ಉಡುಪಿ, ಆ.21: ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ 80 ಬಡಗಬೆಟ್ಟು ಶಾಂತಿನಗರ ಶ್ರೀ ಗಣೇಶ ಸಭಾಭವನದಲ್ಲಿ ಮಂಗಳಮುಖಿ ಸಹೋದರಿಯರೊಂದಿಗೆ ರಕ್ಷಾ ಬಂಧನ ಕಾರ್ಯಕ್ರಮ ನಡೆಯಿತು.
ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಂಡಲ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷರಾದ ಸಂತೋಷ್ ಕುಮಾರ್ ಮೂಡುಬೆಳ್ಳೆ, ಕಾಪು ಮಂಡಲ ಬಿಜೆಪಿ ಉಪಾಧ್ಯಕ್ಷರಾದ ಸಂದೀಪ್ ಶೆಟ್ಟಿ, 80 ಬಡಗಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೇಶವ ಕೋಟ್ಯಾನ್, ಸದಸ್ಯರಾದ ಸುನೀತಾ ಶೆಟ್ಟಿಗಾರ್, ರಾಷ್ಟ್ರೀಯ ಮಹಿಳಾ ಆಯೋಗದ ಮಾಜಿ ಸದಸ್ಯರಾದ ಶ್ಯಾಮಲ ಕುಂದರ್, ರಾಜ್ಯ ಬಿಜೆಪಿ ಮಾಜಿ ಉಪಾಧ್ಯಕ್ಷರಾದ ನಯನ ಗಣೇಶ್, ಹಿಂದುಳಿದ ವರ್ಗಗಳ ಮೋರ್ಚಾ ಕಾಪು ಮಂಡಲ ಉಸ್ತುವಾರಿಗಳಾದ ರಾಜೇಂದ್ರ ಪಂದುಬೆಟ್ಟು, ಕಾಪು ಮಂಡಲ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ರವಿ ಕೋಟ್ಯಾನ್, ಆಶ್ರಯ ಸಮುದಾಯ ಸಂಘದ ಕೋಶಾಧಿಕಾರಿಗಳಾದ ಲಾವಣ್ಯ ಉಪಸ್ಥಿತರಿದ್ದರು.