Sunday, January 19, 2025
Sunday, January 19, 2025

ಶರಣರ ಜೀವನಶೈಲಿ ಅನುಸರಿಸಿ: ಅಪರ ಜಿಲ್ಲಾಧಿಕಾರಿ

ಶರಣರ ಜೀವನಶೈಲಿ ಅನುಸರಿಸಿ: ಅಪರ ಜಿಲ್ಲಾಧಿಕಾರಿ

Date:

ಶರಣರ ಜೀವನಶೈಲಿ ಅನುಸರಿಸಿ: ಅಪರ ಜಿಲ್ಲಾಧಿಕಾರಿ

ಉಡುಪಿ, ಆ.19: 12 ನೇ ಶತಮಾನದಲ್ಲಿ ಬಸವಣ್ಣನವರ ವ್ಯಕ್ತಿತ್ವ ಹಾಗೂ ವಚನಗಳಿಂದ ಪ್ರಭಾವಿತರಾಗಿ ಅವರೊಂದಿಗೆ ಇದ್ದು, ತಮ್ಮ ಕಾಯಕ ನಿಷ್ಠೆಯಿಂದ ವಚನಗಳನ್ನು ರಚಿಸಿ, ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಕೆಲಸ ಮಾಡಿದ್ದಾರೆ. ಇಂತಹ ಶರಣರ ಜೀವನ ಶೈಲಿಯನ್ನು ಪ್ರತಿಯೊಬ್ಬರೂ ಅನುಸರಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಹೇಳಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ವತಿಯಿಂದ ನಡೆದ ಶ್ರೀ ನುಲಿಯ ಚಂದಯ್ಯ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ನುಲಿಯ ಚಂದಯ್ಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡುತ್ತಿದ್ದರು. ಕಾಯಕವೇ ಕೈಲಾಸ ಎಂಬ ಬಸವಣ್ಣನವರ ತತ್ವವನ್ನು ಪಾಲಿಸಿದವರಲ್ಲಿ ನುಲಿಯ ಚಂದಯ್ಯ ಕೂಡ ಒಬ್ಬರು. ಅರಣ್ಯದಲ್ಲಿ ಬೆಳೆದ ಹುಲ್ಲಿನಿಂದ ಹಗ್ಗವನ್ನು ಹೊಸೆದು ಮಾರಿ ಬಂದ ಹಣದಿಂದ ಜೀವನ ನಡೆಸುವುದರೊಂದಿಗೆ ಸಾಮಾಜಿಕ ಕಾರ್ಯಗಳಿಗೂ ವ್ಯಯಿಸುತ್ತಿದ್ದರು. ಅವರ ವಚನಗಳಲ್ಲಿ ಕಾಯಕ ಮತ್ತು ದಾಸೋಹಕ್ಕೆ ಹೆಚ್ಚಿನ ಒತ್ತು ನೀಡಿದ್ದರು ಎಂದರು.

ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಉಪನ್ಯಾಸ ನೀಡಿ ಮಾತನಾಡುತ್ತಾ, 12 ನೇ ಶತಮಾನದ ಶಿವಶರಣರಲ್ಲಿ ನುಲಿಯ ಚಂದಯ್ಯ ಸಹ ಒಬ್ಬರು. ಶರಣ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದರಿಂದ ಪ್ರಚಲಿತ ಸಮಸ್ಯೆಗಳಿಗೆ ಪರಿಹಾರ ದೊರಕುತ್ತದೆ. ಕಾಯಕ ತತ್ವದ ಮೂಲಕ ಶಿವಶರಣರಲ್ಲಿ ಅಗ್ರಗಣ್ಯರಾದ ಇವರು ಸಮಾಜಮುಖಿ ಕೆಲಸದ ಜೊತೆಗೆ ಪ್ರತಿಯೊಬ್ಬರಿಗೂ ಆದರ್ಶಪ್ರಾಯರಾಗಿದ್ದಾರೆ. ಕಲ್ಯಾಣ ಕ್ರಾಂತಿ ಸಂದರ್ಭದಲ್ಲಿ ಶರಣರ ವಚನಗಳನ್ನು ರಕ್ಷಿಸುವುದರೊಂದಿಗೆ ಸಮಾಜದ ಅಭ್ಯುಧ್ಯಕ್ಕೆ ತಮ್ಮದೇ ರೀತಿಯಲ್ಲಿ ಕೊಡುಗೆ ನೀಡಿದ್ದಾರೆ. ಶರಣ ಸಂಸ್ಕೃತಿ, ಶರಣರ ತತ್ವ-ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಅದು ನಮ್ಮ ವ್ಯಕ್ತಿತ್ವವನ್ನು ಬೆಳೆಸುತ್ತದೆ ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾ ಅಧಿಕಾರಿ ಅನುರಾಧ ಹಾದಿಮನಿ, ಕನ್ನಡ ಸಾಹಿತ್ಯ ಪರಿಷತ್ತು ಮಾಧ್ಯಮ ಕಾರ್ಯದರ್ಶಿ ನರಸಿಂಹಮೂರ್ತಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ, ನಿರೂಪಿಸಿದರೆ, ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಉಡುಪಿ ಮತ್ತು ದ. ಕನ್ನಡದ ಜಿಲ್ಲಾ ಅಧ್ಯಕ್ಷ ಸಿದ್ದಬಸಯ್ಯ ಸ್ಯಾಮಿ ಚಿಕ್ಕಮಠ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!