Sunday, January 19, 2025
Sunday, January 19, 2025

ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳ ಉದ್ಘಾಟನೆ

ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳ ಉದ್ಘಾಟನೆ

Date:

ಉಡುಪಿ, ಆ.23: ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ- ಸಂಜೀವಿನಿ, ಜಿಲ್ಲಾ ಪಂಚಾಯತ್ ಉಡುಪಿ, ಪರ್ಯಾಯ ಶ್ರೀ ಪುತ್ತಿಗೆ ಮಠ ಉಡುಪಿ ಇವರ ಆಶಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯ ಮಾಸೋತ್ಸವ ಪ್ರಯುಕ್ತ ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟಕ್ಕೆ ಗೀತಾಮಂದಿರದಲ್ಲಿ ಚಾಲನೆ ಹಾಗೂ ರಾಜಾಂಗಣದಲ್ಲಿ ಇದರ ಉದ್ಘಾಟನೆಯನ್ನು ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಗೂ ಶ್ರೀ ಪುತ್ತಿಗೆ ಕಿರಿಯ ಶ್ರೀಪಾದರಾದ ಶ್ರೀ ಸುಶ್ರೀಂದ್ರ
ತೀರ್ಥ ಶ್ರೀಪಾದರು ನೆರವೇರಿಸಿದರು.

ಶಾಸಕ ಯಶ್ಪಾಲ್ ಸುವರ್ಣ, ಮಾಜಿ ಶಾಸಕ ಕೆ. ರಘುಪತಿ ಭಟ್, ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ, ಉದ್ಯಮಿಗಳಾದ ಹರಿಪ್ರಸಾದ್ಕ ರೈ, ಭುವನೇಂದ್ರ ಕಿದಿಯೂರು, ಸುರೇಂದ್ರ ಕಲ್ಯಾಣಪುರ್, ಪ್ರದೀಪ್ ಕಲ್ಕೂರ, ಪ್ರೇಮ್ ಮಿನೇಜಸ್, ಕಟಪಾಡಿ ಕಾಳಿಕಾಂಬಾ ದೇವಸ್ಥಾನದ ಧರ್ಮದರ್ಶಿ ಮುರಹರಿ ಆಚಾರ್ಯ, ಮಠದ ದಿವಾನರಾದ ನಾಗರಾಜ ಆಚಾರ್ಯ, ಸಂಜೀವಿನಿ ಯೋಜನೆಯ ಜಿಲ್ಲಾ ವ್ಯವಸ್ಥಾಪಕ ಅವಿನಾಶ್, ತಾಲೂಕು ವ್ಯವಸ್ಥಾಪಕಿ ಸುಜಾತಾ, ಪ್ರಶಾಂತ್, ಸವಿತಾ, ಬಬೀತಾ ಹಾಗೂ ಸಂಜೀವಿನಿ ಸ್ವಸಹಾಯ ಸಂಘಗಳ ಅಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಆಗಸ್ಟ್ 31ರ ವರೆಗೆ ನಡೆಯುವ ಈ ವಸ್ತು ಪ್ರದರ್ಶನದಲ್ಲಿ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ಸಂಜೀವಿನಿ ಮಹಿಳೆಯರ 23 ಮಳಿಗೆಗಳಿದ್ದು ಈ ಮಳಿಗೆಗಳಲ್ಲಿ ಟೆರೇಕೋಟಾ ವಸ್ತುಗಳು, ಕೃತಕ ಆಭರಣ, ಹ್ಯಾಂಡ್ ಮೇಡ್ ಬ್ಯಾಗ್, ಬಿದಿರಿನ ಬುಟ್ಟಿ, ತೆಂಗಿನ ಚಿಪ್ಪಿನ ವಿವಿಧ ಕಲಾಕೃತಿಗಳು, ಅಲಂಕಾರಿಕ ಹೂವಿನ ಗಿಡಗಳು, ಗೊಂಬೆಗಳು, ಕೈಮಗ್ಗ ಸೀರೆ, ಇತ್ಯಾದಿ ವಸ್ತುಗಳು ಲಭ್ಯವಿರಲಿವೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!