ಉಡುಪಿ, ಆ.23: ಜಿಲ್ಲೆಯಲ್ಲಿ ಮೂಲನಿವಾಸಿಗಳಾದ ಕೊರಗ ಸಮುದಾಯದವರಿಗೆ ಪ್ರಧಾನ ಮಂತ್ರಿ ಜನ್ ಜಾತಿ ಆದಿವಾಸಿ ಮಹಾ ಅಭಿಯಾನ ಯೋಜನೆಯಡಿ ಕೇಂದ್ರ ಸರಕಾರದ 09 ಇಲಾಖೆಗಳ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಆಗಸ್ಟ್ 23 ರಿಂದ ಸೆಪ್ಟಂಬರ್ 10 ರ ವರೆಗೆ ಆಧಾರ್ ನೋಂದಣಿ, ಜನ್ ಧನ್ ಬ್ಯಾಂಕ್ ಖಾತೆ, ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್, ಜಾತಿ ಪ್ರಮಾಣ ಪತ್ರ, ಸಿಕಲ್ ಸೆಲ್ ಅನೇಮಿಯ, ಸ್ಕ್ರೀನಿಂಗ್, ಪಡಿತರ ಚೀಟಿ, ಪ್ರಧಾನ ಮಂತ್ರಿ ಮಾತೃ ವಂದನಾ ಕಾರ್ಯಕ್ರಮಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಇದರ ಪ್ರಯೋಜನವನ್ನು ಜಿಲ್ಲೆಯ ಕೊರಗ ಸಮುದಾಯದವರು ಪಡೆದುಕೊಳ್ಳಬಹುದಾಗಿದೆ.
PMJANMAN ಕಾರ್ಯಕ್ರಮದ ನೋಡೆಲ್ ಅಧಿಕಾರಿಗಳಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ಮಟ್ಟದಲ್ಲಿ ತಾಲೂಕು ಮಟ್ಟದ ನೋಡೆಲ್ ಅಧಿಕಾರಿಗಳನ್ನು ನೇಮಕ ಮಾಡಿದ್ದು, ಸದ್ರಿ ಅಧಿಕಾರಿಗಳು ಕಾರ್ಯಕ್ರಮದ ನೋಡೆಲ್ ಅಧಿಕಾರಿಗಳಾಗಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಯೋಜನಾ ಸಮನ್ವಯಾಧಿಕಾರಿಗಳ ಕಛೇರಿ, ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆ, ಜಿಲ್ಲಾ ಸಂಕೀರ್ಣ, ಬಿ ಬ್ಲಾಕ್, 2ನೇ ಮಹಡಿ, ಕೊಠಡಿ 310, ರಜತಾದ್ರಿ, ಮಣಿಪಾಲ, ಉಡುಪಿ, ದೂ.ಸಂಖ್ಯೆ: 0820-2574814 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.