Thursday, September 19, 2024
Thursday, September 19, 2024

ಜಿಲ್ಲಾಮಟ್ಟದ ಮ್ಯಾರಥಾನ್: ನೋಂದಣಿಗೆ ಅವಕಾಶ

ಜಿಲ್ಲಾಮಟ್ಟದ ಮ್ಯಾರಥಾನ್: ನೋಂದಣಿಗೆ ಅವಕಾಶ

Date:

ಉಡುಪಿ, ಆ.28: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ, ಡಾ. ಜಿ.ಶಂಕರ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು (ಎನ್.ಎಸ್.ಎಸ್) ಅಜ್ಜರಕಾಡು, ಸರಕಾರಿ ಪ್ರಥಮ ದರ್ಜೆ ಕಾಲೇಜು ತೆಂಕನಿಡಿಯೂರು, ಜಿಲ್ಲಾ ಅಮೆಚುರ್ ಅಥ್ಲೆಟಿಕ್ಸ್ ಅಸೋಸಿಯೇಷನ್, ಸಾಯಿರಾಧಾ ಗ್ರೂಪ್, ರಾಜ್ ಫಿಶ್‌ಮಿಲ್ ಮತ್ತು ಆಯಿಲ್ ಕಂಪನಿ ಮಲ್ಪೆ, ಆದರ್ಶ ಆಸ್ಪತ್ರೆ ಉಡುಪಿ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಕುಂದಾಪುರ ಘಟಕ ಮತ್ತು ರೋಟರಿ ಕ್ಲಬ್ ಉಡುಪಿ ಮಿಡ್‌ಟೌನ್ ಇವರ ಸಂಯುಕ್ತ ಆಶ್ರಯದಲ್ಲಿ ಹೆಚ್‌ಐವಿ/ ಏಡ್ಸ್ ಕುರಿತು ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಿಲ್ಲಾ ಮಟ್ಟದ 5 ಕಿ.ಮೀ ಮ್ಯಾರಥಾನ್ ಕಾರ್ಯಕ್ರಮವನ್ನು ಆಗಸ್ಟ್ 31 ರಂದು ಬೆಳಗ್ಗೆ 7 ಗಂಟೆಗೆ ನಗರದ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದ ಮುಂಭಾಗದಿಂದ ಆಯೋಜಿಸಲಾಗಿದೆ.

17 ರಿಂದ 25 ವರ್ಷದೊಳಗಿನ ಜಿಲ್ಲೆಯ ಕಾಲೇಜು ವಿದ್ಯಾರ್ಥಿಗಳು ಪ್ರತಿ ಕಾಲೇಜಿನಿಂದ ಗರಿಷ್ಠ 4 (ಮಹಿಳೆ-2, ಪುರುಷ-2) ಮಂದಿ ಮಾತ್ರ ಮ್ಯಾರಥಾನ್‌ನಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದ್ದು, ಮ್ಯಾರಥಾನ್‌ನಲ್ಲಿ ಭಾಗವಹಿಸಲು ಇಚ್ಛಿಸುವ ವಿದ್ಯಾರ್ಥಿಗಳು ಗೂಗಲ್ ಆನ್‌ಲೈನ್ ಲಿಂಕ್ https://forms.gle/pbVz49g81dz61cUU7 ಮೂಲಕ ಆಗಸ್ಟ್ 30 ರ ಸಂಜೆ 4 ಗಂಟೆಯ ಒಳಗಾಗಿ ನೋಂದಾಯಿಸಿಕೊಳ್ಳಬಹುದಾಗಿದೆ. ಜಿಲ್ಲಾ ಮಟ್ಟದ ಸ್ಪರ್ಧೆಯ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಲಾಗುವುದು. ಜಿಲ್ಲಾ ಮಟ್ಟದ 5 ಕಿ.ಮೀ ಮ್ಯಾರಥಾನ್‌ನಲ್ಲಿ ಪ್ರಥಮ ಸ್ಥಾನ ಪಡೆದವರು ರಾಜ್ಯ ಮಟ್ಟದಲ್ಲಿ ಹಾಗೂ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ವಿಜೇತರು ರಾಷ್ಟ್ರಮಟ್ಟದಲ್ಲಿ ಭಾಗವಹಿಸಲು ಅವಕಾಶವಿದೆ. ಹೆಚ್ಚಿನ ಮಾಹಿತಿಗಾಗಿ ಮಹಾಬಲೇಶ್ವರ, ಜಿಲ್ಲಾ ವ್ಯವಸ್ಥಾಪಕರು, ಡ್ಯಾಪ್ಕೂ ಮೊ.ನಂ:9480579398, 9449846988 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...

ತಾತ್ಕಾಲಿಕ ಸುಡುಮದ್ದು ಮಾರಾಟ ಪರವಾನಿಗೆ ಪಡೆಯಲು ಅರ್ಜಿ ಆಹ್ವಾನ

ಉಡುಪಿ, ಸೆ.19: ದೀಪಾವಳಿ ಹಬ್ಬದ ಸಂದರ್ಭದಲ್ಲಿ (ಅಕ್ಟೋಬರ್ 30 ರಿಂದ ನವೆಂಬರ್...

ಪವರ್ ಲಿಫ್ಟಿಂಗ್: ವೈಷ್ಣವಿ ಖಾರ್ವಿಗೆ ಬೆಳ್ಳಿ ಪದಕ

ಉಡುಪಿ, ಸೆ.19: ರಾ ಫಿಟ್ನೆಸ್ ಸಾಲಿಗ್ರಾಮ ಇವರ ವತಿಯಿಂದ ಸಾಲಿಗ್ರಾಮದ ಮೊಗವೀರ...
error: Content is protected !!