಉಪಾಧ್ಯಕ್ಷೆ ಪುಷ್ಭಾ ಹಂದಟ್ಟು ಪ್ರಾಸ್ತಾವಿಕವಾಗಿ ಮಾತನಾಡಿದರು. ಮಹಿಳಾ ಮಂಡಲದ ಸಂಚಾಲಕಿ ಸುಜಾತ ಬಾಯರಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಾಧ್ಯಕ್ಷ ರವೀಂದ್ರ ಕೋಟ ವಂದಿಸಿ ಸಂಯೋಜಿಸಿದರು.