ಕುಂದಾಪುರ, ಆ.22: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗ್ರಂಥಾಲಯದಲ್ಲಿ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ ಕಾರ್ಯಕ್ರಮ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ, ಗ್ರಂಥಾಲಯ ವಿಜ್ಞಾನದ ಪಿತಾಮಹ ಪದ್ಮಶ್ರೀ ಪುರಸ್ಕೃತ ಡಾ. ಎಸ್.ಆರ್. ರಂಗನಾಥನ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಗ್ರಂಥಾಲಯವು ಜ್ಞಾನಾರ್ಜನೆಯೊಂದಿಗೆ ಶಿಸ್ತುಬದ್ಧ ಜೀವನ ಕೌಶಲ್ಯವನ್ನು ಬೆಳೆಸುವ ಸ್ಥಳ, ಹೀಗಾಗಿ ಇದರ ಸದುಪಯೋಗ ಮಾಡಿಕೊಳ್ಳಬೇಕು ಎಂದರು. ಹೆಬ್ರಿ ಅಮೃತ ಭಾರತಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಅಮರೇಶ್ ಹೆಗ್ಡೆ, ಉಪ-ಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ, ಗ್ರಂಥಪಾಲಕ ಮಹೇಶ್ ನಾಯ್ಕ್, ಬೋಧಕ, ಬೋಧಕೇತರರು ಉಪಸ್ಥಿತರಿದ್ದರು.
ಗ್ರಂಥಪಾಲಕರ ದಿನಾಚರಣೆ

ಗ್ರಂಥಪಾಲಕರ ದಿನಾಚರಣೆ
Date: