Monday, November 25, 2024
Monday, November 25, 2024

ಬಡಗಬೆಟ್ಟು ಗ್ರಾ.ಪಂ: ತೆರಿಗೆ ಪರಿಷ್ಕರಣೆ ಪಟ್ಟಿ ಪ್ರಕಟ

ಬಡಗಬೆಟ್ಟು ಗ್ರಾ.ಪಂ: ತೆರಿಗೆ ಪರಿಷ್ಕರಣೆ ಪಟ್ಟಿ ಪ್ರಕಟ

Date:

ಉಡುಪಿ, ಆ.22: 80 ಬಡಗಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಗೆ ಸಂಬಂಧಿಸಿದಂತೆ ಪ್ರಸಕ್ತ ಸಾಲಿನ ಏಪ್ರಿಲ್ 01 ರಿಂದ ಅನ್ವಯವಾಗುವಂತೆ ಕಟ್ಟಡ, ಭೂಮಿ ತೆರಿಗೆ ಹಾಗೂ ಇತರೇ ಶುಲ್ಕಗಳನ್ನು ಪರಿಷ್ಕರಣೆ ಮಾಡಲಾಗಿರುತ್ತದೆ. ಕಟ್ಟಡಗಳ ಪರಿಷ್ಕೃತ ತೆರಿಗೆ ನಿರ್ಧರಣಾ ಪಟ್ಟಿಗೆ ಸಂಬಂಧಿಸಿದಂತೆ ನಿರ್ಧರಿಸಲಾದ ತೆರಿಗೆ, ಕಟ್ಟಡದ ಮಾಲಕತ್ವ, ಇತ್ಯಾದಿ ಬಗ್ಗೆ ಕಟ್ಟಡ ಮಾಲಕರು ಹಾಗೂ ಅನುಬೋಗಧಾರಿಂದ ಯಾವುದೇ ಆಕ್ಷೇಪಣೆಗಳು ಇದ್ದಲ್ಲಿ ಪೂರಕ ದಾಖಲೆಗಳೊಂದಿಗೆ ಲಿಖಿತ ಆಕ್ಷೇಪಣೆ ಅರ್ಜಿಯನ್ನು ಪ್ರಕಟಣೆಯ ದಿನಾಂಕದಿಂದ 30 ದಿನಗಳ ಒಳಗಾಗಿ ಕಚೇರಿ ಅವಧಿಯಲ್ಲಿ ಬಡಗಬೆಟ್ಟು ಗ್ರಾಮ ಪಂಚಾಯತ್ ಕಚೇರಿಗೆ ಸಲ್ಲಿಸಬಹುದಾಗಿದೆ. ನಿಗದಿತ ಆಕ್ಷೇಪಣಾ ಅವಧಿಯ ನಂತರ ಆಕ್ಷೇಪಣಾ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಹಾಗೂ ಪರಿಷ್ಕೃತ ತೆರಿಗೆ ನಿರ್ಧರಣಾ ಪಟ್ಟಿಯನ್ನು ನಿಯಮಾನುಸಾರ ಖಾಯಂ ಮಾಡಲಾಗುವುದು ಎಂದು ಬಡಗಬೆಟ್ಟು ಗ್ರಾಮ ಪಂಚಾಯತ್‌ನ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...

ತುಳು ಭಾವಗೀತೆ ಸ್ಪರ್ಧೆ

ಉಡುಪಿ, ನ.24: ತುಳುಕೂಟ ಉಡುಪಿ (ರಿ,) ವತಿಯಿಂದ ದಿ. ನಿಟ್ಟೂರು ಸಂಜೀವ...

ನ.28: ನರೇಂದ್ರ ಎಸ್ ಗಂಗೊಳ್ಳಿ ಅವರ ‘ನಿಭೃತ’ ಪತ್ತೇದಾರಿ ಕಾದಂಬರಿ ಬಿಡುಗಡೆ

ಉಡುಪಿ, ನ.23: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮತ್ತು...
error: Content is protected !!