ಉಡುಪಿ, ಆ.20: ನವೆಂಬರ್ ತಿಂಗಳ 17 ಮತ್ತು 18ರಂದು ನಡೆಯಲಿರುವ ಉಡುಪಿಯ ನ್ಯಾಯಾಲಯ ಮತ್ತು ವಕೀಲರ ಸಂಘದ ಶತಮಾನೋತ್ತರ ಬೆಳ್ಳಿಹಬ್ಬ (125ನೇ ವಾರ್ಷಿಕೋತ್ಸವ) ವನ್ನು ಉದ್ಘಾಟಿಸುವಂತೆ ಉಡುಪಿ ವಕೀಲರ ಸಂಘದ ನಿಯೋಗವು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರನ್ನು ಭೇಟಿಯಾಗಿ ಆಹ್ವಾನಿಸಲಾಯಿತು. ನಿಯೋಗದಲ್ಲಿ ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್, ಪದಾಧಿಕಾರಿಗಳಾದ ಆರೂರು ಸುಕೇಶ್ ಶೆಟ್ಟಿ, ಗಂಗಾಧರ ಎಚ್.ಎಮ್., ನ್ಯಾಯವಾದಿ ಶಿವಾನಂದ ಅಮೀನ್, ಹಿರಿಯ ವಕೀಲರಾದ ಆನಂದ ಮಡಿವಾಳ ಮತ್ತು ಜಯಕೃಷ್ಣ ಆಳ್ವ, ಹೈಕೋರ್ಟ್ ನ್ಯಾಯವಾದಿ ಹಾಗೂ ಲೋಕಾಯುಕ್ತ ವಿಶೇಷ ಅಭಿಯೋಜಕರಾದ ಪ್ರಸನ್ನ ಶೆಟ್ಟಿ ಉಪಸ್ಥಿತರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಿಗೆ ಆಹ್ವಾನ
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಿಗೆ ಆಹ್ವಾನ
Date: