ಉಡುಪಿ: ತೆಂಕನಿಡಿಯೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಥಮ ಬಿ.ಕಾಂ. ವಿದ್ಯಾರ್ಥಿ ಅಭಿಲಾಷ್ ಅವರು ಚಂಡೀಗಢದಲ್ಲಿ ನಡೆದ ಅಂತರ್ ವಿಶ್ವವಿದ್ಯಾನಿಲಯ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಪಡೆದಿದ್ದಾರೆ.
ಅವರು ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಿದ್ದರು. ಅವರನ್ನು ಕಾಲೇಜಿನ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶಾಸಕ ಕೆ. ರಘುಪತಿ ಭಟ್, ಪ್ರಾಂಶುಪಾಲ ಡಾ. ಗಣನಾಥ ಎಕ್ಕಾರು, ದೈಹಿಕ ಶಿಕ್ಷಣ ನಿರ್ದೇಶಕ ಡಾ. ರಾಮಚಂದ್ರ ಪಾಟ್ಕರ್ ಅಭಿನಂದಿಸಿದ್ದಾರೆ.