ಉಡುಪಿ, ಆ.23: ಕಾರ್ಕಳ ತಾಲೂಕಿನ ರೆಂಜಾಳ ಸರಕಾರಿ ಸಂಯುಕ್ತ ಪ್ರೌಢಶಾಲೆಯ ಆಂಗ್ಲಭಾಷಾ ಶಿಕ್ಷಕಿ ವಿಜಯಲಕ್ಷ್ಮಿ ಅವರು ಬೆಂಗಳೂರಿನಲ್ಲಿ ನಡೆದ ಸರಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟದ ಈಜು ಸ್ಪರ್ಧೆಯಲ್ಲಿ ಒಂದು ಚಿನ್ನ ಮತ್ತು ಎರಡು ಬೆಳ್ಳಿ ಪದಕಗಳನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 100 ಮೀಟರ್ ಬಟರ್ ಫ್ಲೈಯಲ್ಲಿ ಚಿನ್ನದ ಪದಕ, 100 ಮೀಟರ್ ಬ್ರೆಸ್ಟ್ ಸ್ಟ್ರೋಕ್ ಮತ್ತು 100 ಮೀಟರ್ ಬ್ಯಾಕ್ ಸ್ಟ್ರೋಕ್ ವಿಭಾಗಗಳಲ್ಲಿ ಅವರು ಬೆಳ್ಳಿಯ ಪದಕಗಳನ್ನು ಗೆದ್ದಿದ್ದಾರೆ. ರೆಂಜಾಳ ಸಂಯುಕ್ತ ಸರಕಾರಿ ಪ್ರೌಢಶಾಲೆಯ ಶಿಕ್ಷಕರು, ಎಸ್.ಡಿ.ಎಂ.ಸಿ, ಪೋಷಕರು ಮತ್ತು ಪೂರ್ವ ವಿದ್ಯಾರ್ಥಿಗಳು ಅವರನ್ನು ಅಭಿನಂದಿಸಿದ್ದಾರೆ.
ಈಜು ಸ್ಪರ್ಧೆ: ಶಿಕ್ಷಕಿ ವಿಜಯಲಕ್ಷ್ಮಿ ರಾಷ್ಟ್ರಮಟ್ಟಕ್ಕೆ

ಈಜು ಸ್ಪರ್ಧೆ: ಶಿಕ್ಷಕಿ ವಿಜಯಲಕ್ಷ್ಮಿ ರಾಷ್ಟ್ರಮಟ್ಟಕ್ಕೆ
Date: