ಕಾರ್ಕಳ, ಆ.15: ಕರ್ನಾಟಕ ವಿಧಾನ ಪರಿಷತ್ತಿನ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿದರು. ಸ್ವಾತಂತ್ರ್ಯದ ಕನಸುಗಾರರು ಸ್ವಾತಂತ್ರ್ಯವ ನಮಗೆ ಧಾರೆಯನೆರೆದರು. ಅದನ್ನು ನಾವು ಉಳಿಸೋಣ. ಉಳಿಸಿ ಮುಂದಕ್ಕೆ ಬೆಳೆಸೋಣ ಎಂಬ ಸಂದೇಶವನ್ನು ನೀಡಿದರು. ದೇಶಕ್ಕಾಗಿ ಬದುಕುವ ಮೂಲಕ ನಮ್ಮ ಸೈನಿಕರು ಮತ್ತು ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವನ್ನು ಗೌರವಿಸಬೇಕು. ನಮ್ಮ ದೇಶವನ್ನು ನಮ್ಮ ತಾಯಿ ಎಂದು ಗೌರವಿಸಿ ಎಂದರು.
ಧ್ವಜಾರೋಹಣದ ಬಳಿಕ ಮಜಾ ಟಾಕೀಸ್ ಖ್ಯಾತಿಯ ಮೋಹನ್ ಕಾರ್ಕಳ ಮತ್ತು ತಂಡದವರಿಂದ ‘ಕ್ರಿಯೇಟಿವ್ ಸವಿಗಾನ’ ಎಂಬ ಶೀರ್ಷಿಕೆಯಡಿ ದೇಶಭಕ್ತಿ ಗೀತೆ ಮತ್ತು ಸದಭಿರುಚಿಯ ಗೀತಗಾಯನ ಕಾರ್ಯಕ್ರಮ ‘ಸಪ್ತಸ್ವರ’ ವೇದಿಕೆಯಲ್ಲಿ ಜರುಗಿತು. ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ವೃಂದದವರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಆಂಗ್ಲ ಭಾಷಾ ವಿಭಾಗ ಮುಖ್ಯಸ್ಥರಾದ ರಾಜೇಶ್ ಶೆಟ್ಟಿ ಹಾಗೂ ಜೀವಶಾಸ್ತ್ರ ವಿಭಾಗ ಮುಖ್ಯಸ್ಥರಾದ ಲೋಹಿತ್ ಎಸ್ ಕೆ ಕಾರ್ಯಕ್ರಮ ನಿರೂಪಿಸಿದರು.