ಉಡುಪಿ, ಆ.26: ಉಡುಪಿ ನಗರದ ಅಜ್ಜರಕಾಡುವಿನಲ್ಲಿ ಸೋಮವಾರ ಜಿಲ್ಲಾಮಟ್ಟದ ಅಧಿಕಾರಿಗಳ ಸಂಶೋಧನಾ ತರಬೇತಿ ಮತ್ತು ಕ್ರೀಡಾ ಸಂಕೀರ್ಣದ ನೂತನ ಕಟ್ಟಡ ನಿರ್ಮಾಣಕ್ಕೆ ಮಾಹೆಯ ಸಂಸ್ಥೆಯ ಅಧ್ಯಕ್ಷ ಡಾ, ರಂಜನ್ ಪೈ ಶಿಲಾನ್ಯಾಸ ನೆರವೇರಿಸಿದರು. ಉಡುಪಿ ಶಾಸಕ ಯಶ್‌ಪಾಲ್ ಎ ಸುವರ್ಣ, ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಕರಾವಳಿ ಕಾವಲು ಪಡೆಯ ಎಸ್‌ಪಿ ಮಿಥುನ್ ಹೆಚ್. ಎನ್., ಅಪರ ಜಿಲ್ಲಾಧಿಕಾರಿ ಮಮತಾದೇವಿ ಜಿ.ಎಸ್., ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಶನ್ ಕುಮಾರ್ ಶೆಟ್ಟಿ, ಮಾಹೆಯ ಕುಲಪತಿ ಡಾ. ಹೆಚ್.ಎಸ್ ಬಲ್ಲಾಳ್, ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ನ ಅಧ್ಯಕ್ಷ ಡಾ.ಜಿ.ಶಂಕರ್, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಅಜ್ಜರಕಾಡು: ಕ್ರೀಡಾ ಸಂಕೀರ್ಣದ ನೂತನ ಕಟ್ಟಡಕ್ಕೆ ಶಿಲಾನ್ಯಾಸ

ಅಜ್ಜರಕಾಡು: ಕ್ರೀಡಾ ಸಂಕೀರ್ಣದ ನೂತನ ಕಟ್ಟಡಕ್ಕೆ ಶಿಲಾನ್ಯಾಸ
Date: